
ನವದೆಹಲಿ(ಮೇ.28): ಭಾರತ-ನ್ಯೂಜಿಲೆಂಡ್ ನಡುವೆ ಜೂ.18ರಿಂದ ಸೌಥಾಂಪ್ಟನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ಟಿಕೆಟ್‌ಗೆ ಭಾರೀ ಬೇಡಿಕೆ ಏರ್ಪಟ್ಟಿತ್ತು ಎಂದು ಮೂಲಗಳು ತಿಳಿಸಿವೆ.
ಭಾರತೀಯ ಅಭಿಮಾನಿಗಳು 2 ಲಕ್ಷ ರುಪಾಯಿವರೆಗೂ ಹಣ ನೀಡಿ ಟಿಕೆಟ್ ಖರೀದಿಸಿದ್ದಾರೆ ಎನ್ನುವ ಅಚ್ಚರಿಯ ವಿಚಾರ ಬೆಳಕಿಗೆ ಬಂದಿದೆ. ಮಾರಾಟಕ್ಕೆಂದು ಮೀಸಲಿಟ್ಟ ಟಿಕೆಟ್‌ಗಳ ಪೈಕಿ ಅರ್ಧದಷ್ಟನ್ನು ಆತಿಥೇಯ ಕ್ರಿಕೆಟ್ ಸಂಸ್ಥೆ ಲಾಟರಿ ಮೂಲಕ ಮಾರಾಟ ನಡೆಸಿದೆ. ಇನ್ನರ್ಧ ಭಾಗವನ್ನು ಐಸಿಸಿಯ ಟ್ರಾವೆಲ್ ಏಜೆಂಟ್‌ಗಳು ಮಾರಾಟ ಮಾಡಿದ್ದಾರೆ. ಟ್ರಾವೆಲ್ ಏಜೆಂಟ್‌ಗಳು ನಡೆಸಿರುವ ಪ್ರಕ್ರಿಯೆಯಲ್ಲಿ ದುಬಾರಿ ಮೊತ್ತಕ್ಕೆ ಟಿಕೆಟ್ ಮಾರಾಟವಾಗಿದೆ ಎಂದು ತಿಳಿದುಬಂದಿದೆ.
ಟೆಸ್ಟ್ ವಿಶ್ವಕಪ್ ಎಂದೇ ಕರೆಯಲಾಗುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಮೈದಾನದಲ್ಲಿ ಪಂದ್ಯ ವೀಕ್ಷಿಸಲು 4,000 ಮಂದಿಗೆ ಪ್ರವೇಶ ನೀಡಲಿದ್ದೇವೆ ಎಂದು ಹ್ಯಾಂಪ್ಶೈರ್ ಕೌಂಟಿ ಕ್ಲಬ್ ಮುಖ್ಯಸ್ಥ ರಾಡ್ ಬ್ರ್ಯಾನ್ಸ್‌ಗ್ರೋವ್ ತಿಳಿಸಿದ್ದಾರೆ. ಚೊಚ್ಚಲ ಟೆಸ್ಟ್ ವಿಶ್ವಕಪ್ ಯಾರು ಗೆಲ್ಲಲಿದ್ದಾರೆ ಎನ್ನುವ ಕುತೂಹಲ ಜೋರಾಗಿದೆ.
ಟೆಸ್ಟ್ ವಿಶ್ವಕಪ್ ಫೈನಲ್: 4,000 ಪ್ರೇಕ್ಷಕರಿಗೆ ಸ್ಟೇಡಿಯಂ ಪ್ರವೇಶಿಸಲು ಅವಕಾಶ
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಹಾಗೂ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡಗಳು ಇದುವರೆಗೂ ಐಸಿಸಿ ಟ್ರೋಫಿ ಜಯಿಸಿಲ್ಲ. ಹೀಗಾಗಿ ಈ ಬಾರಿಯ ಇಬ್ಬರಲ್ಲಿ ಒಬ್ಬರು ಐಸಿಸಿ ಟ್ರೋಫಿ ಗೆಲ್ಲಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.