ಮಹಿಳಾ ಏಷ್ಯಾಕಪ್‌ ಟಿ20 ಟೂರ್ನಿ: ಇಂದು ಭಾರತ vs ಹಾಂಕಾಂಗ್‌ ಫೈಟ್; ಯಾವ ಚಾನೆಲ್‌ನಲ್ಲಿ ನೇರಪ್ರಸಾರ? ಎಷ್ಟು ಗಂಟೆಗೆ ಆರಂಭ?

Naveen Kodase   | Kannada Prabha
Published : Sep 03, 2026, 01:16 PM IST
Smriti Mandhana and Harmanpreet Kaur

ಸಾರಾಂಶ

ಮಹಿಳಾ ಏಷ್ಯಾಕಪ್‌ ಟಿ20 ಟೂರ್ನಿಯಲ್ಲಿ ಭಾರತ ತಂಡವು ಹಾಂಕಾಂಗ್‌ ವಿರುದ್ಧ ಸೆಣಸಲಿದ್ದು, ಹಿಂದಿನ ಪಂದ್ಯದಲ್ಲಿ ಎದುರಾದ ಬ್ಯಾಟಿಂಗ್‌ ಕುಸಿತದ ಸಮಸ್ಯೆಯನ್ನು ಸರಿಪಡಿಸಿಕೊಳ್ಳುವ ಗುರಿ ಹೊಂದಿದೆ. ಪಾಕಿಸ್ತಾನದ ವಿರುದ್ಧದ ಮಹತ್ವದ ಪಂದ್ಯಕ್ಕೂ ಮುನ್ನ ಈ ಪಂದ್ಯದಲ್ಲಿ ದೊಡ್ಡ ಗೆಲುವಿನೊಂದಿಗೆ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಭಾರತ ನೋಡುತ್ತಿದೆ.

ದುಬೈ: ಮಹಿಳಾ ಏಷ್ಯಾಕಪ್‌ ಟಿ20 ಟೂರ್ನಿಯಲ್ಲಿ ಭಾರತ ಗುರುವಾರ ಹಾಂಕಾಂಗ್‌ ವಿರುದ್ಧ ಸೆಣಸಲಿದ್ದು, ತಂಡ ತನ್ನ ಬ್ಯಾಟಿಂಗ್‌ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಎದುರು ನೋಡುತ್ತಿದೆ. ಮೊದಲ ಪಂದ್ಯದಲ್ಲಿ ಥಾಯ್ಲೆಂಡ್‌ ವಿರುದ್ಧ ದಿಢೀರ್‌ ಕುಸಿತ ಕಂಡಿದ್ದ ಭಾರತ, ಈ ಪಂದ್ಯದಲ್ಲಿ ಸುಧಾರಿತ ಆಟವಾಡುವ ವಿಶ್ವಾಸದಲ್ಲಿದೆ.

ಥಾಯ್ಲೆಂಡ್‌ ವಿರುದ್ಧ 10 ಓವರ್‌ ಬಳಿಕ 2 ವಿಕೆಟ್‌ಗೆ 101 ರನ್‌ ಗಳಿಸಿದ್ದ ಭಾರತ, ಆ ಬಳಿಕ 29 ರನ್‌ಗೆ 7 ವಿಕೆಟ್‌ ಕಳೆದುಕೊಂಡು 159 ರನ್‌ಗೆ ಇನ್ನಿಂಗ್ಸ್‌ ಮುಕ್ತಾಯಗೊಳಿಸಿತು. ಭಾರತದ ಸಾಧಾರಣ ಬ್ಯಾಟಿಂಗ್‌ ಪ್ರದರ್ಶನ ಪಂದ್ಯದ ಫಲಿತಾಂಶದ ಮೇಲೆ ಪರಿಣಾಮ ಬೀರದೆ ಇದ್ದರೂ, ಕೆಲ ಬಲಿಷ್ಠ ತಂಡಗಳ ವಿರುದ್ಧ ಈ ರೀತಿಯ ಪ್ರದರ್ಶನ ಮುಳುವಾಗಿ ಪರಿಣಮಿಸಬಹುದು. ಹೀಗಾಗಿ, ಹರ್ಮನ್‌ಪ್ರೀತ್‌ ಕೌರ್‌ ಪಡೆ ಎಚ್ಚರಿಕೆ ವಹಿಸಬೇಕಿದೆ.

