
ರಾಯ್ಪುರ: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಏಕದಿನ ಪಂದ್ಯ ಗೆದ್ದ ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯವನ್ನೂ ಗೆದ್ದು ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ. ಈ ನಡುವೆ ಎರಡನೇ ಪಂದ್ಯದ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಹಿನ್ನೆಲೆ ಕಿವೀಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು, ಹೈದರಾಬಾದ್ ಪಂದ್ಯದಂತೆ ಈ ಪಂದ್ಯದಲ್ಲೂ ಎರಡೂ ತಂಡಗಳು ಉತ್ತಮ ಪೈಪೋಟಿ ನೀಡಬಹುದು.
ಹೈದರಾಬಾದ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಶುಭ್‌ಮನ್ ಗಿಲ್ ದ್ವಿಶತಕ ಸಿಡಿಸಿ ಹಲವು ದಾಖಲೆಗಳನ್ನು ಸೃಷ್ಟಿಸಿದ್ದು, ಈ ಪಂದ್ಯದಲ್ಲೂ ಉತ್ತಮ ಆಟವಾಡುವ ನಿರೀಕ್ಷೆ ಇದೆ. ಇನ್ನು, ಮೊಹಮ್ಮದ್ ಸಿರಾಜ್ ಸಹ ತಮ್ಮ ತವರು ನೆಲದಲ್ಲಿ ಅದ್ಭುತ ಬೌಲಿಂಗ್ ಮಾಡಿದ್ದರು. ಈ ಪಂದ್ಯದಲ್ಲೂ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಹಾಗೂ ನ್ಯೂಜಲೆಂಡ್ ತಂಡದ ನಾಯಕ ಟಾಮ್ ಲೇಥಂ ನಡುವಿನ ಎರಡೂ ತಂಡಗಳು ಪಂದ್ಯ ಗೆಲ್ಲಲು ಈ ಪಂದ್ಯದಲ್ಲಿ ಉತ್ತಮ ಪೈಪೋಟಿ ನೀಡುವ ನಿರೀಕ್ಷೆ ಇದೆ.
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ಹಂತಿಮ ಹನ್ನೊಂದು ಆಟಗಾರರ ಪಟ್ಟಿ ಹೀಗಿದೆ ನೋಡಿ..
ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಕುಲ್‌ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ನ್ಯೂಜಿಲೆಂಡ್: ಎಫ್ ಅಲೆನ್, ಡಿ ಕಾನ್ವೇ, ಎಚ್. ನಿಕೋಲ್ಸ್, ಡಿ. ಮಿಚೆಲ್, ಟಾಮ್ ಲೇಥಂ (ನಾಯಕ ಹಾಗೂ ವಿಕೆಟ್ ಕೀಪರ್), ಜಿ. ಫಿಲಿಪ್ಸ್, ಎಂ. ಬ್ರೇಸ್‌ವೆಲ್, ಎಂ. ಸ್ಯಾಂಟ್‌ನರ್, ಎಚ್. ಶಿಪ್ಲಿ, ಬಿ. ಟಿಕ್ನರ್ ಹಾಘೂ ಎಲ್. ಫರ್ಗ್ಯೂಸನ್
ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಏಕದಿನ ಸರಣಿ ವೇಳಾಪಟ್ಟಿ
ಮೊದಲ ಏಕದಿನ: ಜನವರಿ 18 - ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನ, ಹೈದರಾಬಾದ್
ಎರಡನೇ ಏಕದಿನ: ಜನವರಿ 21 - ನಯಾ ರಾಯ್ಪುರ ಅಂತಾರಾಷ್ಟ್ರೀಯ ಮೈದಾನ, ರಾಯ್ಪುರ
ಮೂರನೇ ಏಕದಿನ: ಜನವರಿ 24 - ಹೋಳ್ಕರ್ ಸ್ಟೇಡಿಯಂ, ಇಂಡೋರ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.