
ನವದೆಹಲಿ(ಜು.16): ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ ನಡೆಯಬೇಕಿರುವ ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಗಳು ಮುಂದೂಡಿಕೆಯಾಗುವುದು ಬಹುತೇಕ ಖಚಿತಗೊಂಡಿದೆ.
ಸೆಪ್ಟೆಂಬರ್‌ನಲ್ಲಿ ಐಪಿಎಲ್ ಆರಂಭಗೊಳ್ಳಲಿರುವ ಕಾರಣ, 3 ಪಂದ್ಯಗಳ ಏಕದಿನ ಹಾಗೂ 3 ಪಂದ್ಯಗಳ ಟಿ20 ಸರಣಿಯನ್ನು 2021ರ ಸೆಪ್ಟೆಂಬರ್‌ನಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಕೊರೋನಾ ಸೋಂಕು ನಿಯಂತ್ರಣಕ್ಕೆ ಬರದ ಹಿನ್ನೆಲೆಯಲ್ಲಿ ಭಾರತಕ್ಕೆ ಬರಲು ಇಂಗ್ಲೆಂಡ್ ತಂಡ ಹಿಂದೇಟು ಹಾಕುತ್ತಿರುವುದು ಸಹ ಸರಣಿ ಮುಂದೂಡಲು ಕಾರಣ ಎನ್ನಲಾಗಿದೆ. ಶುಕ್ರವಾರ ಬಿಸಿಸಿಐ ಸಭೆ ನಡೆಯಲಿದ್ದು, ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬೀಳುವ ನಿರೀಕ್ಷೆ ಇದೆ.
ಕೊಹ್ಲಿ ಪಡೆಗೆ ದುಬೈನಲ್ಲಿ 6 ವಾರ ಅಭ್ಯಾಸ ಶಿಬಿರ?
ನವದೆಹಲಿ: ಸೆಪ್ಟೆಂಬರ್‌ನಿಂದ ನವೆಂಬರ್ ವರೆಗೂ ಐಪಿಎಲ್ ನಡೆಸಲು ಯೋಜನೆ ರೂಪಿಸುತ್ತಿರುವ ಬಿಸಿಸಿಐ, ಟೂರ್ನಿಗೂ ಮುನ್ನ ಕೇಂದ್ರ ಗುತ್ತಿಗೆ ಹೊಂದಿರುವ ಆಟಗಾರರನ್ನು ವಿಶೇಷ ವಿಮಾನದಲ್ಲಿ ದುಬೈಗೆ ಕಳುಹಿಸಿ, 6 ವಾರಗಳ ಅಭ್ಯಾಸ ಶಿಬಿರ ಆಯೋಜಿಸಲು ಚಿಂತನೆ ನಡೆಸಿದೆ.
ವಿಂಡೀಸ್ ವಿರುದ್ಧ 2ನೇ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಇಂಗ್ಲೆಂಡ್‌ಗೆ ಶಾಕ್..!
ಶುಕ್ರವಾರ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಸದ್ಯದ ಸ್ಥಿತಿಯಲ್ಲಿ ಭಾರತದಲ್ಲಿ ಐಪಿಎಲ್ ಆಯೋಜಿಸುವುದು ಅಸಾಧ್ಯವೆನಿಸಿರುವ ಕಾರಣ, ಯುಎಇನಲ್ಲಿ ಟೂರ್ನಿ ನಡೆಸುವುದು ಬಹುತೇಕ ಖಚಿತ ಎಂದು ವರದಿಯಲ್ಲಿ ಹೇಳಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.