Rahul Dravid on Rishabh Pant: ರಿಷಭ್‌ ಪಂತ್‌ಗೆ ಕೋಚ್‌ ರಾಹುಲ್ ದ್ರಾವಿಡ್‌ ಕ್ಲಾಸ್‌..!

Suvarna News   | Asianet News
Published : Jan 08, 2022, 11:43 AM IST
Rahul Dravid on Rishabh Pant: ರಿಷಭ್‌ ಪಂತ್‌ಗೆ ಕೋಚ್‌ ರಾಹುಲ್ ದ್ರಾವಿಡ್‌ ಕ್ಲಾಸ್‌..!

ಸಾರಾಂಶ

* ಜೋಹಾನ್ಸ್‌ಬರ್ಗ್ ಟೆಸ್ಟ್ ಪಂದ್ಯದಲ್ಲಿ ಕೆಟ್ಟ ಹೊಡೆತಕ್ಕೆ ಯತ್ನಿಸಿ ವಿಕೆಟ್ ಕೈಚೆಲ್ಲಿದ್ದ ರಿಷಭ್ ಪಂತ್ * ಪಂತ್ ಆಟದ ಬಗ್ಗೆ ಕ್ರಿಕೆಟ್ ದಿಗ್ಗಜರಿಂದ ವ್ಯಾಪಕ ಟೀಕೆ * ಇದೀಗ ಪಂತ್ ಜತೆ ಮಾತನಾಡುವುದಾಗಿ ತಿಳಿಸಿದ ಕೋಚ್ ರಾಹುಲ್ ದ್ರಾವಿಡ್

ಜೋಹಾನ್ಸ್‌ಬರ್ಗ್(ಜ.08)‌: ಬೇಜವಾಬ್ದಾರಿ ಆಟದಿಂದಾಗಿ ಟೀಕೆಗೆ ಗುರಿಯಾಗಿರುವ ವಿಕೆಟ್‌ ಕೀಪರ್‌ ಬ್ಯಾಟರ್‌ ರಿಷಭ್‌ ಪಂತ್‌ (Rishabh Pant) ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನ ಕೋಚ್‌ ರಾಹುಲ್‌ ದ್ರಾವಿಡ್‌(Rahul Dravid), ಪಂತ್‌ ಜೊತೆ ಮಾತನಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ. ಜೋಹಾನ್ಸ್‌ಬರ್ಗ್ ಟೆಸ್ಟ್ (Johannesburg Test) ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಮಹತ್ವದ ಘಟ್ಟದಲ್ಲಿ ಶೂನ್ಯ ಸುತ್ತಿ ವಿಕೆಟ್ ಒಪ್ಪಿಸಿದ್ದರ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ (Sunil Gavaskar) ಕೂಡಾ ಪಂತ್ ಆಟದ ಶೈಲಿಗೆ ಕಿಡಿಕಾರಿದ್ದರು. ಜೋಹಾನ್ಸ್‌ಬರ್ಗ್‌ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್‌ಗಳ ಅಂತರದಲ್ಲಿ ಹರಿಣಗಳ ಪಡೆಗೆ ಶರಣಾಗಿತ್ತು.

ಇಲ್ಲಿನ ವಾಂಡರರ್ಸ್ ಮೈದಾನದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯ ರಹಾನೆ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಗಿದ್ದರು. ಆದರೆ ಈ ಇಬ್ಬರು ಆಟಗಾರರ ವಿಕೆಟ್ ಪತನದ ಬಳಿಕ ರಿಷಭ್ ಪಂತ್ ಹಾಗೂ ಹನುಮ ವಿಹಾರಿ ಅವರಿಂದ ಉತ್ತಮ ಜತೆಯಾಟವನ್ನು ನಿರೀಕ್ಷಿಸಲಾಗಿತ್ತು. ಹನುಮ ವಿಹಾರಿ (Hanuma Vihari) ಅಜೇಯ 40 ರನ್‌ ಬಾರಿಸುವ ಮೂಲಕ ತಮ್ಮ ಸ್ಥಾನಕ್ಕೆ ನ್ಯಾಯ ಒದಗಿಸುವ ಪ್ರಯತ್ನ ಮಾಡಿದ್ದರು. ಆದರೆ ರಿಷಭ್ ಪಂತ್ ಕೇವಲ 3 ಎಸೆತಗಳನ್ನು ಎದುರಿಸಿ ಕಗಿಸೋ ರಬಾಡ (Kagiso Rabada) ಬೌಲಿಂಗ್‌ನಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ವಿಕೆಟ್ ಕೀಪರ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್‌ ಬಳಿಕ ಮಾತನಾಡಿದ ಟೀಂ ಇಂಡಿಯಾ (Team India) ಹೆಡ್ ಕೋಚ್ ರಾಹುಲ್ ದ್ರಾವಿಡ್, ‘ರಿಷಭ್‌ ಓರ್ವ ಧನಾತ್ಮಕ ಆಟಗಾರ ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ಆಕ್ರಮಣಕಾರಿ ಆಟ ಹಲವು ಬಾರಿ ಅವರಿಗೆ ಯಶಸ್ಸನ್ನು ತಂದುಕೊಟ್ಟಿದೆ. ಯಾರೂ ಕೂಡಾ ಅವರಿಗೆ ಆಕ್ರಮಣಕಾರಿ ಆಟ ಬೇಡ ಎಂದು ಹೇಳುವುದಿಲ್ಲ. ಆದರೆ ಯಾವಾಗ ಹೇಗೆ ಆಡಬೇಕೆಂಬುದು ತಿಳಿದಿರಬೇಕು. ಯಾವ ರೀತಿಯ ಹೊಡೆತಗಳನ್ನು ಆಯ್ಕೆ ಮಾಡಬೇಕೆಂಬುದು ಮುಖ್ಯ. ಖಂಡಿತವಾಗಿಯೂ ಅವರೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ’ ಎಂದಿದ್ದಾರೆ. 

