ಇಂಗ್ಲೆಂಡ್ ವಿರುದ್ದದ ಮೂರನೇ ಟೆಸ್ಟ್ ಪಂದ್ಯದ ಎಲ್ಲಾ ಟಿಕೆಟ್‌ಗಳು ಮಾರಾಟವಾಗಿವೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಕೋಲ್ಕತಾ(ಫೆ.17): ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿವೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಂಗಳವಾರ ತಿಳಿಸಿದ್ದಾರೆ. ಫೆಬ್ರವರಿ 24ರಿಂದ ಅಹಮದಾಬಾದ್‌ನ ಮೊಟೇರಾ ಕ್ರೀಡಾಂಗಣದಲ್ಲಿ ನಡೆಯಲಿರುವ ಹಗಲು-ರಾತ್ರಿ ಪಂದ್ಯಕ್ಕೆ ಶೇ.50ರಷ್ಟು ಪ್ರೇಕ್ಷಕರನ್ನು ಬಿಡಲು ಸ್ಥಳೀಯ ಆಡಳಿತ ಅನುಮತಿ ನೀಡಿದೆ.
‘ಕ್ರಿಕೆಟ್ ಕ್ರೀಡಾಂಗಣಕ್ಕೆ ಪ್ರೇಕ್ಷಕರು ವಾಪಸಾಗಿರುವುದು ಖುಷಿಯ ವಿಚಾರ. ಅಹಮದಾಬಾದ್‌ನಲ್ಲೇ ನಡೆಯಲಿರುವ ಟಿ20 ಸರಣಿಯ ಟಿಕೆಟ್‌ಗಳು ಸಹ ಸಂಪೂರ್ಣವಾಗಿ ಮಾರಾಟವಾಗಿವೆ’ ಎಂದಿರುವ ಗಂಗೂಲಿ, ‘ಐಪಿಎಲ್ ಪಂದ್ಯಗಳಿಗೆ ಕ್ರೀಡಾಂಗಣಕ್ಕೆ ಪ್ರೇಕ್ಷಕರನ್ನು ಬಿಡುವ ಬಗ್ಗೆ ಸದ್ಯದಲ್ಲೇ ನಿರ್ಧರಿಸುತ್ತೇವೆ’ ಎಂದಿದ್ದಾರೆ. ಇದೇ ವೇಳೆ ಪ್ರತಿ ಸರಣಿಯಲ್ಲೂ ಒಂದು ಹಗಲು-ರಾತ್ರಿ ಪಂದ್ಯ ಆಯೋಜಿಸುವ ಯೋಜನೆ ಇದೆ ಎಂದು ಗಂಗೂಲಿ ತಿಳಿಸಿದ್ದಾರೆ.
ಇಂಗ್ಲೆಂಡ್ ‘ಬಿ’ ವಿರುದ್ಧ ಭಾರತ ಗೆದ್ದಿದೆ: ಪೀಟರ್‌ಸನ್
ಚೆನ್ನೈನಲ್ಲಿ ನಡೆದ ಮೊದಲೆರಡು ಟೆಸ್ಟ್ ಪಂದ್ಯಗಲ್ಲಿ ಉಭಯ ತಂಡಗಳು ತಲಾ ಒಂದೊಂದು ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ 4 ಪಂದ್ಯಗಳ ಸರಣಿಯಲ್ಲಿ 1-1ರ ಸಮಬಲ ಸಾಧಿಸಿವೆ. ಭಾರತ ವಿರುದ್ದದ ಮೊದಲ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ 227 ರನ್‌ಗಳ ಜಯ ಸಾಧಿಸಿತು. ಇನ್ನು ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 317 ರನ್‌ಗಳ ಜಯ ಸಾಧಿಸಿತು.