
ಸಿಡ್ನಿ(ಡಿ.07): ಏಕದಿನ ಸರಣಿಯ ಮೊದಲೆರಡು ಪಂದ್ಯಗಳನ್ನು ಸೋಲುವ ಮೂಲಕ ಸರಣಿ ಕೈಚೆಲ್ಲಿದ್ದ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಇದಾದ ಬಳಿಕ ಕೊನೆಯ ಏಕದಿನ ಪಂದ್ಯ ಹಾಗೂ ಟಿ20 ಸರಣಿಯ ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಅವರದ್ದೇ ನೆಲದಲ್ಲಿ ತಿರುಗೇಟು ನೀಡುವಲ್ಲಿ ಭಾರತ ಯಶಸ್ವಿಯಾಗಿದೆ.
ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ್ದ 195 ರನ್‌ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಉತ್ತಮ ಆರಂಭವನ್ನೇ ಪಡೆಯಿತು. ಶಿಖರ್ ಧವನ್(52) ಹಾಗೂ ವಿರಾಟ್ ಕೊಹ್ಲಿ(40) ಬ್ಯಾಟಿಂಗ್‌ನಲ್ಲಿ ಆಸರೆಯಾದರು. ಇದರ ಹೊರತಾಗಿಯೂ ಟೀಂ ಇಂಡಿಯಾ ಗೆಲ್ಲಲು ಕೊನೆಯ 4 ಓವರ್‌ನಲ್ಲಿ 46 ರನ್‌ಗಳ ಅಗತ್ಯವಿತ್ತು. ಈ ವೇಳೆ ವಿಸ್ಪೋಟಕ ಬ್ಯಾಟಿಂಗ್ ನಡೆಸಿದ ಹಾರ್ದಿಕ್ ಪಾಂಡ್ಯ ಕೇವಲ 22 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಜೇಯ 42 ರನ್ ಚಚ್ಚುವ ಮೂಲಕ ಇನ್ನೂ 2 ಎಸೆತಗಳು ಬಾಕಿ ಇರುವಂತೆಯೇ ತಂಡಕ್ಕೆ ರೋಚಕ ಗೆಲುವು ತಂದಿತ್ತರು. ಈ ಗೆಲುವಿನೊಂದಿಗೆ 3 ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಯಿತು.
INDvAUS: 2ನೇ ಟಿ20 ಪಂದ್ಯದಲ್ಲಿ ಭಾರತಕ್ಕೆ ರೋಚಕ ಗೆಲುವು; ಸರಣಿ ಕೈವಶ!
ಹಾರ್ಡ್ ಹಿಟ್ಟರ್ ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಮ್ಯಾಚ್ ಫಿನಿಶಿಂಗ್ ಬ್ಯಾಟಿಂಗ್‌ಗೆ ಕ್ರಿಕೆಟ್ ಅಭಿಮಾನಿಗಳಿಂದ ಹಿಡಿದು ಕ್ರಿಕೆಟ್ ಪಂಡಿತರವರೆಗೆ ಅಭಿನಂದನೆಗಳ ಸುರಿಮಳೆಯೇ ಹರಿದು ಬಂದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.