ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟಿ20 ಪಂದ್ಯಕ್ಕೂ ಮೊದಲು ಗೊಂದಲಕ್ಕೆ ಸಿಲುಕಿದ ಗೌತಮ್ ಗಂಭೀರ್!

Published : Dec 09, 2025, 05:41 PM IST
Gautam Gambhir head coach india

ಸಾರಾಂಶ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಭಾರತ ತಂಡ ಸಜ್ಜಾಗಿದ್ದು, ಆಡುವ ಬಳಗವನ್ನು ಆಯ್ಕೆ ಮಾಡುವಲ್ಲಿ ಗೊಂದಲದಲ್ಲಿದೆ. ವಿಕೆಟ್ ಕೀಪರ್ ಸ್ಥಾನಕ್ಕಾಗಿ ಸಂಜು ಸ್ಯಾಮ್ಸನ್ ಮತ್ತು ಜಿತೇಶ್ ಶರ್ಮಾ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಕಟಕ್: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯಕ್ಕೆ ಭಾರತ ಇಂದು ಸಜ್ಜಾಗಿದ್ದು, ಆಡುವ ಬಳಗವನ್ನು ಆಯ್ಕೆ ಮಾಡುವುದು ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್‌ಗೆ ದೊಡ್ಡ ತಲೆನೋವಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಟಿ20ಯಲ್ಲಿ ಉತ್ತಮ ದಾಖಲೆ ಹೊಂದಿರುವ ಸಂಜು ಸ್ಯಾಮ್ಸನ್‌ಗೆ ಆಡುವ ಬಳಗದಲ್ಲಿ ಅವಕಾಶ ನೀಡಬೇಕೇ ಅಥವಾ ಮಧ್ಯಮ ಕ್ರಮಾಂಕದ ಬ್ಯಾಟರ್ ಜಿತೇಶ್ ಶರ್ಮಾಗೆ ಮಣೆ ಹಾಕಬೇಕೇ ಎಂಬ ಬಗ್ಗೆ ಟೀಮ್ ಮ್ಯಾನೇಜ್ಮೆಂಟ್ ತಲೆಕೆಡಿಸಿಕೊಂಡಿದೆ. ಸಂಜು ದಕ್ಷಿಣ ಆಫ್ರಿಕಾ ವಿರುದ್ಧ ಓಪನರ್ ಆಗಿ ಎರಡು ಶತಕ ಸಿಡಿಸಿದ ದಾಖಲೆ ಹೊಂದಿದ್ದಾರೆ.

ಮೊದಲ ಪಂದ್ಯಕ್ಕೂ ಮುನ್ನ ಗೊಂದಲದಲ್ಲಿ ಟೀಂ ಮ್ಯಾನೇಜ್‌ಮೆಂಟ್

ಇದೇ ವೇಳೆ, ಶುಭಮನ್ ಗಿಲ್ ತಂಡಕ್ಕೆ ಮರಳಿರುವ ಕಾರಣ ಸಂಜು ಇಂದು ಓಪನರ್ ಆಗಿ ಕಣಕ್ಕಿಳಿಯಲು ಸಾಧ್ಯವಿಲ್ಲ. ಅಭಿಷೇಕ್ ಶರ್ಮಾ ಜೊತೆ ಗಿಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಈ ಪರಿಸ್ಥಿತಿಯಲ್ಲಿ ಸಂಜು ಮಧ್ಯಮ ಕ್ರಮಾಂಕದಲ್ಲಿ ಆಡಬೇಕಾಗುತ್ತದೆ. ಏಷ್ಯಾಕಪ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲೂ ಸಂಜು ಮಧ್ಯಮ ಕ್ರಮಾಂಕದಲ್ಲಿ ಆಡಿದ್ದರು. ಏಷ್ಯಾಕಪ್ ಫೈನಲ್‌ನಲ್ಲಿ 24 ರನ್ ಗಳಿಸಿ ನಿರ್ಣಾಯಕ ಜೊತೆಯಾಟವಾಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಸಂಜುಗೆ ಅವಕಾಶ ನೀಡಲಾಗಿತ್ತು. ಎರಡನೇ ಪಂದ್ಯದಲ್ಲಿ ಸಂಜು ಮೂರನೇ ಕ್ರಮಾಂಕದಲ್ಲಿ ಆಡಿದ್ದರು. ಆದರೆ, ದೊಡ್ಡ ಇನ್ನಿಂಗ್ಸ್ ಆಡಲು ವಿಫಲರಾದರು. ಹೀಗಾಗಿ ಕೊನೆಯ ಮೂರು ಪಂದ್ಯಗಳಲ್ಲಿ ಜಿತೇಶ್ ಶರ್ಮಾ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಜಿತೇಶ್‌ಗೆ ಮುಂದುವರಿಸಬೇಕೇ ಅಥವಾ ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಪ್ರದರ್ಶನ ನೀಡಿರುವ ಸಂಜುಗೆ ಅವಕಾಶ ನೀಡಬೇಕೇ ಎಂಬ ಗೊಂದಲದಲ್ಲಿ ಟೀಮ್ ಮ್ಯಾನೇಜ್ಮೆಂಟ್ ಇದೆ.

