
ಕ್ರೈಸ್ಟ್‌ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯು ಇಂದಿನಿಂದ ಆರಂಭವಾಗಲಿದೆ. ಇನ್ನು ಈ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಅಷ್ಟಕ್ಕೂ ಇಂದಿನ ಹವಾಮಾನ ವರದಿ ಹೇಗಿದೆ? ಪಂದ್ಯ ರದ್ದಾಗುವ ಸಾಧ್ಯತೆ ಎಷ್ಟು ನೋಡೋಣ ಬನ್ನಿ.
ಕ್ರೈಸ್ಟ್‌ಚರ್ಚ್‌ನಲ್ಲಿಂದು ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಆರಂಭವಾಗಲಿದೆ. ಈ ಹೈವೋಲ್ಟೇಜ್ ಮ್ಯಾಚ್ ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಎರಡು ತಂಡಗಳು ಮೊದಲ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡಲು ಎದುರು ನೋಡುತ್ತಿವೆ.
ಮೇಲ್ನೋಟಕ್ಕೆ ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಇಂಡಿಯಾ, ಸಾಕಷ್ಟು ಸಮತೋಲಿತವಾಗಿ ಕಂಡು ಬರುತ್ತಿದೆ. ಇನ್ನು ಇದೆಲ್ಲದರ ನಡುವೆ ಮೊದಲ ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸುವ ಸಾಧ್ಯತೆಯೂ ಇದೆ. ಈ ಹಿಂದೆ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಐದನೇ ಹಾಗೂ ನಿರ್ಣಾಯಕ ಟಿ20 ಪಂದ್ಯವು ಮಳೆಯಿಂದ ಅರ್ಧಕ್ಕೆ ರದ್ದಾಗಿತ್ತು. ಇದೀಗ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ.
AccuWeather ವರದಿಯ ಪ್ರಕಾರ ಕ್ರೈಸ್ಟ್‌ಚರ್ಚ್‌ನಲ್ಲಿ ತಾಪಮಾನ 9 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯುವ ಸಾಧ್ಯತೆಯಿದೆ. ಹೀಗಾಗಿ ಭಾರತೀಯ ಆಟಗಾರರು ತಣ್ಣನೆಯ ವಾತಾವರಣದಲ್ಲಿ ಆಡಬೇಕಾದ ಒತ್ತಡಕ್ಕೆ ಒಳಗಾಗಲಿದ್ದಾರೆ. ಭಾರತದ ವಾತಾವರಣಕ್ಕೂ ನ್ಯೂಜಿಲೆಂಡ್‌ನ ವಾತಾವರಣಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಇದಷ್ಟೇ ಅಲ್ಲದೇ ಪಂದ್ಯ ನಡೆಯುವ ಸಂದರ್ಭದಲ್ಲಿ ಗಂಟೆಗೆ 26 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಪಂದ್ಯ ನಡೆಯುವಾಗ ಮೈದಾನದ ಸುತ್ತಮುತ್ತ 42% ಕಪ್ಪು ಮೋಡ ಕವಿಯುವ ನಿರೀಕ್ಷೆಯಿದ್ದು, ಪಂದ್ಯದ ನಡುವೆ ಆಗಾಗ ಮಳೆ ಬರುವ ಸಾಧ್ಯತೆಯೂ ಇದೆ.
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದ್ದರೂ, ಸಂಪೂರ್ಣ ಮ್ಯಾಚ್ ರದ್ದಾಗುವ ಸಾಧ್ಯತೆ ಕಡಿಮೆ. ಇನ್ನು ಭಾರತೀಯ ಕಾಲಮಾನ 12.30ಕ್ಕೆ ಈ ಹೈವೋಲ್ಟೇಜ್ ಆರಂಭವಾಗಲಿದ್ದು, ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಲಿದೆ.
ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್(ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಪ್ರಿನ್ಸ್ ಯಾದವ್, ಅರ್ಶದೀಪ್ ಸಿಂಗ್
ಫಿಲ್ ಅಲೆನ್, ಟಿಮ್ ಸೀಫರ್ಟ್(ವಿಕೆಟ್ ಕೀಪರ್), ಡೆವೊನ್ ಕಾನ್‌ವೇ, ಗ್ಲೆನ್ ಫಿಲಿಫ್ಸ್, ಡೇರಲ್ ಮಿಚೆಲ್, ಮೈಕಲ್ ಬ್ರಾಸ್‌ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ನೇಥನ್ ಸ್ಮಿತ್, ಕೈಲ್ ಜೇಮಿಸನ್, ಮ್ಯಾಟ್ ಹೆನ್ರಿ, ಲಾಕಿ ಫರ್ಗ್ಯೂಸನ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.