ಮಳೆ ಅಡಚಣೆ ಇಂಡೋ-ಲಂಕಾ ಮೊದಲ ಟಿ20 ಪಂದ್ಯ ರದ್ದು

Suvarna News   | Asianet News
Published : Jan 05, 2020, 10:12 PM IST
ಮಳೆ ಅಡಚಣೆ ಇಂಡೋ-ಲಂಕಾ ಮೊದಲ ಟಿ20 ಪಂದ್ಯ ರದ್ದು

ಸಾರಾಂಶ

ಭಾರತ-ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ. ಗುವಾಹಟಿಯ ಬರ್ಸಾಪುರ ಮೈದಾನದಲ್ಲಿ ನಡೆಯಬೇಕಿದ್ದ ಪಂದ್ಯ ವರುಣನ ಅವಕೃಪೆಗೆ ಗುರಿಯಾಯಿತು. ಈ ಕುರಿತಾದ ವರದಿ ಇಲ್ಲಿದೆ ನೋಡಿ..

ಗುವಾಹಟಿ[ಜ.05]: ಇಂಡೋ-ಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದು, ಪಂದ್ಯ ಒಂದೂ ಎಸೆತ ಕಾಣದೇ ರದ್ದಾಗಿದೆ. ವರ್ಷದ ಮೊದಲ ಪಂದ್ಯವೇ ಮಳೆಯಿಂದ ರದ್ದಾಯಿತು.

ಗುವಾಹಟಿಯ ಬರ್ಸಾಪುರ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ದುಕೊಂಡರು. ಟಾಸ್ ಮುಗಿದ ಬೆನ್ನಲ್ಲೇ ನಿರಂತರ ಮಳೆ ಸುರಿಯಿತು. ಹೀಗಾಗಿ ಪಂದ್ಯವನ್ನು ಕೆಲಕಾಲ ಮುಂದೂಡಲಾಯಿತು. ಪಿಚ್ ಒದ್ದೆಯಾಗಿದ್ದರಿಂದ ಹೇರ್ ಡ್ರೈಯರ್ ಹಾಗೂ ಐರನ್ ಬಾಕ್ಸ್ ಬಳಸಿ ಒಣಗಿಸಲು ಪ್ರಯತ್ನಿಸಲಾಯಿತು. ಅಂಪೈರ್ ಮತ್ತೊಮ್ಮೆ 9.30ರ ವೇಳೆಗೆ ಪಿಚ್ ಪರಿಶೀಲನೆ ನಡೆಸಿದರು. ಆದರೂ ಔಟ್ ಫೀಲ್ಡ್ ಒದ್ದೆಯಾಗಿದ್ದರಿಂದ ರಿಸ್ಕ್ ತೆಗೆದುಕೊಳ್ಳಲು ಮ್ಯಾಚ್ ರೆಫ್ರಿ ಮುಂದಾಗಲಿಲ್ಲ. ಹೀಗಾಗಿ ಪಂದ್ಯ ರದ್ದು ಮಾಡುವ ತೀರ್ಮಾನಕ್ಕೆ ಬರಲಾಯಿತು.

ತಡವಾಗಿ ಆರಂಭವಾಗತ್ತೆ ಮೊದಲ ಟಿ20 ಪಂದ್ಯ..!

ಪಿಚ್ ಮುಚ್ಚಲು ಸೂಕ್ತ ವ್ಯವಸ್ಥೆ ಮಾಡದಿರುವುದು ಕ್ರಿಕೆಟ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯಿತು. ವರ್ಷದ ಮೊದಲ ಪಂದ್ಯವನ್ನು ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದ ಅಭಿಮಾನಿಗಳ ಆಸೆಗೆ ವರುಣರಾಯ ನಿರಾಸೆಯನ್ನುಂಟು ಮಾಡಿದ. ಇದೀಗ ಎರಡನೇ ಪಂದ್ಯ ಜನವರಿ 7ರಂದು ಇಂದೋರಿನ ಹೋಲ್ಕರ್ ಮೈದಾನದಲ್ಲಿ ನಡೆಯಲಿದೆ. ಭಾರತ ಒಂದುವೇಳೆ ಸರಣಿ ಗೆಲ್ಲಬೇಕಿದ್ದರೆ, ಉಳಿದೆರಡು ಪಂದ್ಯಗಳನ್ನು ಗೆಲ್ಲಬೇಕಾದ ಅನಿವಾರ್ಯತೆಗೆ ಸಿಲುಕಿದೆ. 

 

 


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?