ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ

By Suvarna NewsFirst Published Dec 8, 2020, 1:19 PM IST
Highlights

ಭಾರತ-ಆಸ್ಟ್ರೇಲಿಯಾ ನಡುವಿನ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಸಿಡ್ನಿ(ಡಿ.08): ಭಾರತ-ಆಸ್ಟ್ರೇಲಿಯಾ ನಡುವಿನ ಸೀಮಿತ ಓವರ್‌ಗಳ ಸರಣಿಯ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಕಳೆದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಆಸ್ಟ್ರೇಲಿಯಾ ನಾಯಕ ಆ್ಯರೋನ್ ಫಿಂಚ್ ತಂಡ ಕೂಡಿಕೊಂಡಿದ್ದಾರೆ. ಸ್ಟೋಯ್ನಿಸ್ ಬದಲಿಗೆ ಫಿಂಚ್ ಆಸ್ಟ್ರೇಲಿಯಾ ತಂಡ ಕೂಡಿಕೊಂಡಿದ್ದು, ಮ್ಯಾಥ್ಯೂ ವೇಡ್ ಜತೆಗೆ ಇನಿಂಗ್ಸ್‌ ಆರಂಭಿಸಲಿದ್ದಾರೆ. ಇನ್ನು ಭಾರತ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

India will bowl first in the final T20I ☝️

Aaron Finch is back for Australia. Can he lead them to victory? pic.twitter.com/vd4tid769B

— ICC (@ICC)

ಈಗಾಗಲೇ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಮೊದಲೆರಡು ಪಂದ್ಯಗಳನ್ನು ಗೆಲ್ಲುವುದರ ಮೂಲಕ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿದ್ದು, ಗೆಲುವಿನ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದೆ. ಇನ್ನು ಫಿಂಚ್ ನೇತೃತ್ವದ ಆಸ್ಟ್ರೇಲಿಯಾ ಕೊನೆಯ ಪಂದ್ಯವನ್ನು ಗೆಲ್ಲುವುದರ ಮೂಲಕ ಭಾರತಕ್ಕೆ ತಿರುಗೇಟು ನೀಡುವ ಲೆಕ್ಕಾಚಾರದಲ್ಲಿದೆ.

ತಂಡಗಳು ಹೀಗಿವೆ:

ಭಾರತ:

3rd T20I. India XI: S Dhawan, KL Rahul, V Kohli, S Iyer, S Samson, H Pandya, S Thakur, W Sundar, D Chahar, Y Chahal, T Natarajan https://t.co/5obpq86yHe

— BCCI (@BCCI)

ಆಸ್ಟ್ರೇಲಿಯಾ:

3rd T20I. Australia XI: A Finch, M Wade, S Smith, G Maxwell, M Henriques, D Short, D Sams, S Abbott, A Tye, M Swepson, A Zampa https://t.co/5obpq86yHe

— BCCI (@BCCI)
click me!