ಭಾರತ ಸೌತ್ ಆಫ್ರಿಕಾ ಟಿ20 ಪಂದ್ಯ, ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಟ್ರಾಫಿಕ್ ಜಾಮ್!

Published : Jun 19, 2022, 05:37 PM ISTUpdated : Jun 19, 2022, 06:12 PM IST
ಭಾರತ ಸೌತ್ ಆಫ್ರಿಕಾ ಟಿ20 ಪಂದ್ಯ, ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಟ್ರಾಫಿಕ್ ಜಾಮ್!

ಸಾರಾಂಶ

ಕ್ರೀಡಾಂಗಣ ಸುತ್ತ ಭಾರಿ ಟ್ರಾಫಿಕ್ ಜಾಮ್ ಹಲವು ಮಾರ್ಗಗಳ ಬದಲಾವಣೆ ಮಾಡಿದರೂ ಟ್ರಾಫಿಕ್ ಜಾಮ್ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ ಭಾರತದ ಆಟಗಾರರು

ಬೆಂಗಳೂರು(ಜೂ.19): ಉದ್ಯಾನನಗರಿಯಲ್ಲಿ ಕ್ರಿಕೆಟ್ ಕ್ರೇಝ್ ತುಸು ಹೆಚ್ಚೆ ಇದೆ. ಇನ್ನು ಎರಡು ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಪಂದ್ಯ ಆಯೋಜನೆಯಾದರೆ ಕೇಳಬೇಕಾ? ಭಾರತ ಹಾಗೂ ಸೌತ್ ಆಫ್ರಿಕಾ ನಡವಿನ 5ನೇ ಹಾಗೂ ಅಂತಿಮ ಟಿ20 ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಲವೇ ಹೊತ್ತಲ್ಲಿ ಆರಂಭಗೊಳ್ಳುತ್ತಿದೆ. ಪಂದ್ಯ ವೀಕ್ಷಿಸಲು ಜನಸಾಗರವೇ ಹರಿದುಬಂದಿದೆ. ಇದರಿಂದ ಕ್ರೀಡಾಂಗಣದ ಸುತ್ತ ಮುತ್ತ ಟ್ರಾಫಿಕ್ ಜಾಮ್ ಆಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸುಮಾರು 40,000 ಪ್ರೇಕ್ಷಕರು ಕುಳಿತು ಪಂದ್ಯ ವೀಕ್ಷಿಸಬಹುದು. ಪಂದ್ಯಕ್ಕೆ ಎರಡು ದಿನ ಮೊದಲೇ ಟಿಕೆಟ್ ಸೋಲ್ಡ್ ಔಟ್ ಆಗಿದೆ. ಇದೀಗ ಅಭಿಮಾನಿಗಳು ಪಂದ್ಯ ವೀಕ್ಷಿಸಲು ಕ್ರೀಡಾಂಗಣದತ್ತ ಧಾವಿಸುತ್ತಿದ್ದಾರೆ. ಇದರಿಂದ ಟ್ರಾಫಿಕ್ ಜಾಮ್ ಸಂಭವಿಸಿದೆ. 

IND vs SA 2 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಪಂದ್ಯ, ಕ್ರೀಡಾಂಗಣ ಸುತ್ತ ಭಾರಿ ಭದ್ರತೆ!

ಚಿನ್ನಸ್ವಾಮಿ ಕ್ರೀಡಾಂಗಣದ ಕೌಂಟರ್ ಬಳಿ ಜಮಾಯಿಸಿರುವ ಹಲವರು ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣ, ಕಬ್ಬನ್ ಪಾರ್ಕ್, ಎಂಜಿ ರಸ್ತೆ, ಕಸ್ತೂರ್ ಬಾ ರಸ್ತೆ ಸೇರಿದಂತೆ ಹಲವು ರಸ್ತೆಗಳಲ್ಲಿ ಚ್ರಾಫಿಕ್ ಜಾಮ್ ಸಂಭವಿಸಿದೆ.

ಕ್ರೀಡಾಂಗಣಕ್ಕೆ ಆಗಮಿಸಿದ ಭಾರತದ ಆಟಗಾರರು
ಭಾರಿ ಭದ್ರತೆಯೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಆಗಮಿಸಿದ್ದಾರೆ. ಇದರ ಬೆನ್ನಲ್ಲೇ ಸೌತ್ ಆಫ್ರಿಕಾ ಕ್ರಿಕೆಟಿಗರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ. 

