Ind vs Eng ಸೀಮಿತ ಓವರ್‌ಗಳ ಸರಣಿ: ಕ್ರಿಕೆಟ್ ಅಭಿಮಾನಿಗಳಿಗೆ ತಿಳಿದಿರಲೇಬೇಕಾದ ಸಂಗತಿಗಳಿವು

Published : Jul 06, 2022, 03:58 PM IST
Ind vs Eng ಸೀಮಿತ ಓವರ್‌ಗಳ ಸರಣಿ: ಕ್ರಿಕೆಟ್ ಅಭಿಮಾನಿಗಳಿಗೆ ತಿಳಿದಿರಲೇಬೇಕಾದ ಸಂಗತಿಗಳಿವು

ಸಾರಾಂಶ

* ಭಾರತ-ಇಂಗ್ಲೆಂಡ್ ನಡುವಿನ ಸೀಮಿತ ಓವರ್‌ಗಳ ಸರಣಿಗೆ ಕ್ಷಣಗಣನೆ * ಜುಲೈ 07ರಿಂದ ಜುಲೈ 17ರವರೆಗೆ ನಡೆಯಲಿದೆ ಟಿ20 ಹಾಗೂ ಏಕದಿನ ಸರಣಿ * ಈಗಾಗಲೇ ಟೀಂ ಇಂಡಿಯಾ ಕೂಡಿಕೊಂಡಿರುವ ನಾಯಕ ರೋಹಿತ್ ಶರ್ಮಾ

ಸೌಥಾಂಪ್ಟನ್‌(ಜು.06): ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಬರ್ಮಿಂಗ್‌ಹ್ಯಾಮ್ ಟೆಸ್ಟ್ ಪಂದ್ಯ ಮುಕ್ತಾಯವಾದ ಬೆನ್ನಲ್ಲೇ ಇದೀಗ ಕ್ರಿಕೆಟ್ ಅಭಿಮಾನಿಗಳ ಚಿತ್ತ ಉಭಯ ತಂಡಗಳ ನಡುವಿನ ಸೀಮಿತ ಓವರ್‌ಗಳ ಸರಣಿಯತ್ತ ಹರಿದಿದೆ. ಇದೇ ಜುಲೈ 07ರಿಂದ ಜುಲೈ 17ರ ವರೆಗೆ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮೂರು ಪಂದ್ಯಗಳ ಟಿ20 ಸರಣಿ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿವೆ. ಈ ಎಲ್ಲಾ ಪಂದ್ಯಗಳು ಎಲ್ಲಿ? ಯಾವಾಗ ನಡೆಯುತ್ತವೆ? ಯಾವ ವಾಹಿನಿಯ ಮೂಲಕ ವೀಕ್ಷಿಸಬಹುದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಈಗಾಗಲೇ ಭಾರತ ಹಾಗೂ ಇಂಗ್ಲೆಂಡ್ (India vs England) ತಂಡಗಳ ನಡುವಿನ ಸೀಮಿತ ಓವರ್‌ಗಳ ಸರಣಿಗೆ ಉಭಯ ಕ್ರಿಕೆಟ್ ಮಂಡಳಿಗಳು ತಂಡವನ್ನು ಪ್ರಕಟಿಸಿದ್ದು, ಭಾರತ ತಂಡವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸಲಿದ್ದಾರೆ. ಇನ್ನು ಇಯಾನ್ ಮಾರ್ಗನ್ (Eoin Morgan), ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವುದರಿಂದಾಗಿ ಇಂಗ್ಲೆಂಡ್ ಸೀಮಿತ ಓವರ್‌ಗಳ ತಂಡದ ನಾಯಕರಾಗಿ ಜೋಸ್ ಬಟ್ಲರ್‌ಗೆ (Jos Buttler) ಪಟ್ಟ ಕಟ್ಟಲಾಗಿದೆ. 

