ಲಂಕಾ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಹೀಗಾಗಿ ಪಂದ್ಯ ಕೆಲಕಾಲ ತಡವಾಗಿ ಆರಂಭವಾಗಲಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ..
ಗುವಾಹಟಿ[ಜ.05]: ಭಾರತ-ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯಕ್ಕೆ ವರುಣರಾಯ ಅಡ್ಡಿ ಪಡಿಸಿದ್ದು, ಕೆಲಕಾಲ ತಡವಾಗಿ ಆರಂಭವಾಗುವ ಸಾಧ್ಯತೆಯಿದೆ.
ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ
UPDATE - It has started to rain here and we will have a delayed start ☹️
— BCCI (@BCCI)ಭಾರತದ ವರ್ಷದ ಮೊದಲ ಪಂದ್ಯಕ್ಕೆ ಗುವಾಹಟಿಯ ಬರ್ಸಾಪುರ ಮೈದಾನ ಆತಿಥ್ಯ ವಹಿಸಿದ್ದು, ಟಾಸ್ ಮುಗಿದ ಬೆನ್ನಲ್ಲೇ ತುಂತುರು ಮಳೆ ಸುರಿದಿದೆ. ಹೀಗಾಗಿ ಸ್ವಲ್ಪ ತಡವಾಗಿ ಆರಂಭವಾಗಲಿದೆ.
Rain, rain go away,
Come again another day,
Boom Boom Bumrah wants to play,
Rain, rain go away ☹️ https://t.co/gWVNDXlBEG
ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ. ಶಿಖರ್ ಧವನ್, ಜಸ್ಪ್ರೀತ್ ಬುಮ್ರಾ ತಂಡ ಕೂಡಿಕೊಂಡಿದ್ದಾರೆ. ಆದರೆ ಕನ್ನಡಿಗ ಮನೀಶ್ ಪಾಂಡೆ, ಸಂಜು ಸ್ಯಾಮ್ಸನ್ ಮತ್ತೊಮ್ಮೆ ಬೆಂಚ್ ಕಾಯಿಸಬೇಕಾಗಿದೆ.