ಋತುರಾಜ್ ಇನ್, ಜೈಸ್ವಾಲ್ ಔಟ್: ವೆಸ್ಟ್ ಇಂಡೀಸ್ ಎದುರಿನ ಮೊದಲ ಪಂದ್ಯ ಬಲಿಷ್ಠ ಭಾರತ ಸಂಭಾವ್ಯ ತಂಡ ಪ್ರಕಟ..!

Published : Sep 26, 2026, 05:24 PM IST
Team India

ಸಾರಾಂಶ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಕ್ರಿಕೆಟ್ ಸರಣಿ ಸೆಪ್ಟೆಂಬರ್ 27ರಂದು ಆರಂಭವಾಗಲಿದೆ. ಪ್ರಮುಖ ಆಟಗಾರರು ಏಷ್ಯನ್ ಗೇಮ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವುದರಿಂದ, ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಹೊಸ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ. ರವೀಂದ್ರ ಜಡೇಜಾ ಕಮ್‌ಬ್ಯಾಕ್ ಮಾಡಿದ್ದು, ಆಕಿಬ್ ನಬಿ ಪಾದಾರ್ಪಣೆ ಮಾಡುವ ನಿರೀಕ್ಷೆಯಿದೆ.

ಬೆಂಗಳೂರು: ಸುಮಾರು ಎರಡು ತಿಂಗಳ ಬಳಿಕ ಭಾರತ ಕ್ರಿಕೆಟ್ ತಂಡವು ಏಕದಿನ ಕ್ರಿಕೆಟ್ ಸರಣಿಯನ್ನಾಡಲು ಸಜ್ಜಾಗಿದೆ. ಇದೇ ಸೆಪ್ಟೆಂಬರ್ 27ರಂದು ಭಾರತ ತಂಡವು ತಿರುವನಂತಪುರಂನ ದಿ ಗ್ರೀನ್‌ಫೀಲ್ಡ್ ಸ್ಟೇಡಿಯಂನಲ್ಲಿ ವೆಸ್ಟ್‌ ಇಂಡೀಸ್ ತಂಡವನ್ನು ಎದುರಿಸಲಿದೆ. ಇದೀಗ ಎಲ್ಲರ ಕಣ್ಣು ಕ್ರಿಕೆಟ್ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮೇಲಿದೆ. ವೆಸ್ಟ್ ಇಂಡೀಸ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್‌ ಅವರ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿದೆ.

ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ ಹಾಗೂ ಜಸ್ಪ್ರೀತ್ ಬುಮ್ರಾ ಸೇರಿದಂತೆ ಹಲವು ಸ್ಟಾರ್ ಕ್ರಿಕೆಟಿಗರು ಸದ್ಯ ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಜಪಾನ್ ತೆರಳಿದ್ದಾರೆ. ಸೆಪ್ಟೆಂಬರ್ 28ರಿಂದ ಭಾರತ ಕ್ರಿಕೆಟ್ ತಂಡವು ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ. ಏಕಕಾಲದಲ್ಲಿ ಏಷ್ಯನ್ ಗೇಮ್ಸ್ ಹಾಗೂ ವೆಸ್ಟ್ ಇಂಡೀಸ್ ನಡುವಿನ ಸರಣಿ ನಡೆಯುತ್ತಿರುವುದರಿಂದ, ಇದೀಗ ವಿಂಡೀಸ್ ಎದುರಿನ ಸರಣಿಯಲ್ಲಿ ಭಾರತ ತಂಡದಲ್ಲಿ ನಾಲ್ಕು ಸ್ಥಾನಗಳು ಓಪನ್ ಆಗಿವೆ.

