IND vs SA ಸೌತ್ ಆಫ್ರಿಕಾ ಸರಣಿಗೆ ಬುಮ್ರಾ ಸ್ಥಾನಕ್ಕೆ ಆರ್‌ಸಿಬಿ ವೇಗಿ ಮೊಹಮ್ಮದ್ ಸಿರಾಜ್ ಆಯ್ಕೆ!

By Suvarna NewsFirst Published Sep 30, 2022, 9:51 AM IST
Highlights

ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಇಂಜುರಿ ಕಾರಣದಿಂದ ಸೌತ್ ಆಫ್ರಿಕಾ ವಿರುದ್ಧದ ಸರಣಿ ಹಾಗೂ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಇದೀಗ  ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಆರ್‌ಸಿಬಿ ವೇಗಿ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ.
 

ಮುಂಬೈ(ಸೆ.30): ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಸೌತ್ ಆಫ್ರಿಕಾ ವಿರುದ್ಧದ ಸರಣಿ ಆಡುತ್ತಿರುವ ಟೀಂ ಇಂಡಿಯಾಗೆ ಇಂಜುರಿ ಸಮಸ್ಯೆ ಅತೀಯಾಗಿ ಕಾಡುತ್ತಿದೆ. ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ವಿಶ್ವಕಪ್ ಟೂರ್ನಿಯಿಂದಲೂ ಬುಮ್ರಾ ಹೊರಗುಳಿಯಲಿದ್ದಾರೆ. ಇದೀಗ ಬುಮ್ರಾ ಸ್ಥಾನಕ್ಕೆ ಆರ್‌ಸಿಬಿ ವೇಗಿ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಸೌತ್ ಆಫ್ರಿಕಾ ವಿರುದ್ದ ಇನ್ನುಳಿದ 2 ಟಿ20 ಪಂದ್ಯಕ್ಕೆ ಸಿರಾಜ್ ಆಯ್ಕೆಯಾಗಿದ್ದಾರೆ. ಸಿರಾಜ್ ಇಂದು ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಬೌಲಿಂಗ್ ವಿಭಾಗವನ್ನು ಮತ್ತೆ ಬಲಿಷ್ಠಗೊಳಿಸಲು ವೇಗಿಯ ಆಯ್ಕೆ ಮಾಡಿದೆ. ಸೌತ್ ಆಫ್ರಿಕಾ ವಿರುದ್ದದ ದ್ವಿತೀಯ ಟಿ20 ಪಂದ್ಯ ಗುವ್ಹಾಟಿಯಲ್ಲಿ ನಡೆಯಲಿದೆ. ಅಕ್ಟೋಬರ್ 2 ರಂದು ಈ ಪಂದ್ಯ ನಡೆಯಲಿದೆ. 

ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದು, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಬಿಸಿಸಿಐ ವೈದ್ಯರ ತಂಡ ಬುಮ್ರಾ ವೈದ್ಯಕೀಯ ತಪಾಸಣೆ ಮಾಡಿದ್ದಾರೆ. ಬುಮ್ರಾ ಕೆಲ ದಿನಗಳ ಕಾಲ ವೈದ್ಯರ ನಿಗಾದಲ್ಲಿ ಇರಲಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಮುಂಬುರವ ವಿಶ್ವಕಪ್ ಟೂರ್ನಿಯಿಂದ ಬುಮ್ರಾ ಹೊರಗುಳಿಯುತ್ತಾರಾ ಅನ್ನೋ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಿಲ್ಲ. ವೈದ್ಯರ ವರದಿ ಆಧರಿಸಿ ಮುಂದಿನ ನಿರ್ಧಾರ ಪ್ರಕಟಿಸಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ. ಕಾರಣ ಟಿ20 ವಿಶ್ವಕಪ್ ಟೂರ್ನಿಗೆ ಸರಿಸುಮಾರು 15 ದಿನಗಳ ಸಮಯ ಬಾಕಿ ಇದೆ. ಹೀಗಾಗಿ ಬುಮ್ರಾ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಅನ್ನೋ ಕಾರಣ ಬಿಸಿಸಿಐ ಆಯ್ಕೆ ಸಮಿತಿ, ಟಿ20 ವಿಶ್ವಕಪ್ ಟೂರ್ನಿಯಿಂದ ಬುಮ್ರಾರನ್ನು ಹೊರಗಿಟ್ಟಿಲ್ಲ.

