ಭಾರತ-ಬಾಂಗ್ಲಾ ಕಾನ್ಪುರ ಟೆಸ್ಟ್: ಎರಡನೇ ದಿನದಾಟ ಸಂಪೂರ್ಣ ಮಳೆಗೆ ಬಲಿ, 3ನೇ ದಿನದಾಟಕ್ಕೂ ಮಳೆ ಭೀತಿ!

By Kannadaprabha News  |  First Published Sep 29, 2024, 8:27 AM IST

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್‌ ಪಂದ್ಯದ ಎರಡನೇ ದಿನದಾಟ ಒಂದೂ ಎಸೆತ ಕಾಣಲಿಲ್ಲ. ಮೂರನೇ ದಿನದಾಟಕ್ಕೂ ಮಳೆ ಭೀತಿ ಎದುರಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ


ಕಾನ್ಪುರ: ಭಾರತ-ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಮಳೆಗೆ ಬಲಿಯಾಯಿತು. ನಗರದಲ್ಲಿ ಬೆಳಗ್ಗಿನಿಂದಲೇ ತುಂತುರು ಮಳೆ ಬೀಳುತ್ತಿದ್ದ ಕಾರಣ, ದಿನದಾಟ ಆರಂಭಗೊಳ್ಳುವುದು ವಿಳಂಬವಾಯಿತು. ಆಟ ಆರಂಭಗೊಳ್ಳಬಹುದು ಎನ್ನುವ ನಿರೀಕ್ಷೆಯೊಂದಿಗೆ ಕ್ರೀಡಾಂಗಣಕ್ಕೆ ಆಗಮಿಸಿದ ಉಭಯ ತಂಡಗಳ ಆಟಗಾರರಿಗೆ ನಿರಾಸೆ ಉಂಟಾಯಿತು.

ಸುಮಾರು 10 ಗಂಟೆಯ ವೇಳೆಗೆ ಮಳೆ ಜೋರಾದ ಕಾರಣ, 10.40ರ ವೇಳೆಗೆ ಆಟಗಾರರು ಹೋಟೆಲ್‌ಗೆ ವಾಪಸಾದರು. ಆ ಬಳಿಕ ಮಳೆ ಕಡಿಮೆಯಾದ ಕಾರಣ, ಬೆಳಗ್ಗೆ 11.15ರ ವೇಳಗೆ ಮೈದಾನ ಸಿಬ್ಬಂದಿ ಮೂರು ಸೂಪರ್ ಸಾಪರ್ ಯಂತ್ರಗಳನ್ನು ಬಳಸಿ ಮೈದಾನ ಒಣಗಿಸುವ ಕೆಲಸ ಆರಂಭಿಸಿದರು. ಆದರೂ ಸಣ್ಣಗೆ ಮಳೆ ಬೀಳುತ್ತಲೇ ಇದ್ದಿದ್ದರಿಂದ ಹಾಗೂ ಮಂದ ಬೆಳಕು ಇದ್ದ ಕಾರಣ ಮಧ್ಯಾಹ್ನ 2.15 ರ ವೇಳೆಗೆ ಅಂಪೈರ್‌ಗಳು ದಿನದಾಟವನ್ನು ರದ್ದುಗೊಳಿಸಲು ನಿರ್ಧರಿಸಿದರು.

Tap to resize

Latest Videos

undefined

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸುವರ್ಣ ಯುಗ ಮುಗಿಯಿತಾ?

3 ದಿನದಲ್ಲಿ ಗೆಲ್ಲಬೇಕಾದ ಒತ್ತಡ: 3ನೇ ದಿನವಾದ ಭಾನುವಾರವೂ ಮಳೆ ಮುನ್ಸೂಚನೆ ಇದ್ದು, ಪಂದ್ಯ ಡ್ರಾನತ್ತ ಹೊರಳಬಹುದು ಎನ್ನುವ ಆತಂಕ ಭಾರತೀಯರಿಗೆ ಶುರುವಾಗಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವ ಜೊತೆಗೆ ಸತತ 3ನೇ ಬಾರಿಗೆ ಫೈನಲ್‌ಗೇರುವ ಗುರಿ ಹೊಂದಿರುವ ಭಾರತಕ್ಕೆ ಮುಂದಿನ ಮೂರುವರೆ ತಿಂಗಳ ಕಾಲ ನಡೆಯಲಿರುವ ಪಂದ್ಯಗಳು ಅತ್ಯಂತ ಮಹತ್ವದೆನಿಸಿವೆ.