ಮೊದಲ ಪಂದ್ಯದಲ್ಲಿ ಜಿತೇಶ್ ಶರ್ಮಾ ಮಿಂಚಿದರೆ, ಮುಂದಿನ ಪಂದ್ಯಗಳಲ್ಲೂ ಸಂಜು ಬೆಂಚ್ ಕಾಯಬೇಕಾಗುತ್ತದೆ. ಇದು ಸಂಜು ಅವರ ಟಿ20 ವಿಶ್ವಕಪ್ ಕನಸಿಗೆ ಹಿನ್ನಡೆಯಾಗಬಹುದು. ಆದರೆ ಮೊದಲ ಪಂದ್ಯದಲ್ಲಿ ಮಿಂಚುವ ಆಟಗಾರನಿಗೆ ಸರಣಿಯ ಮುಂದಿನ ಪಂದ್ಯಗಳಲ್ಲೂ ಅವಕಾಶ ಸಿಗಲಿದೆ.

ಎರಡನೇ ದೊಡ್ಡ ಆಯ್ಕೆ ಬಿಕ್ಕಟ್ಟು ಹರ್ಷಿತ್ ರಾಣಾ ಮತ್ತು ಅರ್ಷದೀಪ್ ಸಿಂಗ್ ವಿಚಾರದಲ್ಲಿದೆ. ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಅರ್ಶದೀಪ್ ಆಗಿದ್ದರೂ, ಬ್ಯಾಟಿಂಗ್ ಸಾಮರ್ಥ್ಯವನ್ನು ಪರಿಗಣಿಸಿ ಹರ್ಷಿತ್ ರಾಣಾಗೆ ಅವಕಾಶ ನೀಡಬೇಕೆಂಬ ಕೂಗು ಕೇಳಿಬರುತ್ತಿದೆ. ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ ಬ್ಯಾಟಿಂಗ್ ವಿಭಾಗದಲ್ಲಿದ್ದರೆ, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅಕ್ಷರ್ ಪಟೇಲ್ ಬೌಲಿಂಗ್ ವಿಭಾಗದಲ್ಲಿರುವುದು ಖಚಿತ. ಟಿ20 ಸರಣಿಯ ಮೊದಲ ಪಂದ್ಯ ಇಂದು ರಾತ್ರಿ 7 ಗಂಟೆಗೆ ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ:

ಸೂರ್ಯಕುಮಾರ್ ಯಾದವ್(ನಾಯಕ), ಶುಭ್‌ಮನ್ ಗಿಲ್(ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಸಂಜು ಸ್ಯಾಮ್ಸನ್/ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್

ಪಂದ್ಯ ಆರಂಭ: ಸಂಜೆ 7 ಗಂಟೆಗೆ

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್‌, ಜಿಯೋ ಹಾಟ್‌ಸ್ಟಾರ್

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ಎಷ್ಟು ಗಂಟೆಯಿಂದ ಆರಂಭ? ಎಲ್ಲಿ ವೀಕ್ಷಿಸಬಹುದು? ಸಂಭಾವ್ಯ ತಂಡ ಇಲ್ಲಿದೆ ನೋಡಿ
ಆ್ಯಶಸ್ ಸರಣಿ: ಸತತ ಎರಡು ಪಂದ್ಯ ಗೆದ್ದು ಬೀಗಿದ್ದ ಆಸೀಸ್‌ಗೆ ಆಘಾತ, ಸ್ಟಾರ್ ಬೌಲರ್ ಹೊರಕ್ಕೆ!