ಋತುರಾಜ್ ಗಾಯಕ್ವಾಡ್ ಇನ್; ಜೈಸ್ವಾಲ್ ಔಟ್

ವಿಂಡೀಸ್ ಎದುರಿನ ಸರಣಿಗೆ ಆಯ್ಕೆಯಾದ ಭಾರತ ತಂಡದಲ್ಲಿ ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಹಾಗೂ ಋತುರಾಜ್ ಗಾಯಕ್ವಾಡ್ ಸ್ಥಾನ ಪಡೆದುಕೊಂಡಿದ್ದಾರೆ. ಇದೀಗ ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಋತುರಾಜ್ ಗಾಯಕ್ವಾಡ್ ಸ್ಥಾನ ಪಡೆದುಕೊಳ್ಳುವುದು. ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್ ಇನ್ನಿಂಗ್ಸ್ ಆರಂಭಿಸಲಿದ್ದು, ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಋತುರಾಜ್ ಗಾಯಕ್ವಾಡ್‌ ಮೈದಾನಕ್ಕಿಳಿಯಲಿದ್ದಾರೆ. ಹೀಗಾದಲ್ಲಿ ಇಶಾನ್ ಕಿಶನ್‌ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಅನುಮಾನ.

ಇನ್ನು ಐದನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಕೆ ಎಲ್ ರಾಹುಲ್ ತಮ್ಮ ಸ್ಥಾನ ಉಳಿಸಿಕೊಳ್ಳಲಿದ್ದಾರೆ. ಹೀಗಾಗಿ ಧೃವ್ ಜುರೆಲ್, ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲು ಇನ್ನಷ್ಟು ಸಮಯ ಕಾಯಬೇಕಿದೆ. ಇನ್ನು ಇಂಗ್ಲೆಂಡ್‌ ಎದುರಿನ ಸರಣಿಯಲ್ಲಿ ಹೊರಗುಳಿದಿದ್ದ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಆರನೇ ಕ್ರಮಾಂಕದಲ್ಲಿ ಸ್ಥಾನ ಪಡೆಯಲಿದ್ದಾರೆ. ರವೀಂದ್ರ ಜಡೇಜಾ ಸುಮಾರು 9 ತಿಂಗಳ ಬಳಿಕ ಭಾರತ ಏಕದಿನ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದು, ಸ್ಪಿನ್ ಆಲ್ರೌಂಡರ್ ಆಗಿ ಭಾರತ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಹರ್ಷಿತ್ ರಾಣಾ ಗಾಯದಿಂದ ಸಂಪೂರ್ಣ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಆಕಿಬ್ ನಬಿಗೆ ಸ್ಥಾನ ಸಿಗುವ ಸಾಧ್ಯತೆಯಿದೆ. ನಬಿ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ಇನ್ನು ಅನುಭವಿ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ದ್ ಕೃಷ್ಣ ವೇಗದ ಬೌಲರ್ ಆಗಿ ಸ್ಥಾನ ಪಡೆಯಲಿದ್ದು, ಕುಲ್ದೀಪ್ ಯಾದವ್ ತಜ್ಞ ಸ್ಪಿನ್ನರ್ ಆಗಿ ತಂಡದಲ್ಲಿ ಸ್ಥಾನ ಪಡೆದುಕೊಳ್ಳಲಿದೆ.

ವೆಸ್ಟ್ ಇಂಡೀಸ್ ಎದುರಿನ ಮೊದಲ ಏಕದಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ:

ಶುಭ್‌ಮನ್ ಗಿಲ್(ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಋತುರಾಜ್ ಗಾಯಕ್ವಾಡ್‌, ಕೆ ಎಲ್ ರಾಹುಲ್(ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕೀಬ್ ನಬಿ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ದ್ ಕೃಷ್ಣ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಏಕದಿನ ಕ್ರಿಕೆಟ್‌ನಿಂದ ನಿವೃತ್ತಿ ದಿನಾಂಕ ಘೋಷಿಸಿದ ವಿರಾಟ್ ಕೊಹ್ಲಿ, ಅಭಿಮಾನಿಗಳು ಶಾಕ್
"ನನ್ನ ಪ್ರೀತಿಸ್ತೀಯ ಅಲ್ವಾ?": ರೋಹಿತ್ ಶರ್ಮಾ ವಾಲ್‌ಪೇಪರ್ ನೋಡಿ ಶಿಖರ್ ಧವನ್ ಹೆಂಡತಿ ಶಾಕ್!