
ನವದೆಹಲಿ (ಜು.27): ಟಿ20 ಕ್ರಿಕೆಟ್‌ನಲ್ಲಿ ಭಾರತೀಯ ಬ್ಯಾಟರ್‌ಗಳು ತಮ್ಮ ಆಕ್ರಮಣಕಾರಿ ಬ್ಯಾಟಿಂಗ್‌ನಿಂದ ಇಡೀ ವಿಶ್ವ ಕ್ರಿಕೆಟ್‌ನ್ನೇ ರಂಜಿಸುತ್ತಿದ್ದಾರೆ. ಒಂದು ಕ್ಯಾಲೆಂಡರ್ ವರ್ಷದಲ್ಲಿ ಸಿಕ್ಸರ್‌ಗಳ ಮಳೆ ಹರಿಸಿದ ಭಾರತದ ಸಿಕ್ಸರ್ ಕಿಂಗ್ಸ್ ಪಟ್ಟಿಯಲ್ಲಿ ಅಭಿಷೇಕ್ ಶರ್ಮಾ ಅಗ್ರಸ್ಥಾನದಲ್ಲಿದ್ದರೆ, ಯುವ ಉದಯೋನ್ಮುಖ ತಾರೆ ವೈಭವ್ ಸೂರ್ಯವಂಶಿ ಹಾಗೂ ಸೂರ್ಯಕುಮಾರ್ ಯಾದವ್ ಕೂಡ ಈ ರೇಸ್‌ನಲ್ಲಿದ್ದಾಋಏ. ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಹೆಚ್ಚು ಸಿಕ್ಸರ್ ಬಾರಿಸಿದ ಟಾಪ್ 6 ಭಾರತೀಯ ಆಟಗಾರರ ಪಟ್ಟಿ ಇಲ್ಲಿದೆ.
ವಿಶ್ವದ ನಂ. 2 ಟಿ20ಐ ಬ್ಯಾಟರ್ ಆಗಿರುವ ಅಭಿಷೇಕ್ ಶರ್ಮಾ, 2025 ರ ಋತುವಿನಲ್ಲಿ ಬರೋಬ್ಬರಿ 108 ಸಿಕ್ಸರ್‌ಗಳನ್ನು ಸಿಡಿಸಿ ಭಾರತೀಯ ದಾಖಲೆ ನಿರ್ಮಿಸಿದ್ದಾರೆ. ಅವರು ತಾವು ಎದುರಿಸಿದ ಪ್ರತಿ 7.35 ಎಸೆತಗಳಿಗೆ ಒಂದರಂತೆ ಸಿಕ್ಸರ್ ಬಾರಿಸಿರುವುದು ವಿಶೇಷ!
ಭಾರತ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬಿರುಸಿನ ಓಪನರ್ ಅಭಿಷೇಕ್ ಶರ್ಮಾ, 2024 ರ ಋತುವಿನಲ್ಲೂ ಸಿಕ್ಸರ್‌ಗಳ ಮಳೆ ಹರಿಸಿದ್ದರು. ಆ ವರ್ಷ ಅವರು 87 ಸಿಕ್ಸರ್‌ಗಳನ್ನು ಸಿಡಿಸಿದ್ದು, ಪ್ರತಿ 6.54 ಎಸೆತಗಳಿಗೆ ಒಂದು ಸಿಕ್ಸರ್ ಬಾರಿಸುವ ಅಸಾಧಾರಣ ಸ್ಟ್ರೈಕ್ ರೇಟ್ ಹೊಂದಿದ್ದರು.
ಕೇವಲ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ 2026 ರಲ್ಲಿ ಆಡಿದ ಟಿ20 ಕ್ರಿಕೆಟ್‌ನಲ್ಲಿ ಬರೋಬ್ಬರಿ 86 ಸಿಕ್ಸರ್‌ಗಳನ್ನು ಸಿಡಿಸಿ 3ನೇ ಸ್ಥಾನದಲ್ಲಿದ್ದಾರೆ. ಇವರು ಪ್ರತಿ 4.99 ಎಸೆತಕ್ಕೆ (ಸರಿಯಾಗಿ 5 ಎಸೆತಗಳಿಗಿಂತಲೂ ಕಡಿಮೆ) ಒಂದು ಸಿಕ್ಸರ್ ಸಿಡಿಸಿ ಅಚ್ಚರಿ ಮೂಡಿಸಿದ್ದಾರೆ. ಇತ್ತೀಚೆಗೆ ಜಿಂಬಾಬ್ವೆ ವಿರುದ್ಧದ 3 ಪಂದ್ಯಗಳಲ್ಲಿ 2 ಅರ್ಧಶತಕ ಸೇರಿದಂತೆ 151 ರನ್ ಗಳಿಸಿ 'ಪ್ಲೇಯರ್ ಆಫ್ ದಿ ಸೀರೀಸ್' ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ.
ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ '360 ಡಿಗ್ರಿ' ಖ್ಯಾತಿಯ ಸೂರ್ಯಕುಮಾರ್ ಯಾದವ್ 2022 ರ ಕ್ಯಾಲೆಂಡರ್ ವರ್ಷದಲ್ಲಿ ಒಟ್ಟು 85 ಸಿಕ್ಸರ್‌ಗಳನ್ನು ಚಚ್ಚಿದ್ದರು. ಅವರು ಪ್ರತಿ 10.04 ಎಸೆತಗಳಿಗೆ ಒಂದರಂತೆ ಸಿಕ್ಸ್ ಬಾರಿಸಿದ್ದರು.
ಅಭಿಷೇಕ್ ಶರ್ಮಾ ಅವರ ಬ್ಯಾಟಿಂಗ್ ಅಬ್ಬರ 2026 ರಲ್ಲೂ ಮುಂದುವರಿದಿದ್ದು, ಈ ವರ್ಷದಲ್ಲಿ ಈಗಾಗಲೇ 74 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಇವರು ಪ್ರತಿ 7.46 ಎಸೆತಗಳಲ್ಲಿ ಸಿಕ್ಸರ್ ಬಾರಿಸುತ್ತಿದ್ದರೂ, ಇತ್ತೀಚೆಗೆ ಜಿಂಬಾಬ್ವೆ ವಿರುದ್ಧ ನಡೆದ 3 ಪಂದ್ಯಗಳಲ್ಲಿ ಗಳಿಸಿದ್ದು ಕೇವಲ 11 ರನ್ ಮಾತ್ರ.
ವಿಶ್ವದ ನಂ. 1 ಟಿ20ಐ ಬ್ಯಾಟರ್ ಆಗಿರುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್, 2026 ರ ಪ್ರಸಕ್ತ ವರ್ಷದಲ್ಲಿ ಈಗಾಗಲೇ 73 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಅವರು ತಾವು ಎದುರಿಸಿದ ಪ್ರತಿ 10.8 ಎಸೆತಗಳಿಗೆ ಒಂದು ಸಿಕ್ಸರ್ ಸಿಡಿಸಿ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.