ವಿಂಡೀಸ್ ವಿರುದ್ಧ ಸ್ಯಾಮ್ಸನ್, ವೈಭವ್, ಅಭಿಷೇಕ್ ಒಟ್ಟಿಗೆ ಆಡಲ್ಲ ಅಚ್ಚರಿ ಭವಿಷ್ಯ ನುಡಿದ ದಿನೇಶ್ ಕಾರ್ತಿಕ್..!

Published : Oct 05, 2026, 01:25 PM IST
Dinesh Karthik

ಸಾರಾಂಶ

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತದ ಬ್ಯಾಟಿಂಗ್ ಕ್ರಮಾಂಕ ಬದಲಾಗಲಿದೆ ಎಂದು ದಿನೇಶ್ ಕಾರ್ತಿಕ್ ಸುಳಿವು ನೀಡಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ ಆಡಿದ ಟಾಪ್ ಆರ್ಡರ್ ಜೋಡಿ ಮುಂದುವರಿಯುವ ಸಾಧ್ಯತೆಯಿಲ್ಲ ಮತ್ತು ತಂಡದಲ್ಲಿ ಹೆಚ್ಚು ವೇಗಿಗಳು ಇರಲಿದ್ದಾರೆ ಎಂದು ಅವರು ಹೇಳಿದ್ದಾರೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಅಕ್ಟೋಬರ್ 6ರಂದು ಈ ಸರಣಿ ಶುರುವಾಗಲಿದೆ.

ಚೆನ್ನೈ: ಏಷ್ಯನ್ ಗೇಮ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಟೀಂ ಇಂಡಿಯಾ ಈಗ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಸಜ್ಜಾಗುತ್ತಿದೆ. ಈ ಹೊತ್ತಲ್ಲೇ ಭಾರತದ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಮಾಜಿ ಆಟಗಾರ ದಿನೇಶ್ ಕಾರ್ತಿಕ್ ಮಹತ್ವದ ಸುಳಿವು ನೀಡಿದ್ದಾರೆ.

ವಿಂಡೀಸ್ ವಿರುದ್ಧದ ಸರಣಿಯಲ್ಲಿ ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ ಮತ್ತು ಸಂಜು ಸ್ಯಾಮ್ಸನ್ ಅವರ ಟಾಪ್ ಆರ್ಡರ್ ಜೋಡಿ ಮುಂದುವರಿಯುವ ಸಾಧ್ಯತೆಯಿಲ್ಲ ಎಂದು ಕಾರ್ತಿಕ್ ಸ್ಪಷ್ಟಪಡಿಸಿದ್ದಾರೆ. ಜಪಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಸ್ಪಿನ್ ಪಿಚ್‌ಗಳಿದ್ದ ಕಾರಣ ಭಾರತ ಕೇವಲ ಒಬ್ಬ ವೇಗಿಯನ್ನು ಮಾತ್ರ ಆಡಿಸಿತ್ತು. ಹೀಗಾಗಿ ಅಭಿಷೇಕ್ ಮತ್ತು ವೈಭವ್ ಓಪನಿಂಗ್ ಮಾಡಿದ್ದರು, ಸಂಜು ಸ್ಯಾಮ್ಸನ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆದರೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಟೀಮ್ ಕಾಂಬಿನೇಷನ್ ಬದಲಾಯಿಸಲೇಬೇಕಾಗುತ್ತದೆ ಎಂದು ಕ್ರಿಕ್‌ಬಜ್ ಜೊತೆಗಿನ ಮಾತುಕತೆಯಲ್ಲಿ ಕಾರ್ತಿಕ್ ಹೇಳಿದ್ದಾರೆ.