Ind vs SA: ಸ್ವಲ್ಪವಾದರೂ ಜವಾಬ್ದಾರಿಯಿರಬೇಕು: ಪಂತ್ ವಿರುದ್ದ ಕಿಡಿಕಾರಿದ ಗವಾಸ್ಕರ್‌..!

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ 4 ಇನ್ನಿಂಗ್ಸ್‌ಗಳಲ್ಲಿ ರಿಷಭ್ ಪಂತ್‌ ಕ್ರಮವಾಗಿ 8, 34, 17 ಮತ್ತು 0 ರನ್‌ ಗಳಿಸಿದ್ದಾರೆ. ಕಳೆದ ವರ್ಷದ ಮಾರ್ಚ್‌ನಿಂದೀಚೆಗೆ ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ಕೇವಲ ಒಂದು ಅರ್ಧಶತಕವನ್ನಷ್ಟೇ ಬಾರಿಸಿದ್ದಾರೆ. ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ಸುನಿಲ್ ಗವಾಸ್ಕರ್, ಮದನ್ ಲಾಲ್‌ ಸೇರಿದಂತೆ ಹಲವು ಕ್ರಿಕೆಟಿಗರು ಪಂತ್ ಬ್ಯಾಟಿಂಗ್ ಶೈಲಿಯ ಕುರಿತಂತೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು. ರಿಷಭ್ ಪಂತ್ ಪಂದ್ಯದಲ್ಲಿ ಕೊಂಚ ಜವಾಬ್ದಾರಿಯುತ ಪ್ರದರ್ಶನ ತೋರಬೇಕು ಎಂದಿದ್ದರು.

ಜೋಹಾನ್ಸ್‌ಬರ್ಗ್‌ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ಸೋಲು ಕಂಡ ಭಾರತ: 1992ರಿಂದೀಗೆ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಈ ಪಂದ್ಯಕ್ಕೂ ಮುನ್ನ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಿತ್ತು. ಈ ಪೈಕಿ 2 ಗೆಲುವು ಹಾಗೂ ಮೂರು ಡ್ರಾ ಸಾಧಿಸಿತ್ತು. ಆದರೆ ಹಂಗಾಮಿ ನಾಯಕ ಕೆ.ಎಲ್‌. ರಾಹುಲ್‌ (KL Rahul) ನಾಯಕತ್ವದ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ವಾಂಡರರ್ಸ್‌ ಮೈದಾನದಲ್ಲಿ ಟೆಸ್ಟ್ ಸೋಲಿನ ಕಹಿಯುಂಡಿದೆ. ಈ ಮೂಲಕ 3 ಪಂದ್ಯಗಳ ಫ್ರೀಡಂ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು ತಲಾ 1-1ರ ಸಮಬಲ ಸಾಧಿಸಿವೆ. ಸೆಂಚೂರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು. ಇದೀಗ ಮೂರನೇ ಹಾಗೂ ನಿರ್ಣಾಯಕ ಟೆಸ್ಟ್ ಪಂದ್ಯವು ಜನವರಿ 11ರಿಂದ ಕೇಪ್‌ಟೌನ್‌ನಲ್ಲಿ ಆರಂಭವಾಗಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