Ind vs Aus: ಇಂಡೋ-ಆಸೀಸ್‌ ಪಂದ್ಯ, ಅಭಿಮಾನಿಗಳು ತಿಳಿದಿರಬೇಕಾದ ಇಂಟ್ರೆಸ್ಟಿಂಗ್ ಸಂಗತಿಗಳಿವು

By Naveen KodaseFirst Published Sep 17, 2022, 4:29 PM IST
Highlights

* ಭಾರತ-ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಟಿ20 ಸರಣಿ ಸೆಪ್ಟೆಂಬರ್ 20ರಿಂದ ಆರಂಭ
* ಸೆಪ್ಟೆಂಬರ್ 20, 23 ಹಾಗೂ 25ರಂದು ನಡೆಯಲಿದೆ 3 ಪಂದ್ಯಗಳ ಸರಣಿ
* ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ನಡೆಯಲಿರುವ ಮಹತ್ವದ ಸರಣಿ

ಬೆಂಗಳೂರು(ಸೆ.17): ಭಾರತ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಚುಟುಕು ಕ್ರಿಕೆಟ್ ಸರಣಿಯನ್ನಾಡಲು ಭಾರತಕ್ಕೆ ಬಂದಿಳಿದಿದೆ. ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ತಾಲೀಮು ನಡೆಸಲು ಉಭಯ ತಂಡಗಳು ಸಜ್ಜಾಗಿವೆ. ಈ ಸಂದರ್ಭದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಸರಣಿ ಯಾವಾಗ? ಎಲ್ಲಿ ಜರುಗಲಿದೆ. ಎರಡು ತಂಡಗಳ ಸಂಪೂರ್ಣ ಮಾಹಿತಿ, ಯಾವ ಚಾನೆಲ್‌ನಲ್ಲಿ ಪಂದ್ಯ ವೀಕ್ಷಿಸಬಹುದು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ..

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಸೆಪ್ಟೆಂಬರ್ 20, 23 ಹಾಗೂ 25ರಂದು ನಡೆಯಲಿದೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸರಿಸುಮಾರು ಒಂದೂವರೆ ವರ್ಷಗಳ ಬಳಿಕ ಟಿ20 ಕ್ರಿಕೆಟ್‌ನಲ್ಲಿ ಮುಖಮುಖಿಯಾಗುತ್ತಿವೆ. ಈ ಹಿಂದೆ 2020ರ ಡಿಸೆಂಬರ್‌ನಲ್ಲಿ ಕೊನೆಯ ಬಾರಿಗೆ ಟಿ20 ಸರಣಿಯಲ್ಲಿ ಕೊನೆಯ ಬಾರಿಗೆ ಸೆಣಸಾಟ ನಡೆಸಿದ್ದವು.

ಭಾರತ - ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಟಿ20 ಸರಣಿಯ ವೇಳಾಪಟ್ಟಿ

ಸೆಪ್ಟೆಂಬರ್ 20- ಮೊದಲ ಟಿ20 ಪಂದ್ಯ - ಮೊಹಾಲಿ - ಸಂಜೆ 7.30 PM
ಸೆಪ್ಟೆಂಬರ್ 23 - ಎರಡನೇ ಟಿ20 ಪಂದ್ಯ - ನಾಗ್ಪುರ - ಸಂಜೆ 7.30 PM
ಸೆಪ್ಟೆಂಬರ್ 25 - ಮೂರನೇ ಟಿ20 ಪಂದ್ಯ - ಹೈದರಾಬಾದ್ - ಸಂಜೆ 7.30 PM

ಟೀಂ ಇಂಡಿಯಾ ಎದುರಿನ ಸರಣಿಗೂ ಮುನ್ನ ಆಸ್ಟ್ರೇಲಿಯಾಗೆ ಬಿಗ್ ಶಾಕ್‌; ಮೂವರು ಸ್ಟಾರ್ ಆಟಗಾರರು ಭಾರತ ಪ್ರವಾಸದಿಂದ ಔಟ್..!

ಟಿ20 ಸರಣಿಗೆ ಉಭಯ ತಂಡಗಳು ಹೀಗಿವೆ ನೋಡಿ

ಭಾರತ ಕ್ರಿಕೆಟ್ ತಂಡ:

ರೋಹಿತ್ ಶರ್ಮಾ(ನಾಯಕ), ಕೆ ಎಲ್ ರಾಹುಲ್(ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹರ್, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾ ಕ್ರಿಕೆಟ್ ತಂಡ: 

ಆ್ಯರೋನ್ ಫಿಂಚ್(ನಾಯಕ), ಜೋಶ್ ಇಂಗ್ಲಿಶ್, ಸ್ಟೀವ್ ಸ್ಮಿತ್, ಆಸ್ಟನ್ ಏಗರ್, ಶಾನ್ ಅಬ್ಬೋಟ್, ಟಿಮ್ ಡೇವಿಡ್, ಪ್ಯಾಟ್ ಕಮಿನ್ಸ್‌, ನೇಥನ್ ಎಲ್ಲೀಸ್, ಕ್ಯಾಮರೋನ್ ಗ್ರೀನ್, ಜೋಶ್ ಹೇಜಲ್‌ವುಡ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್‌ಸನ್, ಡೇನಿಯಲ್ ಸ್ಯಾಮ್ಸ್‌, ಮ್ಯಾಥ್ಯೂ ವೇಡ್, ಆಡಂ ಜಂಪಾ.

ನೇರ ಪ್ರಸಾರ: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದ್ದು, ಈ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್‌ ನೆಟ್‌ವರ್ಕ್‌ನಲ್ಲಿ ನೇರಪ್ರಸಾರಗೊಳ್ಳಲಿದೆ. ಇನ್ನು ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿಯೂ ಕ್ರಿಕೆಟ್ ಅಭಿಮಾನಿಗಳು ಪಂದ್ಯವನ್ನು ವೀಕ್ಷಿಸಬಹುದಾಗಿದೆ.

click me!