ವೈಜಾಗ್ ಟೆಸ್ಟ್‌ ಪಂದ್ಯಕ್ಕೆ ಬಲಾಢ್ಯ ಇಂಗ್ಲೆಂಡ್‌ ತಂಡ ಪ್ರಕಟ; ಎರಡು ಮಹತ್ವದ ಬದಲಾವಣೆ..!

By Naveen KodaseFirst Published Feb 1, 2024, 2:49 PM IST
Highlights

ಎರಡನೇ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಎಡಗೈ ಸ್ಪಿನ್ನರ್ ಜಾಕ್ ಲೀಚ್ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದರು. ಹೀಗಾಗಿ ಲೀಚ್ ಬದಲಿಗೆ ಶೋಯೆಬ್ ಬಷೀರ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಗಿದ್ದು, ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

ವಿಶಾಖಪಟ್ಟಣ(ಫೆ.01): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 02ರಿಂದ ಇಲ್ಲಿನ ವೈಜಾಗ್‌ನಲ್ಲಿ ಆರಂಭವಾಗಲಿದೆ. ಎರಡನೇ ಟೆಸ್ಟ್ ಪಂದ್ಯ ಆರಂಭಕ್ಕೂ ಕೆಲವು ಗಂಟೆಗಳು ಬಾಕಿ ಇರುವಾಗಲೇ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ಎರಡು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.

ಎರಡನೇ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಎಡಗೈ ಸ್ಪಿನ್ನರ್ ಜಾಕ್ ಲೀಚ್ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದರು. ಹೀಗಾಗಿ ಲೀಚ್ ಬದಲಿಗೆ ಶೋಯೆಬ್ ಬಷೀರ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಗಿದ್ದು, ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಇನ್ನು ವೇಗಿ ಮಾರ್ಕ್‌ವುಡ್ ಬದಲಿಗೆ ಅನುಭವಿ ವೇಗಿ ಜೇಮ್ಸ್ ಆಂಡರ್‌ಸನ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಕಲ್ಪಿಸಲಾಗಿದೆ.

ವೈಜಾಗ್ ಟೆಸ್ಟ್‌ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್‌ ಕ್ರಿಕೆಟ್ ತಂಡಕ್ಕೆ ಬಿಗ್ ಶಾಕ್..!

ಶೋಯೆಬ್ ಮಲಿಕ್ ವೀಸಾ ಸಮಸ್ಯೆಯಿಂದಾಗಿ ಭಾರತ ಎದುರಿನ ಹೈದರಾಬಾದ್ ಟೆಸ್ಟ್ ಪಂದ್ಯಕ್ಕೆ ಆಯ್ಕೆಗೆ ಅಲಭ್ಯರಾಗಿದ್ದರು. ಭಾರತ ತಂಡವು ತವರಿನಲ್ಲಿ ಸಾಕಷ್ಟು ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದ್ದರೂ ಸಹ ಹೈದರಾಬಾದ್‌ ಟೆಸ್ಟ್ ಪಂದ್ಯದಲ್ಲಿ 28 ರನ್‌ಗಳ ರೋಚಕ ಸೋಲು ಅನುಭವಿಸಿತ್ತು. ಇನ್ನು ಎರಡನೇ ಟೆಸ್ಟ್ ಪಂದ್ಯಕ್ಕೆ ಫಿಟ್ನೆಸ್ ಸಮಸ್ಯೆಯಿಂದಾಗಿ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಹಾಗೂ ಕೆ ಎಲ್ ರಾಹುಲ್ ಕೂಡಾ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಎರಡನೇ ಟೆಸ್ಟ್‌ನಲ್ಲಿ ಸಾಕಷ್ಟು ರೋಚಕತೆಯಿಂದ ಕೂಡಿರುವ ಸಾಧ್ಯತೆಯಿದೆ.

ಮೂರು ವರ್ಷಗಳ ಹಿಂದೆ ಕಳೆದ ಬಾರಿ ಇಂಗ್ಲೆಂಡ್ ತಂಡವು ಭಾರತ ಪ್ರವಾಸ ಕೈಗೊಂಡಿದ್ದಾಗಲೂ ಇದೇ ರೀತಿ ಪರಿಸ್ಥಿತಿ ಎದುರಾಗಿತ್ತು. ಇಂಗ್ಲೆಂಡ್ ತಂಡವು ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿತ್ತು. ಆದರೆ ಇದಾದ ಬಳಿಕ ಟೀಂ ಇಂಡಿಯಾ, ಬಲಾಢ್ಯ ಇಂಗ್ಲೆಂಡ್‌ಗೆ ತಿರುಗೇಟು ನೀಡುವಲ್ಲಿ ಯಶಸ್ವಿಯಾಗಿತ್ತು. ಇದೀಗ ಟೀಂ ಇಂಡಿಯಾ ಅಂತಹದ್ದೇ ಪ್ರದರ್ಶನ ತೋರುವ ನಿರೀಕ್ಷೆಯಲ್ಲಿದೆ.

ವೈಜಾಗ್‌ನಲ್ಲಿ ಭಾರತ vs ಇಂಗ್ಲೆಂಡ್ ಎರಡನೇ ಟೆಸ್ಟ್‌ಗೆ ಕ್ಷಣಗಣನೆ..!

ಭಾರತ ಎದುರಿನ ಎರಡನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ ಹೀಗಿದೆ;

ಜಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಜಾನಿ ಬೇರ್‌ಸ್ಟೋವ್, ಬೆನ್ ಸ್ಟೋಕ್ಸ್(ನಾಯಕ), ಬೆನ್ ಫೋಕ್ಸ್, ರೆಹನ್ ಅಹಮ್ಮದ್, ಟಾಮ್ ಹಾರ್ಟ್ಲಿ, ಶೋಯೆಬ್ ಬಷೀರ್, ಜೇಮ್ಸ್ ಆಂಡರ್‌ಸನ್.
 

click me!