ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಯಾವಾಗ? ಎಷ್ಟು ಗಂಟೆಗೆ ಆರಂಭ? ಎಲ್ಲಿ ವೀಕ್ಷಿಸಬಹುದು?

Published : Nov 01, 2025, 11:04 AM IST
IND vs SA, Womens ODI World Cup 2025

ಸಾರಾಂಶ

ಮಹಿಳಾ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗುತ್ತಿವೆ. ಉಭಯ ತಂಡಗಳು ತಮ್ಮ ಚೊಚ್ಚಲ ಪ್ರಶಸ್ತಿಗಾಗಿ ಹೋರಾಡುತ್ತಿದ್ದು, ಯಾರೇ ಗೆದ್ದರೂ ಹೊಸ ಚಾಂಪಿಯನ್ ತಂಡ ಉದಯವಾಗಲಿದೆ. ಈ ಮಹತ್ವದ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ನವಿ ಮುಂಬೈ: ಮಹಿಳಾ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಭಾನುವಾರ ಮುಖಾಮುಖಿಯಾಗಲಿವೆ. ಮಹಿಳಾ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಉಭಯ ತಂಡಗಳು ತಮ್ಮ ಚೊಚ್ಚಲ ಪ್ರಶಸ್ತಿಗಾಗಿ ಕಣಕ್ಕಿಳಿಯುತ್ತಿವೆ. ಇದು ಭಾರತದ ಮೂರನೇ ಏಕದಿನ ವಿಶ್ವಕಪ್ ಫೈನಲ್ ಆಗಿದೆ. ಈ ಹಿಂದೆ 2005 ಮತ್ತು 2017ರಲ್ಲಿ ಭಾರತ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಫೈನಲ್ ಆಡಿತ್ತು. ದಕ್ಷಿಣ ಆಫ್ರಿಕಾಕ್ಕೆ ಇದು ಮೊದಲ ವಿಶ್ವಕಪ್ ಫೈನಲ್ ಆಗಿದೆ. ಯಾರೇ ಗೆದ್ದರೂ ಹೊಸ ಚಾಂಪಿಯನ್ ಉದಯವಾಗಲಿದೆ.

2005ರ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಭಾರತವನ್ನು ಸೋಲಿಸಿ ಪ್ರಶಸ್ತಿ ಗೆದ್ದರೆ, 2017ರಲ್ಲಿ ಇಂಗ್ಲೆಂಡ್ ಭಾರತಕ್ಕೆ ಸೋಲುಣಿಸಿತ್ತು. ತವರಿನಲ್ಲಿ ಮೂರನೇ ಬಾರಿಗೆ ಫೈನಲ್‌ಗೆ ಇಳಿಯುತ್ತಿರುವ ಭಾರತ, ಪ್ರಶಸ್ತಿ ಗೆಲ್ಲಲು ತುದಿಗಾಲಿನಲ್ಲಿ ನಿಂತಿದೆ. ಅಜೇಯ ಆಸ್ಟ್ರೇಲಿಯಾವನ್ನು ಮಣಿಸಿದ ಆತ್ಮವಿಶ್ವಾಸದಲ್ಲಿ ಭಾರತ ಕಣಕ್ಕಿಳಿದರೆ, ಮಾಜಿ ಚಾಂಪಿಯನ್ ಇಂಗ್ಲೆಂಡ್‌ ತಂಡವನ್ನು ಸೋಲಿಸಿದ ವಿಶ್ವಾಸ ದಕ್ಷಿಣ ಆಫ್ರಿಕಾಕ್ಕಿದೆ.

ಪಂದ್ಯ ಎಲ್ಲಿ ನಡೆಯಲಿದೆ?

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣವು ಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್ ಪಂದ್ಯವೂ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದಿತ್ತು. ಸೆಮಿಫೈನಲ್‌ನಂತೆಯೇ ಫೈನಲ್‌ಗೂ ಬ್ಯಾಟರ್‌ಗಳಿಗೆ ಸಹಕಾರಿಯಾಗುವ ವಿಕೆಟ್ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ನೀಡಿದ್ದ 339 ರನ್‌ಗಳ ಗುರಿಯನ್ನು ಬೆನ್ನಟ್ಟಿ ಭಾರತ ದಾಖಲೆ ಬರೆದಿತ್ತು.

ಪಂದ್ಯದ ಸಮಯ, ವೀಕ್ಷಿಸುವುದು ಹೇಗೆ?

ಭಾರತೀಯ ಕಾಲಮಾನದ ಪ್ರಕಾರ ಭಾನುವಾರ ಸಂಜೆ 3 ಗಂಟೆಗೆ ಫೈನಲ್ ಪಂದ್ಯ ಆರಂಭವಾಗಲಿದೆ. ಪಂದ್ಯದ ಟಾಸ್ 2.30ಕ್ಕೆ ನಡೆಯಲಿದೆ. ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ ಪಂದ್ಯವನ್ನು ನೇರಪ್ರಸಾರ ವೀಕ್ಷಿಸಬಹುದು.

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್, ರೇಣುಕಾ ಸಿಂಗ್ ಠಾಕೂರ್, ದೀಪ್ತಿ ಶರ್ಮಾ, ಸ್ನೇಹ ರಾಣಾ, ಕ್ರಾಂತಿ ಗೌಡ್, ಶ್ರೀ ಚರಣಿ, ರಾಧಾ ಯಾದವ್, ಅಮನ್‌ಜೋತ್ ಕೌರ್, ಅರುಂಧತಿ ರೆಡ್ಡಿ, ಉಮಾ ಛೆಟ್ರಿ, ಶಫಾಲಿ ವರ್ಮಾ.

ದಕ್ಷಿಣ ಆಫ್ರಿಕಾ ತಂಡ: ಲಾರಾ ವೊಲ್ವಾರ್ಟ್ (ನಾಯಕಿ), ಅಯಾಬೊಂಗಾ ಖಾಕಾ, ಕ್ಲೋಯ್ ಟ್ರಯಾನ್, ನಾಡಿನ್ ಡಿ ಕ್ಲರ್ಕ್, ಮರಿಜಾನ್ನೆ ಕಪ್, ಎಸ್ಮಿನ್ ಬ್ರಿಟ್ಸ್, ಸಿನಾಲೊ ಜಾಫ್ತಾ, ನೊಂಕುಲುಲೆಕೊ ಮ್ಲಾಬಾ, ಆನೆರಿ ಡರ್ಕ್‌ಸೆನ್, ಅನೆಕೆ ಬಾಷ್, ಮಸಾಬಾಟಾ ಕ್ಲಾಸ್, ಸುನೆ ಲೂಸ್, ಕರಾಬೊ ಮೆಸೊ, ತುಮಿ ಸೆಖುಖುನೆ, ನೊಡುಮಿಸೊ ಶಂಗಸೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