ಎಜ್‌ಬಾಸ್ಟನ್ ಟೆಸ್ಟ್‌: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ, ಭಾರತ ತಂಡದಲ್ಲಿ 3 ಮೇಜರ್ ಚೇಂಜ್!

Published : Jul 02, 2025, 03:12 PM ISTUpdated : Jul 02, 2025, 03:15 PM IST
Team India

ಸಾರಾಂಶ

ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಭಾರತ ತಂಡವು ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದ್ದು, ಕರುಣ್ ನಾಯರ್ ಮೂರನೇ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎಜ್‌ಬಾಸ್ಟನ್‌ನಲ್ಲಿ ಭಾರತ ಇದುವರೆಗೂ ಟೆಸ್ಟ್ ಗೆಲುವು ಸಾಧಿಸಿಲ್ಲ.

ಬರ್ಮಿಂಗ್‌ಹ್ಯಾಮ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಪಂದ್ಯಕ್ಕೆ ಇಲ್ಲಿನ ಎಜ್‌ಬಾಸ್ಟನ್ ಸ್ಟೇಡಿಯಂ ಆತಿಥ್ಯ ವಹಿಸಿದೆ. 5 ಪಂದ್ಯಗಳ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ ತಂಡವು 1-0 ಮುನ್ನಡೆ ಸಾಧಿಸಿದೆ. ಇನ್ನೊಂದೆಡೆ ಭಾರತ ತಂಡವು ಈ ಸ್ಟೇಡಿಯಂನಲ್ಲಿ ಮೊದಲ ಟೆಸ್ಟ್ ಗೆಲುವಿಗಾಗಿ ಎದುರು ನೋಡುತ್ತಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಟೀಂ ಇಂಡಿಯಾ ನಿರೀಕ್ಷೆಯಂತೆಯೇ ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ.ಭಾರತ ತಂಡವು ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್ ಹಾಗೂ ಆಕಾಶ್ ದೀಪ್ ಸಿಂಗ್ ತಂಡ ಕೂಡಿಕೊಂಡಿದ್ದಾರೆ. ವರ್ಕ್‌ಲೋಡ್ ಮ್ಯಾನೇಜ್‌ ಮಾಡುವ ಉದ್ದೇಶದಿಂದ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಶಾರ್ದೂಲ್ ಠಾಕೂರ್ ಬದಲಿಗೆ ನಿತೀಶ್ ಕುಮಾರ್ ರೆಡ್ಡಿಗೆ ಸ್ಥಾನ ನೀಡಲಾಗಿದೆ. ಸಾಯಿ ಸುದರ್ಶನ್ ಬದಲಿಗೆ ವಾಷಿಂಗ್ಟನ್ ಸುಂದರ್ ಹಾಗೂ ಜಸ್ಪ್ರೀತ್ ಬುಮ್ರಾ ಬದಲಿಗೆ ಆಕಾಶ್‌ದೀಪ್ ಸಿಂಗ್‌ಗೆ ಸ್ಥಾನ ನೀಡಲಾಗಿದೆ.

 

ಕರುಣ್ ನಾಯರ್ ಮೂರನೇ ಕ್ರಮಾಂಕ: ಕನ್ನಡಿಗ ಕರುಣ್ ನಾಯರ್ ಇಂದಿನ ಟೆಸ್ಟ್ ಪಂದ್ಯದಲ್ಲಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಪಂದ್ಯದಲ್ಲಿ ಸಾಯಿ ಸುದರ್ಶನ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರಾದರೂ ಹೆಚ್ಚು ಯಶಸ್ಸು ಸಿಕ್ಕಿರಲಿಲ್ಲ. ಇದೀಗ ಒನ್‌ಡೌನ್ ಆಟಗಾರನಾಗಿ ಕರುಣ್ ನಾಯರ್ ಕಣಕ್ಕಿಳಿಯಲಿದ್ದಾರೆ.

ಎಜ್‌ಬಾಸ್ಟನ್‌ ಟೆಸ್ಟ್‌ ಗೆದ್ದೇ ಇಲ್ಲ ಭಾರತ!

