ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಆತಿಥೇಯ ಟೀಂ ಇಂಡಿಯಾ ಮೊದಲ ಟೆಸ್ಟ್‌ನಲ್ಲಿ ಬಿಗಿ ಹಿಡಿತ ಸಾಧಿಸಿದೆ. ಮೂರನೇ ದಿನದಾಟದ ಪ್ರತಿಕ್ಷಣದ ಅಪ್ಡೇಟ್ ಇಲ್ಲಿದೆ ನೋಡಿ
01:49 PM (IST) Oct 04
ರವೀಂದ್ರ ಜಡೇಜಾ ಅವರ ಆಲ್ರೌಂಡ್ ಪ್ರದರ್ಶನ (ಅಜೇಯ 104 ರನ್ ಮತ್ತು 4 ವಿಕೆಟ್) ಹಾಗೂ ಮೊಹಮ್ಮದ್ ಸಿರಾಜ್ ಅವರ ಮಾರಕ ಬೌಲಿಂಗ್ ದಾಳಿಯ ನೆರವಿನಿಂದ, ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಇನ್ನಿಂಗ್ಸ್ ಹಾಗೂ 140 ರನ್‌ಗಳ ಭರ್ಜರಿ ಜಯ ಸಾಧಿಸಿದೆ.
01:06 PM (IST) Oct 04
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಗೆಲುವಿನತ್ತ ದಾಪುಗಾಲಿಡುತ್ತಿದೆ. 286 ರನ್‌ಗಳ ಬೃಹತ್ ಹಿನ್ನಡೆಯೊಂದಿಗೆ ಎರಡನೇ ಆರಂಭಿಸಿರುವ ವೆಸ್ಟ್ ಇಂಡೀಸ್ 98 ರನ್ ಗಳಿಸುವಷ್ಟರಲ್ಲಿ ಎಂಟು ವಿಕೆಟ್ ಕಳೆದುಕೊಂಡಿದೆ. ಸದ್ಯ ವಿಂಡೀಸ್ 188 ರನ್‌ಗಳ ಹಿನ್ನಡೆಯಲ್ಲಿದೆ.
Eyes on the target 👀🎯
Washington Sundar gets his 1️⃣st in the 2️⃣nd innings 🔥#TeamIndia 4️⃣ wickets away from victory!
Updates ▶ https://t.co/MNXdZceTab#INDvWI | @IDFCFIRSTBank | @Sundarwashi5 pic.twitter.com/WeeopmLih4
— BCCI (@BCCI) October 4, 2025
12:29 PM (IST) Oct 04
ಬೆಂಗಳೂರು: ವೆಸ್ಟ್ ಇಂಡೀಸ್ ಎದುರಿನ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಕೆ ಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿದು ಶತಕ ಸಿಡಿಸಿದ್ದಾರೆ. ಈ ಮೂಲಕ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ. ಬನ್ನಿ ನಾವಿಂದು ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ಟಾಪ್ - 6 ಭಾರತೀಯ ಓಪನ್ನರ್ಸ್ ಯಾರು ನೋಡೋಣ
11:40 AM (IST) Oct 04
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಅಹಮದಾಬಾದ್ ಟೆಸ್ಟ್‌ನಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ತಂಡವು ಇನ್ನಿಂಗ್ಸ್ ಸೋಲಿನತ್ತ ಮುಖಮಾಡಿದೆ. ಬರೋಬ್ಬರಿ 286 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ವೆಸ್ಟ್ ಇಂಡೀಸ್ ತಂಡವು ಮೂರನೇ ದಿನದಾಟದ ಲಂಚ್ ಬ್ರೇಕ್ ವೇಳೆಗೆ 66 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡಿದೆ. ಇನ್ನಿಂಗ್ಸ್ ಸೋಲಿನಿಂದ ಪಾರಾಗಲು ವೆಸ್ಟ್ ಇಂಡೀಸ್ ತಂಡವು ಇನ್ನೂ 221 ರನ್ ಬಾರಿಸಬೇಕಿದೆ.
10:55 AM (IST) Oct 04
ಬ್ಯಾಟಿಂಗ್‌ನಲ್ಲಿ ಅಜೇಯ ಶತಕ ಸಿಡಿಸಿ ಮಿಂಚಿರುವ ರವೀಂದ್ರ ಜಡೇಜಾ, ಇದೀಗ ಬೌಲಿಂಗ್‌ನಲ್ಲೂ ಮ್ಯಾಜಿಕ್ ಮಾಡುತ್ತಿದ್ದಾರೆ. ವೆಸ್ಟ್ ಇಂಡೀಸ್ ಬ್ಯಾಟರ್ ಬ್ರೆಂಡನ್ ಕಿಂಗ್ ಬಲಿ ಪಡೆಯುವಲ್ಲಿ ಜಡ್ಡು ಯಶಸ್ವಿಯಾಗಿದ್ದಾರೆ. ಇದರ ಬೆನ್ನಲ್ಲೇ ಕುಲ್ದೀಪ್ ಯಾದವ್ ವಿಂಡೀಸ್ ನಾಯಕ ರೋಸ್ಟನ್ ಚೇಸ್ ವಿಕೆಟ್ ಕಬಳಿಸಿದ್ದಾರೆ. ಸದ್ಯ ವೆಸ್ಟ್ ಇಂಡೀಸ್ ತಂಡವು 35 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡಿದೆ. ಈ ಮೂಲಕ ಇನ್ನೂ ವಿಂಡೀಸ್ 251 ರನ್‌ಗಳ ಹಿನ್ನಡೆಯಲ್ಲಿದೆ.
10:38 AM (IST) Oct 04
286 ರನ್‌ಗಳ ಭಾರೀ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ವೆಸ್ಟ್ ಇಂಡೀಸ್ ತಂಡವು ಆರಂಭಿಕ ಆಘಾತ ಅನುಭವಿಸಿದೆ. ವೆಸ್ಟ್ ಇಂಡೀಸ್ ತಂಡವು 24 ರನ್ ಗಳಿಸುವಷ್ಟರಲ್ಲಿ ಆರಂಭಿಕ ಬ್ಯಾಟರ್‌ಗಳಿಬ್ಬರೂ ಪೆವಿಲಿಯನ್ ಸೇರಿದ್ದಾರೆ. ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದೊಂದು ವಿಕೆಟ್ ಕಬಳಿಸಿದ್ದಾರೆ.
10:35 AM (IST) Oct 04
ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ, ವೆಸ್ಟ್ ಇಂಡಿಸ್ ಎದುರಿನ ಮೊದಲ ಟೆಸ್ಟ್‌ನಲ್ಲಿ 5 ವಿಕೆಟ್ ಕಳೆದುಕೊಂಡು 448 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 286 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ. ಮೂರನೇ ದಿನದಾಟ ಆರಂಭಕ್ಕೂ ಮೊದಲೇ ಭಾರತ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿದೆ.