
ಮುಂಬೈ(ಮಾ.15): ಆಸ್ಪ್ರೇಲಿಯಾ ವಿರುದ್ಧದ ಮಹತ್ವದ ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿರುವ ಟೀಂ ಇಂಡಿಯಾ, ಇನ್ನು ಪ್ರವಾಸಿ ತಂಡದ ವಿರುದ್ಧ ಏಕದಿನ ಸವಾಲಿಗೆ ರೆಡಿಯಾಗಲಿದೆ. ಭಾರತ-ಆಸ್ಪ್ರೇಲಿಯಾ ನಡುವೆ ಮಾ.17ರಿಂದ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು, ಕೆಲ ಆಟಗಾರರು ಈಗಾಗಲೇ ಅಹಮದಾಬಾದ್ನಿಂದ ಮುಂಬೈಗೆ ಆಗಮಿಸಿದ್ದಾರೆ.
ಮಂಗಳವಾರ ಮುಂಜಾನೆ ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ರವೀಂದ್ರ ಜಡೇಜಾ ಸೇರಿದಂತೆ ಪ್ರಮುಖರು ಮುಂಬೈಗೆ ಬಂದಿಳಿದಿದ್ದು, ಬುಧವಾರದಿಂದ ಅಭ್ಯಾಸ ಆರಂಭಿಸಲಿದ್ದಾರೆ. ಇತರೆ ಆಟಗಾರರು ಬುಧವಾರ ತಂಡ ಕೂಡಿಕೊಳ್ಳುವ ನಿರೀಕ್ಷೆಯಿದೆ. ರೋಹಿತ್ ಶರ್ಮಾ ವೈಯಕ್ತಿಕ ಕಾರಣಕ್ಕೆ ಮೊದಲ ಪಂದ್ಯಕ್ಕೆ ಗೈರಾಗಲಿದ್ದು, ಅವರ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ತಂಡ ಮುನ್ನಡೆಸಲಿದ್ದಾರೆ. ಉಳಿದೆರಡು ಪಂದ್ಯಗಳಿಗೆ ರೋಹಿತ್ ತಂಡಕ್ಕೆ ಮರಳಲಿದ್ದಾರೆ. ರವೀಂದ್ರ ಜಡೇಜಾ ದೀರ್ಘ ಕಾಲದ ಬಳಿಕ ಮತ್ತೆ ಏಕದಿನ ಆಡಲಿದ್ದು, ಜಯ್ದೇವ್ ಉನಾದ್ಕತ್ ಕೂಡಾ ತಂಡದಲ್ಲಿದ್ದಾರೆ.
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮಾರ್ಚ್ 17ರಿಂದ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಮೊದಲ ಏಕದಿನ ಪಂದ್ಯಕ್ಕೆ ಮುಂಬೈನ ವಾಂಖೇಡೆ ಮೈದಾನ ಆತಿಥ್ಯ ವಹಿಸಿದರೆ, ಮಾರ್ಚ್ 19ರಂದು ನಡೆಯಲಿರುವ ಎರಡನೇ ಪಂದ್ಯಕ್ಕೆ ವಿಶಾಖಪಟ್ಟಣಂ ಸಾಕ್ಷಿಯಾಗಲಿದೆ. ಇನ್ನು ಮೂರನೇ ಹಾಗೂ ಕೊನೆಯ ಪಂದ್ಯವು ಮಾರ್ಚ್ 22ರಂದು ಚೆನ್ನೈನ ಎಂ ಎ ಚಿದಂಬರಂ ಸ್ಟೇಡಿಯಂ ಆತಿಥ್ಯ ವಹಿಸಲಿದೆ. 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಆಡಲಿರುವ ಕೊನೆಯ ಅಂತಾರಾಷ್ಟ್ರೀಯ ಈ ಸರಣಿ ಇದಾಗಲಿದೆ.
ಐಪಿಎಲ್ ಆರಂಭಕ್ಕೂ ಮುನ್ನ ಕೆಕೆಆರ್ ತಂಡಕ್ಕೆ ಬಿಗ್ ಶಾಕ್, ನಾಯಕ ಶ್ರೇಯಸ್ ಅಯ್ಯರ್ ಬಹುತೇಕ ಔಟ್!
