IND vs ENG: ಕೊಹ್ಲಿ, ರೋಹಿತ್ ಇದ್ದರೂ ಗೆಲ್ಲಲು ಆಗಲಿಲ್ಲ.. ಏಕಾಂಗಿಯಾಗಿ ತಂಡ ಗೆಲ್ಲಿಸಿದ ಜೋ ರೂಟ್‌..!

Published : Jul 17, 2026, 08:05 AM IST
rohit sharma virat kohli

ಸಾರಾಂಶ

ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 4 ವಿಕೆಟ್‌ಗಳ ಸೋಲು ಕಂಡಿದೆ. ಮೊದಲು ಬ್ಯಾಟ್ ಮಾಡಿದ ಭಾರತ 233 ರನ್‌ಗಳಿಗೆ ಆಲೌಟ್ ಆಗಿದ್ದು, ಜೋ ರೂಟ್ ಅವರ ಅಜೇಯ 99 ರನ್‌ಗಳ ನೆರವಿನಿಂದ ಇಂಗ್ಲೆಂಡ್ ಗೆಲುವಿನ ನಗೆ ಬೀರಿತು.

ಮೊದಲ ಏಕದಿನ ಪಂದ್ಯ ಗೆದ್ದು ನಿಟ್ಟುಸಿರು ಬಿಟ್ಟಿದ್ದ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ ಮತ್ತೆ ಮಕಾಡೆ ಬಿದ್ದಿದೆ. ಕಾರ್ಡಿಫ್‌ನಲ್ಲಿ ನಡೆದ ಪಂದ್ಯದಲ್ಲಿ ಜೋ ರೂಟ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ಇಂಗ್ಲೆಂಡ್ ತಂಡ 4 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.

ಭಾರತ 233 ರನ್‌ಗಳಿಗೆ ಆಲೌಟ್

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ, ಇಂಗ್ಲೆಂಡ್ ಬೌಲರ್‌ಗಳ ಸಂಘಟಿತ ದಾಳಿಗೆ ತತ್ತರಿಸಿ 44 ಓವರ್‌ಗಳಲ್ಲಿ 233 ರನ್‌ಗಳಿಗೆ ಆಲೌಟ್ ಆಯಿತು. ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿತು. ಆದರೆ ಜೋ ರೂಟ್ ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಇಂಗ್ಲೆಂಡ್ ಗೆಲುವಿನ ದಡ ಸೇರಿಸಿತು.

ಜೋ ರೂಟ್ ಅಜೇಯ ಹೋರಾಟ

234 ರನ್‌ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ಗೆ ಆರಂಭದಲ್ಲೇ ಆಘಾತ ಎದುರಾಯಿತು. ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಬೆನ್ ಡಕೆಟ್ (0) ವಿಕೆಟ್ ಕಳೆದುಕೊಂಡರೆ, 8 ರನ್ ಆಗುವಷ್ಟರಲ್ಲಿ ಜೇಕಬ್ ಬೆಥೆಲ್ (04) ಔಟಾದರು. ಒಂದು ಹಂತದಲ್ಲಿ 125 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಇಂಗ್ಲೆಂಡ್ ಸೋಲಿನ ಭೀತಿಯಲ್ಲಿತ್ತು.

ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ಜೋ ರೂಟ್ 133 ಎಸೆತಗಳಲ್ಲಿ 9 ಬೌಂಡರಿಗಳ ಸಹಿತ ಅಜೇಯ 99 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಇವರಿಗೆ ಉತ್ತಮ ಸಾಥ್ ನೀಡಿದ ವಿಲ್ ಜಾಕ್ಸ್ 30 ರನ್ (44 ಎಸೆತ) ಗಳಿಸಿ 6ನೇ ವಿಕೆಟ್‌ಗೆ 72 ರನ್‌ಗಳ ಅಮೂಲ್ಯ ಜೊತೆಯಾಟವಾಡಿದರು. ಕೊನೆಯಲ್ಲಿ ಗಸ್ ಅಟ್ಕಿನ್ಸನ್ ಅವರೊಂದಿಗೆ ಮುರಿಯದ 7ನೇ ವಿಕೆಟ್‌ಗೆ 38 ರನ್ ಸೇರಿಸಿದ ರೂಟ್, ಇಂಗ್ಲೆಂಡ್‌ಗೆ ಗೆಲುವು ತಂದುಕೊಟ್ಟರು.

4 ವರ್ಷಗಳ ನಂತರ ಭಾರತದ ವಿರುದ್ಧ ಗೆಲುವು

ಭಾರತದ ವಿರುದ್ಧ ಸತತ 6 ಏಕದಿನ ಪಂದ್ಯಗಳನ್ನು ಸೋತಿದ್ದ ಇಂಗ್ಲೆಂಡ್, ಅಂತಿಮವಾಗಿ 7ನೇ ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ. ಇಂಗ್ಲೆಂಡ್ ತಂಡ ಭಾರತದ ವಿರುದ್ಧ ಕೊನೆಯ ಬಾರಿಗೆ 2022 ರಲ್ಲಿ ಏಕದಿನ ಪಂದ್ಯವನ್ನು ಗೆದ್ದಿತ್ತು. ಈಗ ಸುಮಾರು 4 ವರ್ಷಗಳ ದೀರ್ಘ ಕಾಯುವಿಕೆಯ ನಂತರ 50 ಓವರ್‌ಗಳ ಮಾದರಿಯಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್‌ಗೆ ಜಯ ಸಿಕ್ಕಿದೆ.

ಟೀಮ್ ಇಂಡಿಯಾ ಪರ ವೇಗಿ ಗುರ್ನೂರ್ ಬ್ರಾರ್ 10 ಓವರ್‌ಗಳಲ್ಲಿ 67 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಅಕ್ಷರ್ ಪಟೇಲ್ ಮತ್ತು ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರೂ ಸಹ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ಗೂ ಗುಡ್‌ಬೈ? ಲಾರ್ಡ್ಸ್ ಪಂದ್ಯವೇ ಕೊನೆಯಾಟ, ವಿಶ್ವಕಪ್‌ 2027ಕ್ಕೆ ಡೌಟ್!
ಇಂಗ್ಲೆಂಡ್ ವಿರುದ್ಧ ಹೊಸ ಮೈಲಿಗಲ್ಲು: ಆಂಗ್ಲರ ನೆಲದಲ್ಲಿ ಕಿವೀಸ್ ದಿಗ್ಗಜರ ದಾಖಲೆ ಹಿಂದಿಕ್ಕಿದ ರೋಹಿತ್-ಕೊಹ್ಲಿ ಜೋಡಿ!