ಜುಲೈ 07ರಂದು ಸೌಥಾಂಪ್ಟನ್‌ನ ರೋಸ್‌ ಬೌಲ್ ಮೈದಾನದಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯದಿಂದ ವಿರಾಟ್ ಕೊಹ್ಲಿಗೆ (Virat Kohli) ವಿಶ್ರಾಂತಿ ನೀಡಲಾಗಿದ್ದು, ಎರಡನೇ ಟಿ20 ಪಂದ್ಯದಿಂದ ತಂಡ ಕೂಡಿಕೊಳ್ಳಲಿದ್ದಾರೆ. ಇನ್ನುಳಿದಂತೆ ಕೋವಿಡ್‌ನಿಂದಾಗಿ ಬರ್ಮಿಂಗ್‌ಹ್ಯಾಮ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ (Rohit Sharma), ಇದೀಗ ಸಂಪೂರ್ಣ ಗುಣಮುಖರಾಗಿ ತಂಡ ಕೂಡಿಕೊಂಡಿದ್ದು, ಬಲಿಷ್ಠ ಇಂಗ್ಲೆಂಡ್ ಎದುರು ತಂಡವನ್ನು ಯಶಸ್ವಿಯಾಗಿ ಮುನ್ನಡೆಸಲು ಎದುರು ನೋಡುತ್ತಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ಆರ್ಶದೀಪ್ ಸಿಂಗ್, ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆರ್ಶದೀಪ್ ಸಿಂಗ್ ಹಾಗೂ ಉಮ್ರಾನ್ ಮಲಿಕ್ ತಮಗೆ ಸಿಗುವ ಅವಕಾಶವನ್ನು ಎರಡು ಕೈಗಳಿಂದ ಬಾಚಿಕೊಳ್ಳಲು ಎದುರು ನೋಡುತ್ತಿದ್ದಾರೆ.

ಟಿ20 ಸರಣಿ ಜುಲೈ 7ಕ್ಕೆ ಆರಂಭವಾಗಲಿದ್ದು, ಮೊದಲ ಪಂದ್ಯಕ್ಕೆ ಸೌಥಾಂಪ್ಟನ್‌ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಬಳಿಕ ಜುಲೈ 9, 10ಕ್ಕೆ ಉಳಿದೆರಡು ಪಂದ್ಯಗಳು ಕ್ರಮವಾಗಿ ಬಮಿಂಗ್‌ಹ್ಯಾಮ್‌ ಹಾಗೂ ನಾಟಿಂಗ್‌ಹ್ಯಾಮ್‌ನಲ್ಲಿ ನಿಗದಿಯಾಗಿವೆ. ಏಕದಿನ ಪಂದ್ಯಗಳು ಜುಲೈ 12, 14 ಮತ್ತು 17ಕ್ಕೆ ಕ್ರಮವಾಗಿ ಓವಲ್‌, ಲಾರ್ಡ್ಸ್ ಹಾಗೂ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿವೆ.

ಭಾರತ ಎದುರಿನ ಸೀಮಿತ ಓವರ್‌ಗಳ ಸರಣಿಗೆ ಬಲಿಷ್ಠ ಇಂಗ್ಲೆಂಡ್ ಕ್ರಿಕೆಟ್ ತಂಡ..!

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಸೀಮಿತ ಓವರ್‌ಗಳ ಸರಣಿಯನ್ನು ಸೋನಿ ಸ್ಪೋರ್ಟ್ಸ್‌ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ. ಇದಷ್ಟೇ ಅಲ್ಲದೇ Sony LIV app ಮೂಲಕವೂ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಸೀಮಿತ ಓವರ್‌ಗಳ ಸರಣಿಯನ್ನು ವೀಕ್ಷಿಸಬಹುದಾಗಿದೆ.

