
ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ಹಾಲಿ ಚಾಂಪಿಯನ್ ಭಾರತ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ನಮೀಬಿಯಾ ತಂಡದ ನಾಯಕ ಗೆರಾಲ್ಡ್ ಎರಾಸ್‌ಮಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಭಾರತ ಹಾಗೂ ನಮೀಬಿಯಾ ನಡುವಿನ ಪಂದ್ಯಕ್ಕೆ ಇಲ್ಲಿನ ಐತಿಹಾಸಿಕ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಭಾರತ ತಂಡವು ತಾನಾಡಿದ ಮೊದಲ ಪಂದ್ಯದಲ್ಲಿ ಯುಎಸ್‌ಎ ಎದುರು 29 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು. ನಮೀಬಿಯಾ ತಂಡವು ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ.
ಇನ್ನು ನಿರೀಕ್ಷೆಯಂತೆಯೇ ಭಾರತ ತಂಡದಲ್ಲಿ ಕಳೆದ ಪಂದ್ಯಕ್ಕೆ ಹೋಲಿಸಿದರೆ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಅಭಿಷೇಕ್ ಶರ್ಮಾ ಸಂಪೂರ್ಣ ಫಿಟ್ ಆಗಿರದ ಹಿನ್ನೆಲೆಯಲ್ಲಿ ಇಂದಿನ ಪಂದ್ಯದಲ್ಲಿ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಸಂಜು ಸ್ಯಾಮ್ಸನ್ ಆರಂಭಿಕನಾಗಿ ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದಾರೆ. ಇನ್ನು ಜಸ್ಪ್ರೀತ್ ಬುಮ್ರಾ ತಂಡ ಕೂಡಿಕೊಂಡಿರುವುದರಿಂದ ಮೊಹಮ್ಮದ್ ಸಿರಾಜ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಸಿರಾಜ್, ಯುಎಸ್‌ಎ ಎದುರು 3 ವಿಕೆಟ್ ಕಬಳಿಸಿದ್ದರು. ಹೀಗಿದ್ದೂ ಸಿರಾಜ್‌ಗೆ ವಿಶ್ರಾಂತಿ ನೀಡಲಾಗಿದೆ.
ಭಾರತ:
ಸಂಜು ಸ್ಯಾಮ್ಸನ್, ಇಶಾನ್ ಕಿಶನ್(ವಿಕೆಟ್ ಕೀಪರ್), ತಿಲಕ್ ವರ್ಮಾ. ಸೂರ್ಯಕುಮಾರ್ ಯಾದವ್(ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ. ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ನಮೀಬಿಯಾ:
ಲೌರೆನ್ ಸ್ಟೀನ್‌ಕಾಪ್, ಜಾನ್ ಫ್ರೈಲಿಂಕ್, ಜಾನ್ ನಿಕೊಲ್ ಲೋಫ್ಟಿ ಈಟನ್, ಗೆರಾಲ್ಡ್ ಎರಾಸ್ಮಸ್(ನಾಯಕ), ಜೆಜೆ ಸ್ಮಿತ್, ಜೇನ್ ಗ್ರೀನ್(ವಿಕೆಟ್ ಕೀಪರ್), ರೂಬಿನ್ ಟ್ರಂಪ್ಲನ್, ಮಲಾನ್ ಕ್ರುಗರ್, ಬೆರ್ನಾಲ್ಡ್ ಸೋಲ್ಜ್, ಬೆನ್ ಶಿಕಾಂಗೊ, ಮ್ಯಾಕ್ಸ್ ಹೆಯಿಂಗೊ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.