ಭಾರತ vs ದಕ್ಷಿಣ ಆಫ್ರಿಕಾ ಏಕದಿನ ಸರಣಿ ಇಂದಿನಿಂದ; ಕೊಹ್ಲಿ-ರೋಹಿತ್ ಮೇಲೆ ಎಲ್ಲರ ಕಣ್ಣು!

Published : Nov 30, 2025, 12:28 PM IST
rohit sharma-virat kohli

ಸಾರಾಂಶ

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಬಳಿಕ, ಕೆ.ಎಲ್. ರಾಹುಲ್ ನಾಯಕತ್ವದ ಭಾರತ ತಂಡ ಏಕದಿನ ಸರಣಿಯಲ್ಲಿ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಪ್ರದರ್ಶನ ನಿರ್ಣಾಯಕವಾಗಿದ್ದು, ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್‌ ಸರಣಿಯಲ್ಲಿ ವೈಟ್‌ವಾಶ್‌ ಮುಖಭಂಗಕ್ಕೆ ಒಳಗಾಗಿದ್ದ ಭಾರತ ತಂಡ ಈಗ ಏಕದಿನ ಸರಣಿಯ ಸವಾಲು ಎದುರಿಸಲು ಸಜ್ಜಾಗಿದೆ. ಕೆ.ಎಲ್‌.ರಾಹುಲ್‌ ನಾಯಕತ್ವದ ಟೀಂ ಇಂಡಿಯಾ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದರೆ, ದ.ಆಫ್ರಿಕಾ ಸತತ 2ನೇ ಸರಣಿ ಜಯಕ್ಕೆ ಕಾತರಿಸುತ್ತಿದೆ.

ಕೊಹ್ಲಿ-ರೋಹಿತ್ ಪ್ರಮುಖ ಆಕರ್ಷಣೆ

ಸರಣಿಯಲ್ಲಿ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಪ್ರಮುಖ ಆಕರ್ಷಣೆಯಾಗಿದ್ದು, ಅವರ ಆಟವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ. ಇವರಿಬ್ಬರು 2027ರ ಏಕದಿನ ವಿಶ್ವಕಪ್‌ವರೆಗೂ ತಂಡದಲ್ಲಿ ಸ್ಥಾನ ಗಟ್ಟಿಗೊಳಿಸಬೇಕಿದ್ದರೆ ಈ ಸರಣಿಯ ಪ್ರದರ್ಶನವೂ ನಿರ್ಣಾಯಕವಾಗಲಿದೆ. ಉಳಿದಂತೆ ರಿಷಭ್‌ ಪಂತ್‌, ತಿಲಕ್‌ ವರ್ಮಾ ತಂಡದಲ್ಲಿ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಅರ್ಶ್‌ದೀಪ್‌ ಸಿಂಗ್‌, ಪ್ರಸಿದ್ಧ್‌ ಕೃಷ್ಣ, ಹರ್ಷಿತ್‌ ರಾಣಾ, ಕುಲ್ದೀಪ್‌ ಇದ್ದಾರೆ. ಮತ್ತೊಂದೆಡೆ ದ.ಆಫ್ರಿಕಾ ತಂಡವನ್ನು ತೆಂಬಾ ಬವುಮಾ ಮುನ್ನಡೆಸಲಿದ್ದಾರೆ.

ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ:

ಭಾರತ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್(ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಕೆ ಎಲ್ ರಾಹುಲ್(ನಾಯಕ), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್.

ದಕ್ಷಿಣ ಆಫ್ರಿಕಾ: ಏಯ್ಡನ್ ಮಾರ್ಕ್‌ರಮ್, ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ತೆಂಬಾ ಬವುಮಾ(ನಾಯಕ), ಮ್ಯಾಥ್ಯೂ ಬ್ರೇಡ್ಕೆ, ರೂಬಿನನ್ ಹೆರ್ಮಾನ್, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಯಾನ್ಸನ್, ಕಾರ್ಬಿನ್ ಬೋಷ್, ಕೇಶವ್ ಮಹರಾಜ್, ನಂದ್ರೆ ಬರ್ಗರ್, ಲುಂಗಿ ಎಂಗಿಡಿ.

ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ

ಪ್ರಸಾರ: ಸ್ಟಾರ್‌ಸ್ಪೋರ್ಟ್ಸ್‌, ಜಿಯೋ ಹಾಟ್‌ಸ್ಟಾರ್‌

ಕೊಹ್ಲಿ, ರೋಹಿತ್‌ ಭವಿಷ್ಯ ಬಗ್ಗೆ ಶೀಘ್ರ ಬಿಸಿಸಿಐ ಸಭೆ

ನವದೆಹಲಿ: 2027ರ ಏಕದಿನ ವಿಶ್ವಕಪ್‌ ದೃಷ್ಟಿಯಲ್ಲಿ ಟೀಂ ಇಂಡಿಯಾ ದಿಗ್ಗಜರಾದ ರೋಹಿತ್‌ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭವಿಷ್ಯದ ಬಗ್ಗೆ ಚರ್ಚಿಸಲು ಬಿಸಿಸಿಐ ಮಹತ್ವದ ಸಭೆ ನಡೆಸುವುದಕ್ಕೆ ಮುಂದಾಗಿದೆ.

ಮುಂದಿನ ವಾರ ವಿಶಾಖಪಟ್ಟಣದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದ ಬಳಿಕ ಬಿಸಿಸಿಐ ಉನ್ನತ ಅಧಿಕಾರಿಗಳು, ಕೋಚ್‌ ಗೌತಮ್‌ ಗಂಭೀರ್‌, ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್ಕರ್‌ ಅಹಮದಾಬಾದ್‌ನಲ್ಲಿ ಸಭೆ ಸೇರುವ ಸಾಧ್ಯತೆಯಿದೆ. ಇಬ್ಬರೂ ಆಟಗಾರರು ಸದ್ಯ ಏಕದಿನ ಪಂದ್ಯಗಳಲ್ಲಿ ಮಾತ್ರವೇ ಆಡುತ್ತಿದ್ದು, ಅವರನ್ನು ವಿಶ್ವಕಪ್‍ವರೆಗೆ ಮುಂದುವರಿಸಬೇಕೇ, ಬೇಡವೇ ಎಂಬುದರ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ
ಕಾಂಗರೂ ನಾಡಲ್ಲಿ ಶತಕದ ಬರ ನೀಗಿಸಿಕೊಂಡ ಜೋ ರೂಟ್! ಕೊನೆಗೂ ತಪ್ಪಿದ ಹೇಡನ್ 'ಬೆತ್ತಲೆ ಸೇವೆ'!