ಮಟ್ರೋ ಸೇವೆ ವಿಸ್ತರಣೆ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್‌ 19ರಂದು ನಡೆಯಲಿರುವ ಭಾರತ-ದಕ್ಷಿಣ ಆಫ್ರಿಕ ನಡುವಿನ ಟಿ-20 ಕ್ರಿಕೆಟ್‌ ಪಂದ್ಯಾವಳಿ ವೀಕ್ಷಣೆ ಬರುವವರ ಅನುಕೂಲಕ್ಕಾಗಿ ‘ನಮ್ಮ ಮೆಟ್ರೋ’ ತನ್ನ ಕಾರ್ಯಾಚರಣೆ ಅವಧಿಯನ್ನು ರಾತ್ರಿ 1.30ರ ತನಕ ವಿಸ್ತರಿಸಿದೆ.

ಜೂ.19ರಂದು ಕೊನೆಯ ಮೆಟ್ರೋ ನಾಲ್ಕೂ ಕೊನೆಯ ಟರ್ಮಿನಲ್‌ಗಳಿಂದ ಅಂದರೆ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆಯಿಂದ ತಡರಾತ್ರಿ 1ಕ್ಕೆ ನಿರ್ಗಮಿಸಲಿವೆ. ಮೆಜೆಸ್ಟಿಕ್‌ನ ಕೆಂಪೇಗೌಡ ನಿಲ್ದಾಣದಿಂದ ಎಲ್ಲ ನಾಲ್ಕೂ ದಿಕ್ಕುಗಳಿಗೆ 1.30ಕ್ಕೆ ಹೊರಡಲಿವೆ.

ಇಂಡೋ-ದ. ಆಫ್ರಿಕಾ ನಡುವಿನ ಬೆಂಗಳೂರಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ?

ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ರಿಟರ್ನ್‌ ಜರ್ನಿ ಪೇಪರ್‌ ಟಿಕೆಟ್‌ಗಳನ್ನು ನೀಡಲಿದೆ. ಮೆಟ್ರೋದ ಎಲ್ಲ ನಿಲ್ದಾಣಗಳಲ್ಲಿ ಜೂನ್‌ 19ರ ಮಧ್ಯಾಹ್ನ 3ರಿಂದ ಪೇಪರ್‌ ಟಿಕೆಟ್‌ಗಳು ಮಾರಾಟಕ್ಕೆ ಲಭ್ಯ ಇರಲಿವೆ. ಇದರ ಬೆಲೆ .50 ಎಂದು ನಿಗಮ ತಿಳಿಸಿದೆ.

ಈ ರಿಟರ್ನ್‌ ಜರ್ನಿ ಪೇಪರ್‌ ಟಿಕೆಟ್‌ಗಳ ನೆರವಿನಿಂದ ಪ್ರಯಾಣಿಕರು ಕಬ್ಬನ್‌ ಪಾರ್ಕ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ರಾತ್ರಿ 10ರ ನಂತರ ಹಾಗೂ ವಿಸ್ತೃತ ಸೇವೆಯ ಅವಧಿ (ತಡರಾತ್ರಿ ಕೊನೆಯ ರೈಲಿನಲ್ಲೂ)ಯಲ್ಲಿ ಒಂದು ಬಾರಿ ಪ್ರಯಾಣಿಸಬಹುದಾಗಿದೆ. ಯಾವುದೇ ನಿಲ್ದಾಣದಿಂದ ಸಾಮಾನ್ಯ ದರದಲ್ಲಿ ಸ್ಮಾರ್ಚ್‌ಕಾರ್ಡ್‌ ಹಾಗೂ ಟೋಕನ್‌ ಬಳಸಿ ಕಬ್ಬನ್‌ ಪಾರ್ಕ್ ನಿಲ್ದಾಣಕ್ಕೆ ಪ್ರಯಾಣಿಸಬಹುದು. ಆದರೆ ಕಬ್ಬನ್‌ ಪಾರ್ಕ್ ನಿಲ್ದಾಣದಿಂದ ಯಾವುದೇ ನಿಲ್ದಾಣಕ್ಕೆ ಪೇಪರ್‌ ಟಿಕೆಟ್‌ ಮೂಲಕ ಮಾತ್ರ ಪ್ರಯಾಣಿಸಬಹುದು ಎಂದು ಮೆಟ್ರೋ ನಿಗಮವು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರೀನ್‌ನಿಂದ ಮೊರಿಸ್‌ವರೆಗೆ, ಐಪಿಎಲ್‌ ಮಿನಿ ಹರಾಜಿನ ಅತ್ಯಂತ ದುಬಾರಿ ಪ್ಲೇಯರ್ಸ್‌!
ಕಡಿಮೆ ಮೊತ್ತಕ್ಕೆ ಆರ್‌ಸಿಬಿ ತೆಕ್ಕೆಗೆ ಜಾರಿದ ಸ್ಟಾರ್ ಆಲ್ರೌಂಡರ್! ಹಾಲಿ ಚಾಂಪಿಯನ್ ಬೆಂಗಳೂರು ತಂಡಕ್ಕೆ ಜಾಕ್‌ಪಾಟ್