
ನವದೆಹಲಿ(ಮಾ.01): ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧ ವಾತಾವರಣ ಇರುವ ಕಾರಣ, ಭದ್ರತಾ ದೃಷ್ಟಿಯಿಂದ ಮೊಹಾಲಿ ಹಾಗೂ ನವದೆಹಲಿಯಲ್ಲಿ ನಡೆಯಬೇಕಿರುವ ಭಾರತ-ಆಸ್ಪ್ರೇಲಿಯಾ ಏಕದಿನ ಪಂದ್ಯಗಳನ್ನು ಬೆಂಗಳೂರು, ಕೋಲ್ಕತಾಕ್ಕೆ ಸ್ಥಳಾಂತರಿಸಲು ಬಿಸಿಸಿಐ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಹೈದರಾಬಾದ್ ಪಂದ್ಯಕ್ಕೆ ಹೆಚ್ಚಿನ ಭದ್ರತೆ!
ಮಾ.10ರಂದು ಮೊಹಾಲಿಯಲ್ಲಿ 4ನೇ ಹಾಗೂ ಮಾ.13ರಂದು ನವದೆಹಲಿಯಲ್ಲಿ 5ನೇ ಏಕದಿನ ಪಂದ್ಯ ನಿಗದಿಯಾಗಿದೆ. ಮೊಹಾಲಿಯ ಕ್ರೀಡಾಂಗಣದ ಪಕ್ಕದಲ್ಲೇ ಭಾರತೀಯ ವಾಯು ಸೇನೆ ನೆಲೆ ಇರುವ ಕಾರಣ, ಅಗತ್ಯ ಸಮಯದಲ್ಲಿ ಯುದ್ಧ ವಿಮಾನಗಳ ಹಾರಾಟಕ್ಕೆ ತೊಂದರೆಯಾಗಬಾರದು ಎನ್ನುವ ದೃಷ್ಟಿಯಿಂದ ಪಂದ್ಯ ಸ್ಥಳಾಂತರ ಮಾಡಲು ನಿರ್ಧರಿಸಲಾಗುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ: ಪಾಕ್ ಪಂದ್ಯ ಬಹಿಷ್ಕಾರ - ಮೌನ ಮುರಿದ ಕಪಿಲ್ ದೇವ್!
ನವದೆಹಲಿಯಲ್ಲಿ ದೊಡ್ಡ ಮಟ್ಟದ ಸಭೆಗಳು ನಡೆಯುವ ನಿರೀಕ್ಷೆ ಇದ್ದು, ಭದ್ರತಾ ಸಮಸ್ಯೆ ಎದುರಾಗಬಾರದು ಎನ್ನುವ ಕಾರಣಕ್ಕೆ ಇಲ್ಲಿನ ಪಂದ್ಯವನ್ನೂ ಸ್ಥಳಾಂತರಿಸಲು ಚರ್ಚೆ ನಡೆಸಲಾಗುತ್ತಿದೆ. ಕೆಎಸ್‌ಸಿಎ ಹಾಗೂ ಬಂಗಾಳ ಕ್ರಿಕೆಟ್ ಸಂಸ್ಥೆಗಳಿಗೆ ಪಂದ್ಯ ಆತಿಥ್ಯಕ್ಕೆ ಸಿದ್ಧತೆ ನಡೆಸಿಕೊಳ್ಳಲು ಬಿಸಿಸಿಐ ಸೂಚಿಸಿದೆ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.