ಗುವಾಹಟಿ ಟೆಸ್ಟ್: ಸರಣಿ ಸೋಲಿನ ಭೀತಿಯಲ್ಲಿರುವ ಭಾರತ ತಂಡದಲ್ಲಿ 2 ಮಹತ್ವದ ಬದಲಾವಣೆ?

Published : Nov 21, 2025, 11:36 AM IST
ind vs sa test

ಸಾರಾಂಶ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಸೋತಿರುವ ಭಾರತ, ಸರಣಿ ಉಳಿಸಿಕೊಳ್ಳಲು ಗುವಾಹಟಿಯಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ನಾಯಕ ಶುಭಮನ್ ಗಿಲ್ ಗಾಯಗೊಂಡಿರುವ ಕಾರಣ, ರಿಷಭ್ ಪಂತ್ ತಂಡವನ್ನು ಮುನ್ನಡೆಸಲಿದ್ದಾರೆ.

ಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಕ್ರಿಕೆಟ್ ಟೆಸ್ಟ್‌ಗೆ ಭಾರತ ನಾಳೆ ಕಣಕ್ಕಿಳಿಯಲಿದ್ದು, ಪ್ಲೇಯಿಂಗ್ XIನಲ್ಲಿ ಏನೆಲ್ಲಾ ಬದಲಾವಣೆಗಳಾಗಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಮೊದಲ ಟೆಸ್ಟ್‌ನಲ್ಲಿ ಸೋತ ತಂಡದಲ್ಲಿ ಭಾರತ ಕನಿಷ್ಠ ಎರಡು ಬದಲಾವಣೆ ಮಾಡುವುದು ಖಚಿತ. ಗಾಯಗೊಂಡಿರುವ ನಾಯಕ ಶುಭಮನ್ ಗಿಲ್ ನಾಳೆ ಆಡುವ ಸಾಧ್ಯತೆ ಕಡಿಮೆ ಇರುವುದರಿಂದ, ಅವರ ಬದಲಿಗೆ ಯಾರು ತಂಡಕ್ಕೆ ಬರುತ್ತಾರೆ ಎಂದು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಗಿಲ್ ಇಂದು ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದರೂ, ಎರಡನೇ ಟೆಸ್ಟ್‌ನಲ್ಲಿ ಆಡುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

ಶುಭ್‌ಮನ್ ಗಿಲ್ ಅನುಪಸ್ಥಿತಿಯಲ್ಲಿ ಉಪನಾಯಕ ರಿಷಭ್ ಪಂತ್ ನಾಳಿನ ಎರಡನೇ ಟೆಸ್ಟ್‌ನಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ. ಗಿಲ್ ಬದಲಿಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಅಥವಾ ದೇವದತ್ ಪಡಿಕ್ಕಲ್‌ಗೆ ಅವಕಾಶ ಸಿಗುವ ನಿರೀಕ್ಷೆಯಿದೆ. ಸಾಯಿ ಸುದರ್ಶನ್‌ಗೆ ಹೆಚ್ಚಿನ ಅವಕಾಶವಿದೆ ಎನ್ನಲಾಗುತ್ತಿದೆ. ಸಾಯಿ ಸುದರ್ಶನ್ ಪ್ಲೇಯಿಂಗ್ XIಗೆ ಬಂದರೆ, ಮೂರನೇ ಕ್ರಮಾಂಕದಲ್ಲೂ ಬದಲಾವಣೆಯಾಗಲಿದೆ. ಮೊದಲ ಟೆಸ್ಟ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಆಡಿದ್ದ ವಾಷಿಂಗ್ಟನ್ ಸುಂದರ್ ಮಧ್ಯಮ ಕ್ರಮಾಂಕಕ್ಕೆ ಬದಲಾಗಲಿದ್ದಾರೆ. ಸಾಯಿ ಸುದರ್ಶನ್ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಗಿಲ್ ಆಡುತ್ತಿದ್ದ ನಾಲ್ಕನೇ ಕ್ರಮಾಂಕದಲ್ಲಿ ಧ್ರುವ್ ಜುರೆಲ್ ಕ್ರೀಸ್‌ಗೆ ಬರಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಒಂದು ಬದಲಾವಣೆ

