Pink Ball Test: ಬುಮ್ರಾ ಬಿರುಗಾಳಿ, ಲಂಕಾ ಕೇವಲ 109 ರನ್‌ಗಳಿಗೆ ಆಲೌಟ್‌..!

Suvarna News   | Asianet News
Published : Mar 13, 2022, 02:36 PM ISTUpdated : Mar 13, 2022, 02:49 PM IST
Pink Ball Test: ಬುಮ್ರಾ ಬಿರುಗಾಳಿ, ಲಂಕಾ ಕೇವಲ 109 ರನ್‌ಗಳಿಗೆ ಆಲೌಟ್‌..!

ಸಾರಾಂಶ

* ಪಿಂಕ್ ಬಾಲ್ ಟೆಸ್ಟ್‌ ಪಂದ್ಯದಲ್ಲಿ 109 ರನ್‌ಗಳಿಗೆ ಶ್ರೀಲಂಕಾ ಆಲೌಟ್ * ಎರಡನೇ ದಿನ 23 ರನ್ ಸೇರಿಸಿ 4 ವಿಕೆಟ್ ಕಳೆದುಕೊಂಡ ಶ್ರೀಲಂಕಾ * ಭಾರತದಲ್ಲಿ ಮೊದಲ ಬಾರಿಗೆ 5 ವಿಕೆಟ್ ಕಬಳಿಸಿದ ಬುಮ್ರಾ

ಬೆಂಗಳೂರು(ಮಾ.13): ಭಾರತ ಹಾಗೂ ಶ್ರೀಲಂಕಾ ತಂಡಗಳ (India vs Sri Lanka) ನಡುವಿನ ಪಿಂಕ್‌ ಬಾಲ್‌ ಟೆಸ್ಟ್‌ (Pink Ball Test) ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಶ್ರೀಲಂಕಾ ತಂಡವು ಕೇವಲ 109 ರನ್‌ಗಳಿಗೆ ಸರ್ವಪತನ ಕಂಡಿದೆ. ಟೀಂ ಇಂಡಿಯಾ (Team India) ಮಾರಕ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ದಾಳಿಗೆ ಪ್ರವಾಸಿ ಲಂಕಾ ತಂಡವು ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ. ಇದರೊಂದಿಗೆ ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ 143 ರನ್‌ಗಳ ಮೊದಲ ಇನಿಂಗ್ಸ್‌ ಮುನ್ನಡೆ ಪಡೆದಿದೆ.

ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ಆರಂಭವಾಗಿರುವ ಪಿಂಕ್‌ ಬಾಲ್ ಟೆಸ್ಟ್‌ ಪಂದ್ಯದ ಮೊದಲ ದಿನವೇ ಉಭಯ ತಂಡಗಳ 16 ವಿಕೆಟ್‌ಗಳು ಪತನವಾಗಿದ್ದವು. ಮೊದಲ ದಿನದಾದಂತ್ಯಕ್ಕೆ ಶ್ರೀಲಂಕಾ ತಂಡವು 86 ರನ್‌ಗಳಿಗೆ 6 ವಿಕೆಟ್‌ ಕಳೆದುಕೊಂಡಿತ್ತು. ಇನ್ನು ಎರಡನೇ ದಿನದಾಟ ಆರಂಭಿಸಿದ ಲಂಕಾ ತಂಡಕ್ಕೆ ವೇಗಿ ಜಸ್ಪ್ರೀತ್ ಬುಮ್ರಾ ಆರಂಭದಲ್ಲೇ ಶಾಕ್ ನೀಡಿದರು. ಎರಡನೇ ದಿನದಾಟದಲ್ಲಿ ಬುಮ್ರಾ ತಾವೆಸೆದ ಎರಡನೇ ಓವರ್‌ನ ಎರಡನೇ ಓವರ್‌ನಲ್ಲೇ ಲಸಿತ್ ಎಂಬುಲ್ಡೇನಿಯಾ ಅವರನ್ನು ಪೆವಿಲಿಯನ್ನಿಗಟ್ಟುವ ಮೂಲಕ ಭಾರತಕ್ಕೆ ಮೊದಲ ಯಶಸ್ಸು ದಕ್ಕಿಸಿಕೊಟ್ಟರು. ಇದರ ಬೆನ್ನಲ್ಲೇ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ ಸರಂಗ ಲಕ್ಮಲ್ ಅವರನ್ನು ಕ್ಲೀನ್‌ ಬೌಲ್ಡ್‌ ಮಾಡುವ ಮೂಲಕ ಲಂಕಾ ಪಡೆಗೆ ಮತ್ತೊಂದು ಶಾಕ್ ನೀಡಿದರು.

