ಅಭ್ಯಾಸ ಆರಂಭಿಸಿದ ಬೆನ್ ಸ್ಟೋಕ್ಸ್‌, ಜೋಫ್ರಾ ಆರ್ಚರ್‌

Kannadaprabha News   | Asianet News
Published : Jan 31, 2021, 10:11 AM IST
ಅಭ್ಯಾಸ ಆರಂಭಿಸಿದ ಬೆನ್ ಸ್ಟೋಕ್ಸ್‌, ಜೋಫ್ರಾ ಆರ್ಚರ್‌

ಸಾರಾಂಶ

ಭಾರತ ವಿರುದ್ದದ ಟೆಸ್ಟ್ ಸರಣಿ ಆಡಲು ಭಾರತಕ್ಕೆ ಬಂದಿಳಿದ ಬೆನ್ ಸ್ಟೋಕ್ಸ್‌, ಜೋಫ್ರಾ ಆರ್ಚರ್‌ ಹಾಗೂ ರೋರಿ ಬರ್ನ್ಸ್ ಚೆಪಾಕ್‌ ಮೈದಾನದಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಚೆನ್ನೈ(ಜ.31): ಇಂಗ್ಲೆಂಡ್‌ ತಂಡದ ಆಲ್ರೌಂಡರ್‌ ಬೆನ್‌ ಸ್ಟೋಕ್ಸ್‌, ಜೋಫ್ರಾ ಆರ್ಚರ್‌ ಹಾಗೂ ರೋರಿ ಬರ್ನ್ಸ್‍, ಶನಿವಾರ ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಅಭ್ಯಾಸ ಆರಂಭಿಸಿದರು. 6 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‌ ಮುಗಿಸಿದ ಈ ಮೂವರು ಆಟಗಾರರು ಅಂಗಳಿಕ್ಕಿಳಿದರು. 

ಶ್ರೀಲಂಕಾ ಪ್ರವಾಸಕ್ಕೆ ಈ ಮೂವರು ಆಟಗಾರರು ತೆರಳಿರಲಿಲ್ಲ. ಹೀಗಾಗಿ 4 ದಿನಗಳ ಮುಂಚಿತವಾಗಿ ಭಾರತ ಪ್ರವಾಸ ಕೈಗೊಂಡಿದ್ದರು. ಜನವರಿ 25ರಂದು ಸ್ಟೋಕ್ಸ್‌, ಆರ್ಚರ್‌, ಬರ್ನ್ಸ್ ಭಾರತಕ್ಕೆ ಬಂದಿಳಿದಿದ್ದರು. ನಾಯಕ ಜೋ ರೂಟ್‌ ಸೇರಿದಂತೆ ಇಂಗ್ಲೆಂಡ್‌ ತಂಡದ ಉಳಿದ ಆಟಗಾರರು ಫೆಬ್ರವರಿ 2 ರಿಂದ ಅಭ್ಯಾಸ ನಡೆಸಲಿದ್ದಾರೆ. ಸದ್ಯ ಕ್ವಾರಂಟೈನ್‌ನಲ್ಲಿರುವ ಇಂಗ್ಲೆಂಡ್‌ ತಂಡದ ಎಲ್ಲಾ ಆಟಗಾರರ 2ನೇ ಪರೀಕ್ಷಾ ವರದಿ ಬಂದಿದ್ದು ಯಾರಿಗೂ ಕೊರೋನಾ ಸೋಂಕು ತಗುಲಿಲ್ಲ ಎನ್ನುವುದು ದೃಢಪಟ್ಟಿದೆ. ರೂಟ್‌ ಸೇರಿದಂತೆ ತಂಡದ ಬಹುತೇಕ ಆಟಗಾರರು ಕೇವಲ 3 ದಿನಗಳ ಅಭ್ಯಾಸ ಮಾತ್ರ ನಡೆಸಲಿದ್ದಾರೆ. 

ಟೀಂ ಇಂಡಿಯಾ ಕ್ರಿಕೆಟಿಗರ ಕೋವಿಡ್ ಟೆಸ್ಟ್ ರಿಪೋರ್ಟ್ ಔಟ್‌..!

ಫೆಬ್ರವರಿ 5ರಿಂದ ಭಾರತ ವಿರುದ್ಧದ 4 ಟೆಸ್ಟ್‌ ಪಂದ್ಯಗಳ ಸರಣಿ ಆರಂಭವಾಗಲಿದೆ. ಸರಣಿಯ ಮೊದಲೆರಡು ಪಂದ್ಯಗಳು ಚೆನ್ನೈನಲ್ಲಿ ನಡೆಯಲಿದ್ದು, ನಂತರದ 2 ಪಂದ್ಯಗಳಿಗೆ ಅಹಮದಾಬಾದ್‌ ಆತಿಥ್ಯ ವಹಿಸಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮತ್ತಷ್ಟು ಪಾತಾಳಕ್ಕೆ ಕುಸಿದ ಟೀಂ ಇಂಡಿಯಾ!
ವಿರಾಟ್ ಕೊಹ್ಲಿಯಲ್ಲ, ಈ ಆಟಗಾರ ಹೆಚ್ಚು ಹಾರ್ಡ್‌ ವರ್ಕ್ ಮಾಡುವ ಆಟಗಾರ ಎಂದ ಯಶಸ್ವಿ ಜೈಸ್ವಾಲ್!