
ಕಾನ್ಪುರ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿಯ ಬಿಸಿ ಸದ್ಯ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಕ್ರಿಕೆಟ್ ಸರಣಿಗೂ ತಟ್ಟಿದೆ. ಬಾಂಗ್ಲಾ ತಂಡ ಭಾರತದಲ್ಲಿ ಕ್ರಿಕೆಟ್ ಆಡುವುದಕ್ಕೆ ಕೆಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಹೀಗಾಗಿ ಪಂದ್ಯಕ್ಕೆ ಭಾರಿ ಭದ್ರತೆ ಒದಗಿಸಲಾಗುತ್ತಿದೆ.
ಉಭಯ ತಂಡಗಳ ನಡುವೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆಯಬೇಕಿರುವ 2ನೇ ಟೆಸ್ಟ್‌ಗೂ ಮುನ್ನ ಸೋಮವಾರ ಅಖಿಲ ಭಾರತ ಹಿಂದೂ ಮಹಾಸಭಾ ಕಾರ್ಯಕರ್ತರು ಕ್ರೀಡಾಂಗಣ ಸಮೀಪದ ರಸ್ತೆ ತಡೆದು ಹವನ ನಡೆಸಿದ್ದಾರೆ. ಬಳಿಕ ಅವರನ್ನು ಸ್ಥಳದಿಂದ ತೆರವುಗೊಳಿಸಲಾಗಿದ್ದು, 20 ಮಂದಿ ವಿರುದ್ಧ ಎಫ್ಐಆರ್ ಕೂಡಾ ದಾಖಲಾಗಿದೆ. ಪಂದ್ಯಕ್ಕೆ ಅಡ್ಡಿಪಡಿಸುವ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತ ಮುತ್ತ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಪಂದ್ಯದ ವೇಳೆ ಆಟಗಾರರು ಉಳಿದು ಕೊಳ್ಳುವ ಹೋಟೆಲ್, ಸಂಚರಿಸುವ ದಾರಿ ಹಾಗೂ ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿ ಯನ್ನು ನಿಯೋಜಿಸಲಾಗಿದೆ.
ಕಾನ್ಪುರ ಟೆಸ್ಟ್‌ಗೆ ಸ್ಪಿನ್ ಸ್ನೇಹಿ ಪಿಚ್: ಭಾರತ 3 ಸ್ಪಿನ್ನರ್‌ಗಳು ಕಣಕ್ಕಿಳಿಯುವ ಸಾಧ್ಯತೆ
ಅ.6ರ ಟಿ20 ಪಂದ ವೇಳೆ ಗ್ವಾಲಿಯರ್ ಬಂದ್‌ಗೆ ಕರೆ!
ಗ್ವಾಲಿಯರ್: ಭಾರತ ಹಾಗೂ ಬಾಂಗ್ಲಾದೇಶ ನಡುವೆ ಅ.6ರಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯಬೇಕಿರುವ ಟಿ20 ಪಂದ್ಯದ ದಿನ 'ಗ್ವಾಲಿಯರ್ ಬಂದ್'ಗೆ ಹಿಂದೂ ಮಹಾಸಭಾ ಕರೆ ಕೊಟ್ಟಿದೆ. 'ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ನಡೆಯುತ್ತಲೇ ಇದೆ. ಈ ಸಮಯದಲ್ಲಿ ಬಾಂಗ್ಲಾದೇಶ ವಿರುದ್ಧ ಕ್ರಿಕೆಟ್ ಆಡುವುದು ಸರಿಯಲ್ಲ' ಎಂದು ಸಂಘಟನೆ ನಾಯಕರು ಹೇಳಿದ್ದಾರೆ.
ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಚೆನ್ನೈನ ಚೆಪಾಕ್ ಮೈದಾನ ಆತಿಥ್ಯ ವಹಿಸಿತ್ತು. ರವಿಚಂದ್ರನ್ ಅಶ್ವಿನ್ ಅವರ ಆಲ್ರೌಂಡ್ ಪ್ರದರ್ಶನದ ನೆರವಿನಿಂದ ಟೀಂ ಇಂಡಿಯಾ 280 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು. ಈ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.