ದಿನೇಶ್ ಕಾರ್ತಿಕ್ ಅಚ್ಚರಿ ಭವಿಷ್ಯ:

"ಆ ಬ್ಯಾಟಿಂಗ್ ಕ್ರಮಾಂಕವನ್ನು ನಾವು ಇನ್ನು ಮುಂದೆ ಖಂಡಿತಾ ನೋಡಲು ಸಾಧ್ಯವಿಲ್ಲ. ಏಕೆಂದರೆ ಭಾರತದಲ್ಲಿ ಆಡುವಾಗ ನೀವು ತಂಡದಲ್ಲಿ ಹೆಚ್ಚು ವೇಗಿಗಳನ್ನು ಸೇರಿಸಿಕೊಳ್ಳಬೇಕಾಗುತ್ತದೆ. ಜಪಾನ್‌ನಲ್ಲಿ ನಾವು ಕೇವಲ ಒಬ್ಬ ತಜ್ಞ ವೇಗಿಯೊಂದಿಗೆ ಆಡಿದ್ದೆವು. ಆದರೆ ಇಲ್ಲಿ ಎರಡರಿಂದ ಮೂರು ವೇಗಿಗಳು ಬೇಕಾಗುತ್ತಾರೆ. ಹೀಗಾಗಿ ಅದೇ ಬ್ಯಾಟಿಂಗ್ ಲೈನ್-ಅಪ್ ಮುಂದುವರಿಸಲು ಸಾಧ್ಯವಿಲ್ಲ. ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಮುಂಬರುವ ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಇದು ಅವರಿಗೆ ರಿಲೀಫ್ ನೀಡಲಿದೆ. ಭಾರತ ತಂಡ ಸದ್ಯ ಟೆಸ್ಟ್ ಕ್ರಿಕೆಟ್‌ಗೆ ಹೆಚ್ಚು ಒತ್ತು ನೀಡುತ್ತಿದೆ. ಮುಂದಿನ ವಿಶ್ವಕಪ್‌ಗೆ ಇನ್ನೂ ಸಾಕಷ್ಟು ಸಮಯವಿರುವುದರಿಂದ ಟಿ20 ಈಗ ಅವರ ಮೊದಲ ಆದ್ಯತೆಯಲ್ಲ" ಎಂದು ದಿನೇಶ್ ಕಾರ್ತಿಕ್ ವಿವರಿಸಿದ್ದಾರೆ.

ಬುಮ್ರಾ ಅನುಪಸ್ಥಿತಿಯಲ್ಲಿ ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್ ಮತ್ತು ಮಯಾಂಕ್ ಯಾದವ್ ಜೊತೆಗೆ ಶಿವಂ ದುಬೆ ಹಾಗೂ ನಿತೀಶ್ ಕುಮಾರ್ ರೆಡ್ಡಿ ಭಾರತದ ಪೇಸ್ ವಿಭಾಗವನ್ನು ನಿಭಾಯಿಸಲಿದ್ದಾರೆ. ಅಕ್ಟೋಬರ್ 6ರಂದು ಲಕ್ನೋದಲ್ಲಿ ಐದು ಪಂದ್ಯಗಳ ಭಾರತ-ವೆಸ್ಟ್ ಇಂಡೀಸ್ ಟಿ20 ಸರಣಿ ಶುರುವಾಗಲಿದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಭಾರತ, ಸತತ ಒಂಬತ್ತು ಟಿ20 ಗೆಲುವುಗಳು ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ಗೆದ್ದು ಭಾರಿ ಆತ್ಮವಿಶ್ವಾಸದಲ್ಲಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ: 

ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಶಿವಂ ದುಬೆ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ನಮನ್ ಧೀರ್, ರವಿ ಬಿಷ್ಣೋಯ್, ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ಮಯಾಂಕ್ ಯಾದವ್.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

299 ರನ್, 4 ದ್ವಿಶತಕ, ಸಚಿನ್ ಜೊತೆ 400 ರನ್‌ಗಳ ಜೊತೆಯಾಟ... ಆದರೂ ಟೀಮ್ ಇಂಡಿಯಾಗೆ ಆಯ್ಕೆಯಾಗದ ದುರಾದೃಷ್ಟವಂತ!
ಶುಭ್‌ಮನ್ ಗಿಲ್, ಇಶಾನ್ ಕಿಶನ್ ಇಬ್ಬರೂ ಅಲ್ಲ, ಈತನೇ ಏಕದಿನ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿಯ ಉತ್ತರಾಧಿಕಾರಿ ಎಂದ ಟೀಂ ಇಂಡಿಯಾ ಲೆಜೆಂಡ್..!