
ಮುಂಬೈ(ಅ.31) : ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನ.22ರಿಂದ ನಡೆಯಲಿರುವ ಭಾರತ-ಬಾಂಗ್ಲಾದೇಶ ನಡುವಿನ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ, ಚೆಂಡು ತಯಾರಕ ಸಂಸ್ಥೆ ‘ಎಸ್‌ಜಿ’ಗೆ 72 ಪಿಂಕ್ ಬಾಲ್‌ಗಳನ್ನು ಪೂರೈಸುವಂತೆ ಕೇಳಿಕೊಂಡಿದೆ.
ಇದನ್ನೂ ಓದಿ: ದಾದಾ ಪ್ರಸ್ತಾವನೆಗೆ ಬಾಂಗ್ಲಾ ಸಮ್ಮತಿ; ಭಾರತದಲ್ಲಿ ಮೊಟ್ಟ ಮೊದಲ ಡೇ & ನೈಟ್ ಟೆಸ್ಟ್!
ಎಸ್‌ಜಿ ಚೆಂಡಿನ ಬದಲು ಆಸ್ಪ್ರೇಲಿಯಾದ ಕೂಕಬುರ್ರಾ ಚೆಂಡಗಳನ್ನು ತರಿಸಬಹುದು ಎನ್ನುವ ನಿರೀಕ್ಷೆಯಿತ್ತು. ಆದರೆ ಬಿಸಿಸಿಐ, ಎಸ್‌ಜಿ ಚೆಂಡಗಳನ್ನೇ ಬಳಸಲು ನಿರ್ಧರಿಸಿದೆ.ಭಾರತದಲ್ಲಿ ಟೆಸ್ಟ್ ಪಂದ್ಯಗಳಿಗೆ ಎಸ್‌ಜಿ ಸಂಸ್ಥೆ ತಯಾರಿಸುವ ಕೆಂಪು ಚೆಂಡನ್ನೇ ಬಳಸಲಾಗುತ್ತದೆ. ಸಂಸ್ಥೆಯ ಚೆಂಡಿನ ಬಗ್ಗೆ ಭಾರತ ತಂಡದ ಹಲವು ಆಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಡೇ ಅಂಡ್ ನೈಟ್ ಟೆಸ್ಟ್ ಮ್ಯಾಚ್: ಏನು? ಎತ್ತ..? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
ಕೆಂಪು ಚೆಂಡಿಗೆ ಹೋಲಿಸಿದರೆ ಗುಲಾಬಿ ಬಣ್ಣದ ಚೆಂಡಿನ ಮೇಲೆ ಹೆಚ್ಚು ಧೂಳು ಕೂರಲಿದ್ದು, ಬೇಗನೆ ಕೊಳೆಯಾಗಲಿದೆ. ಹೀಗಾಗಿ ಚೆಂಡಿನ ಗುಣಮಟ್ಟ ಹೆಚ್ಚಿಸುವ ಅನಿವಾರ್ಯತೆ ಇದೆ ಎನ್ನುವ ಸಲಹೆಯನ್ನು ಬಿಸಿಸಿಐ, ಚೆಂಡು ತಯಾರಕರಿಗೆ ನೀಡಿದೆ ಎನ್ನಲಾಗಿದೆ.
ಇದನ್ನೂ ಓದಿ: ಬೆಂಗ್ಳೂರಲ್ಲಿ ಗಂಗೂಲಿ-ದ್ರಾವಿಡ್ ಸುದೀರ್ಘ ಚರ್ಚೆ; NCAಗೆ ಹೊಸ ರೂಪ!
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಭಾರತದಲ್ಲಿ ಮೊಟ್ಟ ಮೊದಲ ಹಗಲು-ರಾತ್ರಿ ಟೆಸ್ಟ್ ಆಯೋಜಿಸಲು ಎಲ್ಲಾ ತಯಾರಿ ಮಾಡಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಒಂದೇ ವಾರಕ್ಕೆ ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯನ್ನು ಒಪ್ಪಿಸಿರುವ ಗಂಗೂಲಿ, ಇತಿಹಾಸ ರಚಿಸಲು ಸಜ್ಜಾಗಿದ್ದಾರೆ.
ಕೋಲ್ಕತಾದಲ್ಲಿ ನಡೆಯಲಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯ ಹಗಲು ರಾತ್ರಿ ನಡೆಯಲಿದೆ. ಟೆಸ್ಟ್ ಮಾನ್ಯತೆ ಪಡೆದಿರುವ ಇತರ ರಾಷ್ಟ್ರಗಳು ಡೇ ಅಂಡ್ ನೈಟ್ ಟೆಸ್ಟ್ ಪಂದ್ಯ ಆಡಿದೆ. ಆದರೆ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ಡೇ ಅಂಡ್ ನೈಟ್ ಟೆಸ್ಟ್ ಪಂದ್ಯ ಆಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.