ಭಾರತ ತಂಡ ಎಜ್‌ಬಾಸ್ಟನ್‌ನಲ್ಲಿ ಈ ವರೆಗೂ ಟೆಸ್ಟ್‌ ಪಂದ್ಯ ಗೆದ್ದಿಲ್ಲ. ಈ ಕಳಪೆ ದಾಖಲೆಯನ್ನು ಅಳಿಸಿ ಹಾಕಲು ಭಾರತ ಕಾಯುತ್ತಿದೆ. ತಂಡ ಇಲ್ಲಿವರೆಗೂ ಎಜ್‌ಬಾಸ್ಟನ್‌ನಲ್ಲಿ 8 ಟೆಸ್ಟ್‌ ಆಡಿದ್ದು, 7ರಲ್ಲಿ ಸೋತಿದೆ. ಒಂದು ಪಂದ್ಯ ಡ್ರಾ ಮಾಡಿದ್ದೇ ಭಾರತದ ಸಾಧನೆ. ಮತ್ತೊಂದೆಡೆ ಇಂಗ್ಲೆಂಡ್‌ ಈ ಕ್ರೀಡಾಂಗಣದಲ್ಲಿ ಆಡಿರುವ 56 ಪಂದ್ಯಗಳ ಪೈಕಿ 30ರಲ್ಲಿ ಗೆದ್ದಿದೆ.

ಮಳೆ ಅಡ್ಡಿ ಭೀತಿ

ಆರಂಭಿಕ ಪಂದ್ಯಕ್ಕೆ ಕೆಲ ಕಾಲ ಮಳೆ ಅಡ್ಡಿಪಡಿಸಿತ್ತು. ಈ ಪಂದ್ಯಕ್ಕೂ ಮಳೆ ಭೀತಿ ಇದೆ. ಪಂದ್ಯದ ಕೊನೆ 2 ದಿನ(ಶನಿವಾರ, ಭಾನುವಾರ) ಮಳೆ ಮುನ್ಸೂಚನೆ ಇದೆ.

29 ಪಂದ್ಯ: ಈ ಕ್ರೀಡಾಂಗಣದಲ್ಲಿ 56 ಟೆಸ್ಟ್‌ಗಳು ನಡೆದಿವೆ. ಈ ಪೈಕಿ 29ರಲ್ಲಿ ಮೊದಲು ಬ್ಯಾಟ್‌ ಮಾಡಿದ ತಂಡ ಗೆದ್ದಿದೆ.

ಆಟಗಾರರ ಪಟ್ಟಿ:

ಭಾರತ: ಜೈಸ್ವಾಲ್‌, ರಾಹುಲ್‌, ಕರುಣ್ ನಾಯರ್, ಗಿಲ್‌(ನಾಯಕ), ರಿಷಭ್‌, ನಿತೀಶ್ ಕುಮಾರ್ ರೆಡ್ಡಿ, ಜಡೇಜಾ, ವಾಷಿಂಗ್ಟನ್ ಸುಂದರ್, ಆಕಾಶ್‌ದೀಪ್ ಸಿಂಗ್, ಸಿರಾಜ್‌, ಪ್ರಸಿದ್ಧ್‌.

ಇಂಗ್ಲೆಂಡ್‌: ಜ್ಯಾಕ್‌ ಕ್ರಾವ್ಲಿ, ಬೆನ್‌ ಡಕೆಟ್‌, ಪೋಪ್‌, ರೂಟ್‌, ಬ್ರೂಕ್‌, ಸ್ಟೋಕ್ಸ್(ನಾಯಕ), ಜೆಮೀ ಸ್ಮಿತ್‌, ವೋಕ್ಸ್‌, ಬ್ರೈಡನ್‌ ಕಾರ್ಸ್‌, ಜೋಶ್‌ ಟಂಗ್‌, ಬಶೀರ್‌.

ಪಂದ್ಯ: ಮಧ್ಯಾಹ್ನ 3.30ರಿಂದ(ಭಾರತೀಯ ಕಾಲಮಾನ)

ನೇರಪ್ರಸಾರ: ಸೋನಿ ಸ್ಪೋರ್ಟ್ಸ್‌, ಜಿಯೋ ಹಾಟ್‌ಸ್ಟಾರ್‌.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕುಲ್ದೀಪ್-ಪ್ರಸಿದ್ದ್ ಮಾರಕ ದಾಳಿ; ಏಕದಿನ ಸರಣಿ ಗೆಲ್ಲಲು ಭಾರತಕ್ಕೆ ಸ್ಪರ್ಧಾತ್ಮಕ ಗುರಿ
Ind vs SA: ಶುಭ್‌ಮನ್ ಗಿಲ್ ಫುಲ್ ಫಿಟ್; ಈ ಡೇಟ್‌ಗೆ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡೋದು ಫಿಕ್ಸ್!