ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ

By Suvarna NewsFirst Published Jan 17, 2020, 1:10 PM IST
Highlights

ಭಾರತ-ಆಸ್ಟ್ರೇಲಿಯಾ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ದುಕೊಂಡಿದೆ. ಭಾರತ ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..

ರಾಜ್‌ಕೋಟ್(ಜ.17): ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ದುಕೊಂಡಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಮುಗ್ಗರಿಸಿ ಹಿನ್ನಡೆಯಲ್ಲಿರುವ ಟೀಂ ಇಂಡಿಯಾ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

Australia wins the toss and elects to bowl first in the 2nd ODI against . pic.twitter.com/VJk8YB30P7

— BCCI (@BCCI)

ರಾಜ್‌ಕೋಟ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಮುಖ ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿದೆ. ಗಾಯದ ಸಮಸ್ಯೆಯಿಂದ ಎರಡನೇ ಪಂದ್ಯಕ್ಕೆ ರಿಷಭ್ ಪಂತ್ ಅಲಭ್ಯರಾದ ಹಿನ್ನಲೆಯಲ್ಲಿ ಕೆ.ಎಲ್ ರಾಹುಲ್ ವಿಕೆಟ್ ಕೀಪಿಂಗ್ ಪಾತ್ರವನ್ನು ನಿಭಾಯಿಸಲಿದ್ದಾರೆ.

ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ರೆಡಿಯಾದ ಟೀಂ ಇಂಡಿಯಾ

ಪ್ರಮುಖವಾಗಿ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಪಂತ್ ಬದಲಿಗೆ ಮನೀಶ್ ಪಾಂಡೆ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಇನ್ನು ಶಾರ್ದೂಲ್ ಠಾಕೂರ್ ಬದಲಿಗೆ ನವದೀಪ್ ಸೈನಿ ತಂಡ ಕೂಡಿಕೊಂಡಿದ್ದಾರೆ. ಇನ್ನು ಆಸ್ಟ್ರೇಲಿಯಾ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ತಂಡಗಳು ಹೀಗಿವೆ:

ಭಾರತ:

2nd ODI. India XI: R Sharma, S Dhawan, KL Rahul, V Kohli, S Iyer, M Pandey, R Jadeja, K Yadav, M Shami, N Saini, J Bumrah https://t.co/v6DBzYXZJU

— BCCI (@BCCI)

ಆಸ್ಟ್ರೇಲಿಯಾ:

2nd ODI. Australia XI: A Finch, D Warner, M Labuschagne, S Smith, A Carey, A Turner, A Agar, P Cummins, M Starc, K Richardson, A Zampa https://t.co/v6DBzYXZJU

— BCCI (@BCCI)

 

click me!