ಮುಂದಿನ ಎದುರಾಳಿ ಪಾಕಿಸ್ತಾನ

ಈ ಪಂದ್ಯದ ಬಳಿಕ ಬದ್ಧವೈರಿ ಪಾಕಿಸ್ತಾನ ವಿರುದ್ಧ ಸೆಣಸಲಿರುವ 7 ಬಾರಿ ಚಾಂಪಿಯನ್‌ ಭಾರತ, ದೊಡ್ಡ ಗೆಲುವಿನೊಂದಿಗೆ ಆತ್ಮವಿಶ್ವಾಸ ವೃದ್ಧಿಸಿಕೊಳ್ಳುವತ್ತಲೂ ಗಮನ ಹರಿಸಲಿದೆ. ಬೌಲಿಂಗ್‌ ವಿಭಾಗದಲ್ಲಿ ಕೆಲ ಬದಲಾವಣೆ ಮಾಡಿಕೊಂಡು ಕಣಕ್ಕಿಳಿಯುವ ಸಾಧ್ಯತೆಯೂ ಇದೆ.

ಪಂದ್ಯ ಆರಂಭ: ರಾತ್ರಿ 8ಕ್ಕೆ, ನೇರ ಪ್ರಸಾರ: ಸೋನಿ ಸ್ಪೋರ್ಟ್ಸ್‌/ಸೋನಿ ಲಿವ್‌

ಚೊಚ್ಚಲ ಮಹಿಳಾ ಚಾಂಪಿಯನ್ಸ್‌ ಟ್ರೋಫಿಗೆ ಭಾರತ ಆತಿಥ್ಯ

ದುಬೈ: ಚೊಚ್ಚಲ ಆವೃತ್ತಿಯ ಮಹಿಳಾ ಚಾಂಪಿಯನ್ಸ್ ಲೀಗ್‌ ಟಿ20 ಕ್ರಿಕೆಟ್‌ ಟೂರ್ನಿಯು 2027ರಲ್ಲಿ ಭಾರತದಲ್ಲಿ ನಡೆಯಲಿದೆ ಎಂದು ಬುಧವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಘೋಷಿಸಿತು.

ಟೂರ್ನಿಯಲ್ಲಿ 6 ತಂಡಗಳು ಪಾಲ್ಗೊಳ್ಳಲಿದ್ದು, ಫೆ.14ರಿಂದ 28ರ ವರೆಗೂ ಮುಂಬೈ ಹಾಗೂ ವಡೋದರಾದಲ್ಲಿ ಪಂದ್ಯಗಳು ನಡೆಯಲಿವೆ.

‘ಟೂರ್ನಿಯನ್ನು ಶ್ರೀಲಂಕಾದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಶ್ರೀಲಂಕಾ ಕ್ರಿಕೆಟ್‌ ಸಂಕಷ್ಟದಲ್ಲಿರುವ ಕಾರಣ, ಆತಿಥ್ಯ ಹಕ್ಕನ್ನು ಭಾರತಕ್ಕೆ ನೀಡಲಾಯಿತು’ ಎಂದು ಐಸಿಸಿ ತಿಳಿಸಿದೆ. ಟೂರ್ನಿಯಲ್ಲಿ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್‌, ನ್ಯೂಜಿಲೆಂಡ್‌, ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ತಂಡಗಳು ಸೆಣಸಲಿವೆ. ಜು.6ರ ಐಸಿಸಿ ಟಿ20 ರ್‍ಯಾಂಕಿಂಗ್‌ ಆಧಾರದ ಮೇಲೆ ತಂಡಗಳಿಗೆ ಪ್ರವೇಶ ನೀಡಲಾಗಿದೆ.

6 ತಂಡಗಳು ರೌಂಡ್‌ ರಾಬಿನ್‌ ಮಾದರಿಯಲ್ಲಿ ಪರಸ್ಪರ ಸೆಣಸಲಿದ್ದು, ಅಗ್ರ-2 ತಂಡಗಳು ಫೈನಲ್‌ನಲ್ಲಿ ಆಡಲಿವೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಚಿನ್ ಜತೆ ಬೆಸ್ಟ್ ಕ್ರಿಕೆಟರ್ ಪ್ರಶಸ್ತಿ, 16 ಎಸೆತಗಳಲ್ಲಿ ಫಿಫ್ಟಿ; ಬಿಸಿಸಿಐ ಸೆಲೆಕ್ಟರ್ಸ್‌ಗೆ ಲಂಚ ನೀಡಲು ಹೋಗಿ ಬ್ಯಾನ್ ಆದ ಪ್ರತಿಭಾನ್ವಿತ ಕ್ರಿಕೆಟಿಗ..!
15 ರೂ ಹೇರ್ ಡೈ ಹೊಡೆದು ಕಿಂಗ್ ಚಾರ್ಲ್ಸ್ ಬೇಟಿಯಾದ್ರಾ ಪಾಕ್ ನಾಯಕ ಬಾಬರ್, ಫುಲ್ ಟ್ರೋಲ್