ಟಾಸ್ ಗೆದ್ದ ಇಂಗ್ಲೆಂಡ್‌ ಬೌಲಿಂಗ್ ಆಯ್ಕೆ ; ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಪ್ರಸಿದ್ಧ್ ಕೃಷ್ಣ, ಕೃನಾಲ್‌

Published : Mar 23, 2021, 01:08 PM ISTUpdated : Mar 23, 2021, 01:11 PM IST
ಟಾಸ್ ಗೆದ್ದ ಇಂಗ್ಲೆಂಡ್‌ ಬೌಲಿಂಗ್ ಆಯ್ಕೆ ; ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಪ್ರಸಿದ್ಧ್ ಕೃಷ್ಣ, ಕೃನಾಲ್‌

ಸಾರಾಂಶ

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ  ಇಂಗ್ಲೆಂಡ್ ಮೊದಲು ಬೌಲಿಂಗ್‌ ಆಯ್ದುಕೊಂಡಿದೆ. ಉಭಯ ತಂಡಗಳು ಕೆಲವು ಬದಲಾವಣೆಯೊಂದಿಗೆ ಕಣಕ್ಕಿಳಿದಿವೆ.

ಪುಣೆ(ಮಾ.23): ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ನಾಯಕ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ

3 ಪಂದ್ಯಗಳ ಏಕದಿನ ಸರಣಿಗೆ ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್‌ ಮೈದಾನ ಆತಿಥ್ಯವನ್ನು ವಹಿಸಿದೆ. ಇನ್ನು ಭಾರತ ತಂಡಕ್ಕೆ ಕರ್ನಾಟಕ ವೇಗಿ ಪ್ರಸಿದ್ಧ್ ಕೃಷ್ಣ ಹಾಗೂ ಕೃನಾಲ್‌ ಪಾಂಡ್ಯ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಇಂಗ್ಲೆಂಡ್ ಪರ ಸ್ಯಾಮ್‌ ಬಿಲ್ಲಿಂಗ್ಸ್‌, ಟಾಮ್ ಕರ್ರನ್‌ ಹಾಗೂ ಮೋಯಿನ್ ಅಲಿ ತಂಡ ಕೂಡಿಕೊಂಡಿದ್ದಾರೆ.

2019ರ ಏಕದಿನ ವಿಶ್ವಕಪ್‌ ಫೈನಲ್‌ನ ಲೀಗ್‌ ಹಂತದ ಪಂದ್ಯದ ಬಳಿಕ ಇದೇ ಮೊದಲ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿದ್ದು, ಹಾಲಿ ವಿಶ್ವಕಪ್‌ ಚಾಂಪಿಯನ್‌ ಇಂಗ್ಲೆಂಡ್‌ ತಂಡಕ್ಕೆ ಪ್ರಬಲ ಪೈಪೋಟಿ ಎದುರಾಗುವ ಸಾಧ್ಯತೆಯಿದೆ. ಇನ್ನೊಂದು ಕಡೆ ಟೆಸ್ಟ್ ಹಾಗೂ ಟಿ20 ಸರಣಿ ಗೆದ್ದು ಬೀಗುತ್ತಿರುವ ಟೀಂ ಇಂಡಿಯಾ  ಏಕದಿನ ಸರಣಿಯಲ್ಲೂ  ಅಂತಹದ್ದೇ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ.

ತಂಡಗಳು ಹೀಗಿವೆ:

ಭಾರತ:

ಇಂಗ್ಲೆಂಡ್‌:

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

WTC: ಟೀಮ್ ಇಂಡಿಯಾಗೆ ಶಾಕ್ ಕೊಟ್ಟ ಬಾಂಗ್ಲಾದೇಶ! WTC ಫೈನಲ್ ರೇಸ್‌ನಿಂದ ಭಾರತ ಔಟ್?
Spain Cricket Team: ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ: ಆಸ್ಟ್ರೇಲಿಯಾದ ಆಲ್-ಟೈಮ್ ರೆಕಾರ್ಡ್ ಬ್ರೇಕ್ ಮಾಡಿದ ಸ್ಪೇನ್!