Update from Kanpur 🚨

Play has been called off for Day 2 due to rains. | | pic.twitter.com/HD98D6LK9K

— BCCI (@BCCI)

ಪಂದ್ಯ ಗೆದ್ದರೆ 12 ಅಂಕಗಳು ಸಿಗಲಿದ್ದು, ಒಂದು ವೇಳೆ ಪಂದ್ಯ ಡ್ರಾಗೊಂಡರೆ ಭಾರತಕ್ಕೆ ಕೇವಲ 4 ಅಂಕ ಸಿಗಲಿದೆ. ಈ ಪಂದ್ಯದ ಬಳಿಕ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 3 ಟೆಸ್ಟ್‌ಗಳನ್ನು ಆಡಲಿದೆ. ಆನಂತರ ವರ್ಷಾಂತ್ಯದಲ್ಲಿ ಆಸ್ಟ್ರೇಲಿಯಾದಲ್ಲಿ 5 ಟೆಸ್ಟ್‌ಗಳು ನಿಗದಿಯಾಗಿವೆ. ಭಾರತ ಫೈನಲ್ ಸ್ಥಾನ ಖಚಿತಪಡಿಸಿಕೊಳ್ಳಲು ಈ ಪಂದ್ಯವನ್ನೂ ಸೇರಿ ಬಾಕಿ ಇರುವ 9 ಪಂದ್ಯಗಳಲ್ಲಿ ಕನಿಷ್ಠ 5 ರಿಂದ 6 ಪಂದ್ಯಗಳನ್ನು ಗೆಲ್ಲಬೇಕಾಗಬಹುದು.

ಲಂಕಾ ವಿರುದ್ಧ ಕಿವೀಸ್‌ಗೆ ಇನ್ನಿಂಗ್ಸ್‌ ಸೋಲಿನ ಭೀತಿ

ಗಾಲೆ: ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್‌ ಇನ್ನಿಂಗ್ಸ್‌ ಸೋಲಿನ ಭೀತಿಗೆ ಸಿಲುಕಿದೆ. ಲಂಕಾ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗೆ 602 ರನ್‌ಗಳ ಬೃಹತ್‌ ಮೊತ್ತ ಪೇರಿಸಿದ ಬಳಿಕ, ಕಿವೀಸ್‌ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 88 ರನ್‌ಗೆ ಆಲೌಟ್‌ ಆಯಿತು. 

ಪ್ರಭಾತ್‌ ಜಯಸೂರ್ಯ 6 ವಿಕೆಟ್‌ ಕಿತ್ತರು. 514 ರನ್‌ ಹಿನ್ನಡೆ ಅನುಭವಿಸಿದ ಕಿವೀಸ್‌ ಮೇಲೆ ಲಂಕಾ ಫಾಲೋ ಆನ್‌ ಹೇರಿತು. 2ನೇ ಇನ್ನಿಂಗ್ಸ್‌ ಆರಂಭಿಸಿರುವ ಕಿವೀಸ್‌, 3ನೇ ದಿನದಂತ್ಯಕ್ಕೆ 5 ವಿಕೆಟ್‌ಗೆ 199 ರನ್‌ ಗಳಿಸಿದ್ದು, ಇನ್ನೂ 315 ರನ್‌ ಹಿನ್ನಡೆಯಲ್ಲಿದೆ.

ಐಪಿಎಲ್‌ ಪ್ಲೇಯರ್ಸ್‌ಗೆ ಮತ್ತಷ್ಟು ಬಂಪರ್‌, ಪ್ರತಿ ಪಂದ್ಯಕ್ಕೆ ಸಿಗಲಿದೆ 7.5 ಲಕ್ಷ ಮ್ಯಾಚ್‌ ಫೀ!

4ನೇ ಏಕದಿನ: ಆಸೀಸ್‌ ವಿರುದ್ಧ ಗೆದ್ದ ಇಂಗ್ಲೆಂಡ್‌

ಲಂಡನ್‌: ಆಸ್ಟ್ರೇಲಿಯಾ ವಿರುದ್ಧದ 4ನೇ ಏಕದಿನ ಪಂದ್ಯದಲ್ಲಿ 186 ರನ್‌ ಗೆಲುವು ಸಾಧಿಸಿದ ಇಂಗ್ಲೆಂಡ್‌, 5 ಪಂದ್ಯಗಳ ಸರಣಿಯಲ್ಲಿ 2-2ರ ಸಮಬಲ ಸಾಧಿಸಿದೆ. ಮಳೆಯಿಂದಾಗಿ ಪಂದ್ಯವನ್ನು ತಲಾ 39 ಓವರ್‌ಗೆ ಕಡಿತಗೊಳಿಸಲಾಗಿತ್ತು. ಇಂಗ್ಲೆಂಡ್‌ 5 ವಿಕೆಟ್‌ಗೆ 312 ರನ್‌ ಗಳಿಸಿದರೆ, ಆಸ್ಟ್ರೇಲಿಯಾ 24.4 ಓವರಲ್ಲಿ 126 ರನ್‌ಗೆ ಆಲೌಟ್‌ ಆಯಿತು. ವಿಕೆಟ್‌ ನಷ್ಟವಿಲ್ಲದೆ 68 ರನ್‌ ಗಳಿಸಿದ್ದ ಆಸೀಸ್‌, 58 ರನ್‌ಗೆ 10 ವಿಕೆಟ್‌ ಕಳೆದುಕೊಂಡಿತು. 5ನೇ ಹಾಗೂ ಕೊನೆಯ ಪಂದ್ಯ ಭಾನುವಾರ ನಡೆಯಲಿದೆ.
 

click me!