T20 World Cup: ಜಸ್‌ಪ್ರೀತ್‌ ಬುಮ್ರಾ ಟಿ20 ವಿಶ್ವಕಪ್‌ನಿಂದ ಔಟ್‌

ಮೊಹಮ್ಮದ್ ಸಿರಾಜ್ ಆಯ್ಕೆಯಿಂದ ಸದ್ಯ ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿಗೆ ಆಯ್ಕೆಯಾಗಿರುವ ಟೀಂ ಇಂಡಿಯಾ ಈ ಕೆಳಗಿನಂತಿದೆ.
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್, ಯಾದವ್, ರಿಷಬ್ ಪಂತ್ ದೀನೇಶ್ ಕಾರ್ತಿಕ್, ಆರ್ ಅಶ್ವಿನ್, ಯಜುವೇಂದ್ರ ಚಹಾಲ್, ಅಕ್ಸರ್ ಪಟೇಲ್, ಅರ್ಶದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಉಮೇಶ್ ಯಾದವ್, ಶ್ರೇಯಸ್ ಅಯ್ಯರ್, ಶಹಬಾಜ್ ಅಹಮ್ಮದ್, ಮೊಹಮ್ಮದ್ ಸಿರಾಜ್ 

ಬುಮ್ರಾ ಬೆನ್ನು ಮೂಳೆ ಮುರಿತ
 ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡಕ್ಕೆ ಭಾರೀ ಆಘಾತ ಎದುರಾಗಿದೆ. ಮುಂಚೂಣಿ ವೇಗದ ಬೌಲರ್‌ ಜಸ್‌ಪ್ರೀತ್‌ ಬೂಮ್ರಾ ಬೆನ್ನು ಮೂಳೆ ಮುರಿತದಿಂದಾಗಿ ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ. ಇದರೊಂದಿಗೆ ಭಾರತದ ಬೌಲಿಂಗ್‌ ಪಡೆ ದುರ್ಬಲಗೊಳ್ಳಲಿದೆ. ರವೀಂದ್ರ ಜಡೇಜಾ ಬಳಿಕ ವಿಶ್ವಕಪ್‌ಗೆ ಗೈರಾಗಲಿರುವ ಭಾರತದ 2ನೇ ತಾರಾ ಆಟಗಾರ ಎನಿಸಿಕೊಳ್ಳಲಿದ್ದಾರೆ. ಬಿಸಿಸಿಐ ಅಧಿಕಾರಿಯೊಬ್ಬರ ಪ್ರಕಾರ ಬೂಮ್ರಾ ಕನಿಷ್ಠ 6 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ. ‘ಬೂಮ್ರಾ ವಿಶ್ವಕಪ್‌ ಆಡುವುದಿಲ್ಲ. ಅವರು ಬೆನ್ನು ನೋವಿನಿಂದ ತೀವ್ರವಾಗಿ ಬಳಲುತ್ತಿದ್ದಾರೆ. ಅತಿಯಾದ ಕೆಲಸದ ಒತ್ತಡದಿಂದ ಮೂಳೆ ಮುರಿದಿರಬಹುದು. 6 ತಿಂಗಳ ಕಾಲ ಅವರು ಆಯ್ಕೆಗೆ ಲಭ್ಯರಿರುವುದಿಲ್ಲ’ ಎಂದು ಹೇಳಿದ್ದಾರೆ. ಬೂಮ್ರಾಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇಲ್ಲ. ಆದರೆ ಹೆಚ್ಚು ಸಮಯ ಅವರು ವಿಶ್ರಾಂತಿ ಪಡೆಯಬೇಕಿದೆ. ಗುಣಮುಖರಾಗಲು ವಿಶ್ರಾಂತಿಯೇ ಉತ್ತಮ ಮದ್ದು ಎಂದು ವೈದ್ಯರೊಬ್ಬರು ತಿಳಿಸಿರುವುದಾಗಿ ಬಿಸಿಸಿಐ ಅಧಿಕಾರಿ ಹೇಳಿದ್ದಾರೆ.

Ind vs SA ಕ್ಯಾಪ್ಟನ್‌ ಕೂಲ್ ಎಂ ಎಸ್ ಧೋನಿ ದಾಖಲೆ ಮುರಿದ ರೋಹಿತ್ ಶರ್ಮಾ..!

click me!