Indian Cricket Team: 'ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ'; ಸುಳಿವು ನೀಡಿದ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್

Published : Oct 06, 2026, 04:12 PM IST
Morne Morkel

ಸಾರಾಂಶ

ಏಷ್ಯನ್ ಗೇಮ್ಸ್ ಗೆಲುವಿನ ನಂತರ ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನು ಲಕ್ನೋದಲ್ಲಿ ಆಡುತ್ತಿದೆ. ಆಟಗಾರರಿಗೆ ವಿಶ್ರಾಂತಿ ನೀಡಲು ಕೋಚ್ ಗೌತಮ್ ಗಂಭೀರ್ ರೊಟೇಷನ್ ಪಾಲಿಸಿ ಜಾರಿಗೆ ತರಲಿದ್ದಾರೆ ಎಂದು ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ತಿಳಿಸಿದ್ದಾರೆ. ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಎಂಬ ಕುತೂಹಲ ಮೂಡಿದೆ.

India vs West Indies 1st T20: 2026ರ ಏಷ್ಯನ್ ಗೇಮ್ಸ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ, ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡುತ್ತಿದೆ. ಇಂದು ಲಕ್ನೋದಲ್ಲಿ ಸರಣಿಯ ಮೊದಲ ಪಂದ್ಯ ನಡೆಯಲಿದೆ. ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು 19 ರನ್‌ಗಳಿಂದ ಮಣಿಸಿ ಚಿನ್ನ ಗೆದ್ದಿರುವ ಶ್ರೇಯಸ್ ಪಡೆ ಸಖತ್ ಕಾನ್ಫಿಡೆನ್ಸ್‌ನಲ್ಲಿದೆ. ಜೂನ್ ತಿಂಗಳಿನಿಂದ ಸತತ ಪಂದ್ಯಗಳನ್ನು ಆಡುತ್ತಿರುವ ಭಾರತೀಯ ಟಿ20 ತಂಡಕ್ಕೆ ಈ ವರ್ಷ ಸಿಕ್ಕಾಪಟ್ಟೆ ಬ್ಯುಸಿಯಾಗಿದೆ.

ರೊಟೇಷನ್ ಪಾಲಿಸಿ ಬಗ್ಗೆ ಮಾತಾಡಿದ ಮಾರ್ಕೆಲ್:

ವಿಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೂ ಮುನ್ನ ಮಾತನಾಡಿದ ಭಾರತದ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್, ಕೆಲ ಆಟಗಾರರಿಗೆ ವಿಶ್ರಾಂತಿ ನೀಡಲು ಹೆಡ್ ಕೋಚ್ ಗೌತಮ್ ಗಂಭೀರ್ ಹೊಸ ಕಾಂಬಿನೇಷನ್ ಟ್ರೈ ಮಾಡಬಹುದು ಎಂದಿದ್ದಾರೆ. ಮುಂಬರುವ ವಿಶ್ವಕಪ್‌ಗೆ ತಂಡವನ್ನು ಸಜ್ಜುಗೊಳಿಸುವ ಉದ್ದೇಶದಿಂದ ಪ್ಲೇಯಿಂಗ್ ಇಲೆವೆನ್ ಆಯ್ಕೆ ಮಾಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

'ಗೌತಮ್ ಖಂಡಿತವಾಗಿಯೂ ತಂಡದಲ್ಲಿ ರೊಟೇಷನ್ ಪಾಲಿಸಿ ತರುತ್ತಾರೆ. ಭಾರತಕ್ಕೆ ಗೆಲುವು ತಂದುಕೊಡಲು ಯಾವ ಪ್ಲೇಯಿಂಗ್ ಇಲೆವೆನ್ ಬೆಸ್ಟ್ ಎಂಬುದನ್ನು ಸೆಲೆಕ್ಟರ್ಸ್, ಕೋಚ್ ಹಾಗೂ ಕ್ಯಾಪ್ಟನ್ ಸೇರಿ ನಿರ್ಧರಿಸುತ್ತಾರೆ. ಅದೇ ನಮ್ಮ ಮುಖ್ಯ ಗುರಿ,' ಎಂದು ಮಾರ್ಕೆಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಯುವ ಆಟಗಾರ ವೈಭವ್ ಬಗ್ಗೆಯೂ ಮಾರ್ಕೆಲ್ ಮಾತನಾಡಿದರು. ಅಂತಾರಾಷ್ಟ್ರೀಯ ಆಟಗಾರರ ಜೊತೆ ಟ್ರೈನಿಂಗ್ ಮಾಡುವುದು ಹಾಗೂ ಸೀನಿಯರ್ಸ್ ಪಂದ್ಯಗಳನ್ನು ಹೇಗೆ ಎದುರಿಸುತ್ತಾರೆ ಎಂಬುದನ್ನು ಗಮನಿಸುವುದು ವೈಭವ್ ಬೆಳವಣಿಗೆಗೆ ತುಂಬಾ ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. 'ವೈಭವ್ ಟ್ಯಾಲೆಂಟ್ ಬಗ್ಗೆ ನಮಗೆಲ್ಲರಿಗೂ ಗೊತ್ತಿದೆ. ಕ್ವಾಲಿಟಿ ಆಟಗಾರರ ಜೊತೆ ಹೆಚ್ಚು ಸಮಯ ಕಳೆಯುವುದು ಆತನ ಕ್ರಿಕೆಟ್ ಕೆರಿಯರ್‌ಗೆ ಒಳ್ಳೆ ಆರಂಭ ಕೊಡಲಿದೆ,' ಎಂದು ಮಾರ್ಕೆಲ್ ವಿವರಿಸಿದರು.

ಚಂಡೀಗಢದಲ್ಲಿ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ಸೋತರೂ, ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಭಾರತ 2-1 ಅಂತರದಿಂದ ಗೆದ್ದುಕೊಂಡಿತ್ತು.

ಇಂದಿನಿಂದ ಭಾರತ-ವೆಸ್ಟ್‌ ಇಂಡೀಸ್ ಟಿ20 ಸರಣಿ ಆರಂಭ:

ಭಾರತ ಹಾಗೂ ವೆಸ್ಟ್‌ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯು ಇಂದಿನಿಂದ ಆರಂಭವಾಗಲಿದೆ. ಏಷ್ಯನ್ ಗೇಮ್ಸ್‌ನಲ್ಲಿ ಪಾಲ್ಗೊಂಡಿದ್ದ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಏಷ್ಯನ್ ಗೇಮ್ಸ್‌ನಲ್ಲಿ ಅಗ್ರಕ್ರಮಾಂಕದಲ್ಲಿ ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಕಣಕ್ಕಿಳಿದಿದ್ದರು. ಇಂದಿನ ಪಂದ್ಯದಲ್ಲಿ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಯಾರೆಲ್ಲಾ ಸ್ಥಾನ ಪಡೆಯಲಿದ್ದಾರೆ ಎನ್ನುವ ಕುತೂಹಲ ಜೋರಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಭಾರತೀಯ ಆಟಗಾರರ ಬಳಿ ಕ್ಷಮೆ ಕೇಳಲು ಪಟ್ಟು ಹಿಡಿದ ಪಾಕಿಸ್ತಾನ..! ಈಗ ಭಾರತ-ಪಾಕ್ ಮ್ಯಾಚ್ ರದ್ದು..!
ಐಪಿಎಲ್‌ಗೆ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿದ ಸೌರವ್ ಗಂಗೂಲಿ, ಮತ್ತೆ ದಾದಾಗಿರಿ ಆರಂಭ