ಶ್ರೇಯಸ್ ಅಯ್ಯರ್ ಬದಲು ಸಂಜು ಸ್ಯಾಮ್ಸನ್?
ಬೆನ್ನು ನೋವಿನ ಸಮಸ್ಯೆಗೆ ತುತ್ತಾಗಿರುವ ಶ್ರೇಯಸ್ ಅಯ್ಯರ್ ಏಕದಿನ ಸರಣಿಗೆ ಗೈರಾಗಲಿದ್ದು, ಅವರ ಬದಲು ಸಂಜು ಸ್ಯಾಮ್ಸನ್ರನ್ನು ತಂಡಕ್ಕೆ ಸೇರ್ಪಡೆಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೆಲ ವರದಿಗಳ ಪ್ರಕಾರ ಬಿಸಿಸಿಐ ಶ್ರೇಯಸ್ ಅಯ್ಯರ್ ಬದಲಿ ಆಟಗಾರನಾಗಿ ಯಾರನ್ನೂ ಸೇರಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ಗೊತ್ತಾಗಿದೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯಕ್ಕೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (WK), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್ , ಯಜುವೇಂದ್ರ ಚಹಾಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜೈದೇವ್ ಉನಾದ್ಕತ್.
ಪ್ಯಾಟ್ ಕಮಿನ್ಸ್ ಅಲಭ್ಯ: ಸ್ಟೀವ್ ಸ್ಮಿತ್‌ಗೆ ನಾಯಕತ್ವ
ಪ್ಯಾಟ್ ಕಮಿನ್ಸ್ ಏಕದಿನ ಸರಣಿಗೂ ಗೈರಾಗಲಿದ್ದು, ಆಸ್ಪ್ರೇಲಿಯಾ ತಂಡವನ್ನು ಸ್ಟೀವ್ ಸ್ಮಿತ್ ಮುನ್ನಡೆಸಲಿದ್ದಾರೆ. 2ನೇ ಟೆಸ್ಟ್ ಪಂದ್ಯದ ಬಳಿಕ ತಮ್ಮ ತಾಯಿಯ ಅನಾರೋಗ್ಯ ಹಿನ್ನೆಲೆಯಲ್ಲಿ ಕಮಿನ್ಸ್ ತವರಿಗೆ ಹಿಂದಿರುಗಿದ್ದರು. 4ನೇ ಟೆಸ್ಟ್ ವೇಳೆ ಅವರ ತಾಯಿ ನಿಧನರಾಗಿದ್ದು, ಹೀಗಾಗಿ ಏಕದಿನ ಸರಣಿಗಾಗಿ ಅವರು ಭಾರತಕ್ಕೆ ಮರಳುತ್ತಿಲ್ಲ. ಅವರ ಅನುಪಸ್ಥಿತಿಯಲ್ಲಿ ಸ್ಮಿತ್ ನಾಯಕನಾಗಿ ನೇಮಕಗೊಂಡಿದ್ದಾರೆ. ಆದರೆ ಕಮಿನ್ಸ್ ಬದಲಿಗರಾಗಿ ಯಾರನ್ನೂ ತಂಡಕ್ಕೆ ಸೇರ್ಪಡೆಗೊಳಿಸಿಲ್ಲ. ಇದೇ ವೇಳೆ, ಟೆಸ್ಟ್ ಸರಣಿ ವೇಳೆ ಗಾಯಗೊಂಡು ತವರಿಗೆ ಮರಳಿದ್ದ ಡೇವಿಡ್ ವಾರ್ನರ್ ತಂಡಕ್ಕೆ ಮರಳಲಿದ್ದಾರೆ.
ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ ಹೀಗಿದೆ ನೋಡಿ:
ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ (ನಾಯಕ), ಶಾನ್ ಅಬ್ಬೋಟ್, ಆಸ್ಟನ್ ಏಗರ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಜೋಶ್ ಇಂಗ್ಲಿಶ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಶ್, ಗ್ಲೆನ್ ಮ್ಯಾಕ್ಸ್‌ವೆಲ್, ಜೇ ರಿಚರ್ಡ್‌ಸನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಆಡಂ ಜಂಪಾ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.