
ಲಂಡನ್(ಆ.12): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಗೆ ಮಳೆ ಶಾಪ ಅಂಟಿಕೊಂಟಿದೆ. ಮೊದಲ ಟೆಸ್ಟ್ ಪಂದ್ಯ ಮಳೆಯಿಂದ ಡ್ರಾಗೊಂಡಿದೆ. ಇದೀಗ 2ನೇ ಟೆಸ್ಟ್ ಪಂದ್ಯಕ್ಕೂ ಮಳೆ ಕಾಟ ಶುರುವಾಗಿದೆ. ಮೊದಲ ದಿನದಾಟ ಆರಂಬಕ್ಕೆ ಮಳೆ ಅಡ್ಡಿಯಾಗಿದ್ದು, ಅಭಿಮಾನಿಗಳಗೆ ಮತ್ತೆ ನಿರಾಸೆಯಾಗಿದೆ.
INDvsENG 2ನೇ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್; ಟೀಂ ಇಂಡಿಯಾದಲ್ಲಿ 1 ಬದಲಾವಣೆ!
2ನೇ ಟೆಸ್ಟ್ ಪಂದ್ಯಕ್ಕಾಗಿ ಟಾಸ್ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಮಳೆ ವಕ್ಕರಿಸಿದೆ. ಇದರಿಂದ ಪಂದ್ಯ ಆರಂಭ ವಿಳಂಬವಾಗಲಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಪಂದ್ಯದಲ್ಲೂ ಇಂಗ್ಲೆಂಡ್ ಟಾಸ್ ಗೆದ್ದಿತ್ತು. ಆದರೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 183 ರನ್‌ಗೆ ಆಲೌಟ್ ಆಗಿತ್ತು.
ಟೀಂ ಇಂಡಿಯಾದಲ್ಲಿ 1 ಬದಲಾವಣೆ ಮಾಡಲಾಗಿದೆ. ಶಾರ್ದೂಲ್ ಠಾಕೂರ್ ಬದಲು ಇಶಾಂತ್ ಶರ್ಮಾ ಟೀಂ ಇಂಡಿಯಾ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಜೇಮ್ಸ್ ಆ್ಯಂಡರ್ಸ್ ಇಂಜುರಿ ಸಮಸ್ಯೆಯಿಂದ 2ನೇ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ಆದರೆ ಆ್ಯಂಡರ್ಸನ್ ಫಿಟ್ ಆಗಿದ್ದು, ದ್ವಿತೀಯ ಪಂದ್ಯ ಆಡುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.