ಭಾರತ-ಇಂಗ್ಲೆಂಡ್ ನಡುವಿನ ಸೀಮಿತ ಓವರ್‌ಗಳ ಸರಣಿಯ ವೇಳಾಪಟ್ಟಿ

ಜುಲೈ 07 - ಮೊದಲ ಟಿ20- ಸೌಥಾಂಪ್ಟನ್- ರಾತ್ರಿ 10.30
ಜುಲೈ 09 - ಎರಡನೇ ಟಿ20- ಬರ್ಮಿಂಗ್‌ಹ್ಯಾಮ್- ಸಂಜೆ 7.00
ಜುಲೈ 10 - ಮೂರನೇ ಟಿ20 - ನಾಟಿಂಗ್‌ಹ್ಯಾಮ್‌- ಸಂಜೆ 7.00  

ಜುಲೈ 12 - ಮೊದಲ ಏಕದಿನ - ಲಂಡನ್ - ಸಂಜೆ 5.30
ಜುಲೈ 14 - ಎರಡನೇ ಏಕದಿನ - ಲಂಡನ್ - ಸಂಜೆ 5.30
ಜುಲೈ 17 - ಮೂರನೇ ಏಕದಿನ - ಮ್ಯಾಂಚೆಸ್ಟರ್ - ಮಧ್ಯಾಹ್ನ 3.30

ಮೊದಲ ಟಿ20 ಪಂದ್ಯಕ್ಕೆ ಭಾರತ ತಂಡ

ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಆರ್ಶದೀಪ್‌ ಸಿಂಗ್, ಉಮ್ರಾನ್ ಮಲಿಕ್.

ಎರಡನೇ ಹಾಗೂ ಮೂರನೇ ಟಿ20 ಪಂದ್ಯಕ್ಕೆ ಭಾರತ ತಂಡ

ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್‌ ಪಟೇಲ್, ಉಮ್ರಾನ್ ಮಲಿಕ್.

ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ ನೋಡಿ

ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಹಲ್‌, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಆರ್ಶದೀಪ್ ಸಿಂಗ್.

ಭಾರತ ಎದುರಿನ ಟಿ20 ಸರಣಿಗೆ ಇಂಗ್ಲೆಂಡ್ ತಂಡ ಹೀಗಿದೆ ನೋಡಿ

ಜೋಸ್ ಬಟ್ಲರ್(ನಾಯಕ), ಮೋಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರನ್, ರಿಚರ್ಡ್ ಗ್ಲೀಸನ್, ಕ್ರಿಸ್ ಜೋರ್ಡನ್‌, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಟೈಮಲ್ ಮಿಲ್ಸ್‌, ಮ್ಯಾಥ್ಯೂ ಪಾರ್ಕಿನ್‌ಸನ್, ಜೇಸನ್ ರಾಯ್, ಫಿಲ್ ಸಾಲ್ಟ್‌, ರೀಸೆ ಟೋಪ್ಲೆ, ಡೇವಿಡ್ ಮಲಾನ್.

ಭಾರತ ಎದುರಿನ ಏಕದಿನ ಸರಣಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಹೀಗಿದೆ ನೋಡಿ

ಜೋಸ್ ಬಟ್ಲರ್(ನಾಯಕ), ಮೋಯಿನ್ ಅಲಿ, ಜಾನಿ ಬೇರ್‌ಸ್ಟೋವ್, ಹ್ಯಾರಿ ಬ್ರೂಕ್, ಬ್ರೈಡನ್ ಕೇರ್ಸ್‌, ಸ್ಯಾಮ್ ಕರ್ರನ್, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರೆಗ್ ಓವರ್‌ಟನ್, ಮ್ಯಾಥ್ಯೂ ಪಾರ್ಕಿನ್‌ಸನ್, ಜೋ ರೂಟ್, ಜೇಸನ್ ರಾಯ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್‌, ರೀಸೆ ಟೋಪ್ಲೆ, ಡೇವಿಡ್ ವಿಲ್ಲೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಸಿಸಿಗೆ ಬಿಗ್ ಶಾಕ್ ಕೊಟ್ಟ ಮುಕೇಶ್ ಅಂಬಾನಿ ನೇತೃತ್ವದ ಜಿಯೋ ಹಾಟ್‌ಸ್ಟಾರ್!
ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಕದನ; ಭಾರತಕ್ಕಿದೆ ಬಿಗ್ ಚಾಲೆಂಜ್!