ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯ ಹೊಸ ವೇಳಾಪಟ್ಟಿ ಪ್ರಕಟ: ಇಷ್ಟು ಗಂಟೆಗೆ ಪಂದ್ಯ ಆರಂಭ!

By Naveen Kodase  |  First Published Nov 14, 2024, 5:58 PM IST

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳಾಪಟ್ಟಿ ಪ್ರಕಟವಾಗಿದೆ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ ನೋಡಿ


ಪರ್ತ್‌: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಬಹುನಿರೀಕ್ಷಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಇದೇ ನವೆಂಬರ್ 22ರಿಂದ ಆರಂಭವಾಗಲಿದೆ. ಭಾರತ ತಂಡವು ಈಗಾಗಲೇ ಕಾಂಗರೂ ನಾಡಿಗೆ ಕಾಲಿಟ್ಟಿದ್ದು, ನೆಟ್ಸ್‌ನಲ್ಲಿ ಭರ್ಜರಿಯಾಗಿಯೇ ಅಭ್ಯಾಸ ನಡೆಸುತ್ತಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವು ನವೆಂಬರ್ 22ರಿಂದ ಪರ್ತ್‌ನಲ್ಲಿ ಆರಂಭವಾಗಲಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳಾಪಟ್ಟಿಯ ಕುರಿತಂತೆ ಹಲವು ಮಂದಿಗೆ ನಾನಾ ಗೊಂದಲಗಳಿವೆ. ಬನ್ನಿ ನಾವಿಂದು ಈ ಟೆಸ್ಟ್ ಸರಣಿಯ ಸಂಪೂರ್ಣ ವೇಳಾಪಟ್ಟಿ ಹಾಗೂ ಎಷ್ಟು ಗಂಟೆಗೆ ಯಾವ ಟೆಸ್ಟ್ ಪಂದ್ಯ ಆರಂಭವಾಗಲಿದೆ ಎನ್ನುವುದರ ಸಂಪೂರ್ಣ ಮಾಹಿತಿ ನೀಡುತ್ತೇವೆ.

Tap to resize

Latest Videos

ಬಾರ್ಡರ್-ಗವಾಸ್ಕರ್ ಟ್ರೋಫಿ: ಭಾರತ ಎದುರಿನ ಮೊದಲ ಟೆಸ್ಟ್‌ಗೆ ಬಲಿಷ್ಠ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಕಟ!

ನವೆಂಬರ್ 22ರಿಂದ 26ರ ವರೆಗೆ ನಡೆಯಲಿರುವ ಪರ್ತ್ ಟೆಸ್ಟ್ ಪಂದ್ಯವು ಭಾರತೀಯ ಕಾಲಮಾನ ಬೆಳಗ್ಗೆ 7.50ಕ್ಕೆ ಆರಂಭವಾಗಲಿದೆ. ಇನ್ನು ಈ ಪಂದ್ಯದ ಟಾಸ್ ಭಾರತೀಯ ಕಾಲಮಾನ ಬೆಳಗ್ಗೆ 7.20ಕ್ಕೆ ನಡೆಯಲಿದೆ. ಇದಾದ ನಂತರ ಡಿಸೆಂಬರ್ 06ರಿಂದ 10ರ ವರೆಗೆ ಅಡಿಲೇಡ್‌ನಲ್ಲಿ ನಡೆಯಲಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯವು ಭಾರತೀಯ ಕಾಲಮಾನ ಬೆಳಗ್ಗೆ 9.30ರಿಂದ ಆರಂಭವಾಗಲಿದೆ. ಇನ್ನು ಇದಾದ ಬಳಿಕ ಭಾರತ ಹಾಗೂ ಆಸೀಸ್ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೆ ಬ್ರಿಸ್ಬೇನ್‌ ಆತಿಥ್ಯ ವಹಿಸಲಿದೆ. ಬ್ರಿಸ್ಬೇನ್‌ನ ಗಾಬಾದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯವು ಡಿಸೆಂಬರ್ 14ರಿಂದ 18ರ ವರೆಗೆ ನಡೆಯಲಿದ್ದು, ಈ ಪಂದ್ಯವು ಭಾರತೀಯ ಕಾಲಮಾನ ಬೆಳಗ್ಗೆ 5.50ಕ್ಕೆ ಆರಂಭವಾಗಲಿದೆ. ಇನ್ನು ಡಿಸೆಂಬರ್ 26ರಿಂದ ಆರಂಭವಾಗಲಿರುವ ಬಾಕ್ಸಿಂಗ್‌ ಡೇ ಟೆಸ್ಟ್ ಪಂದ್ಯಕ್ಕೆ ಐತಿಹಾಸಿಕ ಮೆಲ್ಬರ್ನ್ ಸ್ಟೇಡಿಯಂ ಆತಿಥ್ಯ ವಹಿಸಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ಬೆಳಗ್ಗೆ 5 ಗಂಟೆಯಿಂದ ಆರಂಭವಾಗಲಿದೆ. ಇನ್ನು ಜನವರಿ 03ರಿಂದ ಆರಂಭವಾಗಲಿರುವ ಕೊನೆಯ ಹಾಗೂ 5ನೇ ಟೆಸ್ಟ್ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಮೈದಾನ ಆತಿಥ್ಯ ವಹಿಸಲಿದೆ. ಈ ಪಂದ್ಯವು ಕೂಡಾ ಭಾರತೀಯ ಕಾಲಮಾನ ಬೆಳಗ್ಗೆ 5 ಗಂಟೆಯಿಂದ ಆರಂಭವಾಗಲಿದೆ.

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಸರಣಿಗೆ ತಂಡ: 

ರೋಹಿತ್‌ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್‌, ಅಭಿಮನ್ಯು ಈಶ್ವರನ್‌, ಶುಭ್‌ಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಕೆ.ಎಲ್‌. ರಾಹುಲ್‌, ರಿಷಭ್‌ ಪಂತ್‌, ಸರ್ಫರಾಜ್‌ ಖಾನ್‌, ಧೃವ್‌ ಜುರೆಲ್‌, ಆರ್.ಅಶ್ವಿನ್‌, ರವೀಂದ್ರ ಜಡೇಜಾ, ಮೊಹಮ್ಮದ್‌ ಸಿರಾಜ್‌, ಆಕಾಶ್‌ದೀಪ್‌, ಪ್ರಸಿದ್ಧ್‌ ಕೃಷ್ಣ, ಹರ್ಷಿತ್‌ ರಾಣಾ, ನಿತೀಶ್‌ ರೆಡ್ಡಿ, ವಾಷಿಂಗ್ಟನ್‌ ಸುಂದರ್‌.

ಪರ್ತ್ ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡ ಹೀಗಿದೆ ನೋಡಿ:

ಪ್ಯಾಟ್ ಕಮಿನ್ಸ್(ನಾಯಕ), ಸ್ಕಾಟ್ ಬೊಲೆಂಡ್, ಅಲೆಕ್ಸ್ ಕ್ಯಾರಿ, ಜೋಶ್ ಹೇಜಲ್‌ವುಡ್, ಟ್ರ್ಯಾವಿಸ್ ಹೆಡ್, ಜೋಶ್ ಇಂಗ್ಲಿಶ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ನೇಥನ್ ಲಯನ್, ಮಿಚೆಲ್ ಮಾರ್ಷ್, ನೇಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್.

click me!