ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ.
ಬೆಂಗಳೂರು: ಮಳೆಯ ಭೀತಿಯ ನಡುವೆಯೇ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಎರಡನೇ ದಿನ ಚಾಲನೆ ಸಿಕ್ಕಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಕತ್ತು ನೋವಿನ ಸಮಸ್ಯೆಯಿಂದ ಶುಭ್‌ಮನ್ ಗಿಲ್ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟಕ್ಕೆ ಮಳೆರಾಯ ಅಡ್ಡಿಯಾಗಿದ್ದ. ನಿರಂತರವಾಗಿ ಸುರಿದ ಮಳೆಯಿಂದಾಗಿ ಮೊದಲ ದಿನ ಟಾಸ್ ಕೂಡಾ ನಡೆಸಲು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಎರಡನೇ ದಿನದಾಟಕ್ಕೆ ಬೆಂಗಳೂರಿನಲ್ಲಿ ಮಳೆರಾಯ ಕೊಂಚ ಬ್ರೇಕ್ ಕೊಟ್ಟಿರುವುದರಿಂದ ಟಾಸ್ ನಡೆಸಲಾಗಿದೆ.
undefined
ಭಾರತ ತಂಡವು ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಮೂವರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿದಿದೆ. ಹೀಗಾಗಿ ಆಕಾಶ್ ದೀಪ್ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಕುಲ್ದೀಪ್ ಯಾದವ್ ಟೆಸ್ಟ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಶುಭ್‌ಮನ್ ಗಿಲ್ ಬದಲಿಗೆ ಸರ್ಫರಾಜ್ ಖಾನ್ ಭಾರತ ಟೆಸ್ಟ್ ತಂಡ ಕೂಡಿಕೊಂಡಿದ್ದಾರೆ.
ಉಭಯ ತಂಡಗಳ ಆಟಗಾರರ ಪಟ್ಟಿ
ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆ ಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ನ್ಯೂಜಿಲೆಂಡ್: ಡೆವೋನ್ ಕಾನ್‌ವೇ, ಟಾಮ್ ಲೇಥಮ್ (ನಾಯಕ), ವಿಲ್ ಯಂಗ್, ರಚಿನ್ ರವೀಂದ್ರ, ಡೇರಲ್ ಮಿಚೆಲ್, ಟಾಮ್ ಬಂಡೆಲ್, ಗ್ಲೆನ್ ಫಿಲಿಪ್ಸ್, ಟಿಮ್ ಸೌಥಿ, ಮ್ಯಾಟ್ ಹೆನ್ರಿ, ಅಜಾಜ್ ಪಟೇಲ್, ವಿಲಿಯಮ್ ಒರ್ಕ