ತವರಿನಲ್ಲಿ ಮೊದಲ ಬಾರಿಗೆ 5 ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ: ಟೀಂ ಇಂಡಿಯಾ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಇದುವರೆಗೂ 29 ಟೆಸ್ಟ್‌ ಪಂದ್ಯಗಳನ್ನಾಡಿದ್ದು, ಇದೇ ಮೊದಲ ಬಾರಿಗೆ ಭಾರತದಲ್ಲಿ ನಡೆದ ಟೆಸ್ಟ್‌ ಪಂದ್ಯವೊಂದರ ಇನಿಂಗ್ಸ್‌ನಲ್ಲಿ 5 ವಿಕೆಟ್‌ ಕಬಳಿಸಿದ ಸಾಧನೆ ಮಾಡಿದರು. ಇದುವರೆಗೂ ಬುಮ್ರಾ ವೆಸ್ಟ್ ಇಂಡೀಸ್‌, ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ನೆಲದಲ್ಲಿ ತಲಾ 2 ಬಾರಿ 5+ ವಿಕೆಟ್ ಕಬಳಿಸಿದ್ದಾರೆ. ಇನ್ನು ಆಸ್ಟ್ರೇಲಿಯಾ ನೆಲದಲ್ಲಿ ಒಮ್ಮೆ 5+ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದರು. ಇದೀಗ ವೃತ್ತಿಜೀವನದ 8ನೇ ಬಾರಿಗೆ ಟೆಸ್ಟ್‌ ಇನಿಂಗ್ಸ್‌ವೊಂದರಲ್ಲಿ 5+ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ.

Pink Ball Test: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಒಂದೇ ದಿನ 16 ವಿಕೆಟ್ ಪತನ..!

ಭಾರತ ವಿರುದ್ದ 2ನೇ ಕನಿಷ್ಠ ಸ್ಕೋರ್ ದಾಖಲಿಸಿದ ಶ್ರೀಲಂಕಾ: ಭಾರತ ವಿರುದ್ದ ಶ್ರೀಲಂಕಾ ತಂಡವು ಬೆಂಗಳೂರು ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಕೇವಲ 109 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ, ಟೀಂ ಇಂಡಿಯಾ ಎದುರು ಎರಡನೇ ಕನಿಷ್ಠ ಮೊತ್ತ ದಾಖಲಿಸಿದ ಅಪಖ್ಯಾತಿಗೆ ಒಳಗಾಗಿದೆ. 1990ರಲ್ಲಿ ಚಂಡೀಗಢದಲ್ಲಿ ನಡೆದ ಟೆಸ್ಟ್ ಪಂದ್ಯದ ವೇಳೆ ಶ್ರೀಲಂಕಾ ತಂಡವು ಕೇವಲ 82 ರನ್‌ಗಳಿಗೆ ಆಲೌಟ್ ಆಗಿತ್ತು. ಇದು ಭಾರತ ಎದುರು ಲಂಕಾ ತಂಡವು ಬಾರಿಸಿದ್ದ ಕನಿಷ್ಠ ಸ್ಕೋರ್ ಎನಿಸಿತ್ತು. ಇದಾದ ಬಳಿಕ 1994ರಲ್ಲಿ ಅಹಮದಬಾದ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ತಂಡವು 119 ರನ್‌ಗಳಿಗೆ ಆಲೌಟ್ ಆಗಿತ್ತು.

ಬೆಂಗಳೂರಿನಲ್ಲಿ ಆರಂಭವಾಗಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 252 ರನ್ ಬಾರಿಸಿ ಆಲೌಟ್ ಆಗಿತ್ತು. ಬೌಲಿಂಗ್‌ಗೆ ನೆರವಾಗುವ ಪಿಚ್‌ನಲ್ಲಿ ದಿಟ್ಟ ಬ್ಯಾಟಿಂಗ್ ನಡೆದ ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟರ್‌ ಶ್ರೇಯಸ್ ಅಯ್ಯರ್ ಆಕರ್ಷಕ 92 ರನ್ ಬಾರಿಸುವ ಮೂಲಕ ಭಾರತ ಕ್ರಿಕೆಟ್ ತಂಡವು ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