ಕೋಲ್ಕತ್ತಾದಲ್ಲಿ ನಾಲ್ವರು ಸ್ಪಿನ್ನರ್‌ಗಳೊಂದಿಗೆ ಆಡಿದ್ದು ಈ ತಂತ್ರಗಾರಿಕೆ ವರ್ಕೌಟ್ ಆಗದ ಕಾರಣ, ಬೌಲಿಂಗ್ ವಿಭಾಗದಲ್ಲೂ ನಾಳೆ ಬದಲಾವಣೆ ಆಗಲಿದೆ. ಅಕ್ಷರ್ ಪಟೇಲ್ ಅಥವಾ ಕುಲದೀಪ್ ಯಾದವ್ ಬದಲಿಗೆ ನಿತೀಶ್ ಕುಮಾರ್ ರೆಡ್ಡಿ ನಾಳೆ ಪ್ಲೇಯಿಂಗ್ XIಗೆ ಬರುವ ಸಾಧ್ಯತೆಯಿದೆ. ಗುವಾಹಟಿ ಪಿಚ್‌ನಲ್ಲಿ ಮೊದಲ ಎರಡು ದಿನಗಳಲ್ಲಿ ವೇಗಿಗಳಿಗೆ ಉತ್ತಮ ಬೌನ್ಸ್ ಸಿಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಅಕ್ಷರ್ ಬದಲಿಗೆ ನಿತೀಶ್ ತಂಡಕ್ಕೆ ಬರುವ ಸಾಧ್ಯತೆ ಹೆಚ್ಚು. ವೇಗದ ಬೌಲಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಮುಂದುವರಿಯುವ ನಿರೀಕ್ಷೆಯಿದೆ. ಕೋಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಸೋತ ಭಾರತ, ಎರಡು ಪಂದ್ಯಗಳ ಸರಣಿಯಲ್ಲಿ 0-1 ಹಿನ್ನಡೆಯಲ್ಲಿದೆ. ನಾಳೆ ಆರಂಭವಾಗುವ ಎರಡನೇ ಟೆಸ್ಟ್‌ನಲ್ಲಿ ಗೆಲ್ಲದಿದ್ದರೆ ಭಾರತ ಸರಣಿ ಕಳೆದುಕೊಳ್ಳಲಿದೆ. ಪಂದ್ಯ ಡ್ರಾ ಆದರೂ ದಕ್ಷಿಣ ಆಫ್ರಿಕಾ ಸರಣಿ ಗೆಲ್ಲಲಿದೆ. ದಕ್ಷಿಣ ಆಫ್ರಿಕಾ ತಂಡವು ಇದುವರೆಗೂ ಭಾರತ ನೆಲದಲ್ಲಿ ಟೆಸ್ಟ್ ಸರಣಿಯನ್ನು ಜಯಿಸಿಲ್ಲ. ಇದೀಗ ತೆಂಬಾ ಬವುಮಾ ನೇತೃತ್ವದ ಹರಿಣಗಳ ಪಡೆ ಇತಿಹಾಸ ನಿರ್ಮಿಸಲು ಎದುರು ನೋಡುತ್ತಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್‌ಗೆ ಭಾರತದ ಸಂಭಾವ್ಯ ತಂಡ:

ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಧ್ರುವ್ ಜುರೆಲ್, ರಿಷಭ್ ಪಂತ್ (ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ
ಕಾಂಗರೂ ನಾಡಲ್ಲಿ ಶತಕದ ಬರ ನೀಗಿಸಿಕೊಂಡ ಜೋ ರೂಟ್! ಕೊನೆಗೂ ತಪ್ಪಿದ ಹೇಡನ್ 'ಬೆತ್ತಲೆ ಸೇವೆ'!