ಭಾರತ-ಇಂಗ್ಲೆಂಡ್‌ 2ನೇ ಟೆಸ್ಟ್ ಟಿಕೆಟ್ ಸೋಲ್ಡೌಟ್‌..!

Kannadaprabha News   | Asianet News
Published : Feb 12, 2021, 08:09 AM IST
ಭಾರತ-ಇಂಗ್ಲೆಂಡ್‌ 2ನೇ ಟೆಸ್ಟ್ ಟಿಕೆಟ್ ಸೋಲ್ಡೌಟ್‌..!

ಸಾರಾಂಶ

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಶೇ.50% ಪ್ರೇಕ್ಷಕರಿಗೆ ಮೈದಾನ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್‌ ಆಗಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಚೆನ್ನೈ(ಫೆ.12): ಕೊರೋನಾ ಆತಂಕ ನಿಧಾನವಾಗಿ ದೂರವಾಗುತ್ತಿದ್ದು, 1 ವರ್ಷಕ್ಕೂ ಹೆಚ್ಚು ಸಮಯದ ಬಳಿಕ ಭಾರತದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ನಡೆಯುತ್ತಿದೆ. ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಟೆಸ್ಟ್‌ ಖಾಲಿ ಕ್ರೀಡಾಂಗಣದಲ್ಲಿ ನಡೆದಿತ್ತು. ಆದರೆ ಶನಿವಾರದಿಂದ ಆರಂಭಗೊಳ್ಳಲಿರುವ 2ನೇ ಟೆಸ್ಟ್‌ಗೆ ಶೇ.50ರಷ್ಟು ಪ್ರೇಕ್ಷಕರಿಗೆ ಪ್ರವೇಶ ನೀಡಲು ಬಿಸಿಸಿಐ ಹಾಗೂ ತಮಿಳುನಾಡು ಕ್ರಿಕೆಟ್‌ ಸಂಸ್ಥೆ (ಟಿಎನ್‌ಸಿಎ) ಒಪ್ಪಿಗೆ ನೀಡಿದ್ದು, ಟಿಕೆಟ್‌ಗಳಿಗೆ ಭರ್ಜರಿ ಬೇಡಿಕೆ ಕಂಡುಬಂದಿದೆ. ಎರಡನೇ ಟೆಸ್ಟ್‌ ಪಂದ್ಯ ಫೆಬ್ರವರಿ 13ರಿಂದ ಆರಂಭವಾಗಲಿದೆ.

ಪ್ರತಿ ದಿನ 10,000 ಪ್ರೇಕ್ಷಕರಿಗೆ ಪ್ರವೇಶ ನೀಡಲು ನಿರ್ಧರಿಸಿದ್ದ ಟಿಎನ್‌ಸಿಎ, ಆನ್‌ಲೈನ್‌ನಲ್ಲಿ ಟಿಕೆಟ್‌ ಮಾರಾಟ ನಡೆಸಿತ್ತು. ಮಾರಾಟ ಆರಂಭಗೊಂಡ ಕೇವಲ 1 ಗಂಟೆಯಲ್ಲಿ ಟಿಕೆಟ್‌ಗಳು ಸೋಲ್ಡ್‌ ಔಟ್‌ ಆದವು ಎಂದು ಟಿಎನ್‌ಸಿಎ ಅಧಿಕಾರಿಗಳು ತಿಳಿಸಿದ್ದಾರೆ. ಆನ್‌ಲೈನ್‌ನಲ್ಲಿ ಟಿಕೆಟ್‌ ಕಾಯ್ದಿರಿಸಿದ್ದವರು ಗುರುವಾರ ಕ್ರೀಡಾಂಗಣದ ಬಳಿ ಬಂದು ಪಂದ್ಯದ ಟಿಕೆಟ್‌ಗಳನ್ನು ಪಡೆದುಕೊಂಡರು. ಚೆಪಾಕ್‌ ಕ್ರೀಡಾಂಗಣದ ಬಾಕ್ಸ್‌ ಆಫೀಸ್‌ ಮುಂದೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.

ಇಂಗ್ಲೆಂಡ್ ಎದುರು ಎರಡನೇ ಟೆಸ್ಟ್‌ ಗೆಲ್ಲಬೇಕಿದ್ದರೆ ಟೀಂ ಇಂಡಿಯಾದಿಂದ 3 ಬದಲಾವಣೆ ಅನಿವಾರ್ಯ..!

ಚೆಪಾಕ್‌ ಕ್ರೀಡಾಂಗಣದ ಒಟ್ಟು ಸಾಮರ್ಥ್ಯ 33,500 ಆಸನಗಳಾಗಿದ್ದು, ಇದರಲ್ಲಿ ಪೆವಿಲಿಯನ್‌ ಕಡೆಯ ಆಸನಗಳನ್ನು ಬಳಸದಿರಲು ನಿರ್ಧರಿಸಿರುವುದಾಗಿ ಟಿಎನ್‌ಸಿಎ ಕಾರ‍್ಯದರ್ಶಿ ರಾಮಸ್ವಾಮಿ ತಿಳಿಸಿದ್ದಾರೆ. 28000 ಆಸನಗಳ ಪೈಕಿ ಶೇ.50 ಎಂದರೆ 14000 ಆಸನಗಳನ್ನು ಭರ್ತಿ ಮಾಡಬಹುದಾಗಿದ್ದು, 4000 ಆಸನಗಳನ್ನು ಬಿಸಿಸಿಐ, ಟಿಎನ್‌ಸಿಎ ಹಾಗೂ ಪ್ರಾಯೋಜಕರಿಗೆ ಮೀಸಲಿಡಲಾಗಿದೆ. 10000 ಟಿಕೆಟ್‌ಗಳನ್ನು ಅಭಿಮಾನಿಗಳಿಗೆ ಮಾರಾಟ ಮಾಡಲಾಗಿದೆ ಎಂದು ರಾಮಸ್ವಾಮಿ ತಿಳಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್