ಈ ವರ್ಷವೂ ಏಷ್ಯಾ ಕಪ್‌ ಕ್ರಿಕೆಟ್‌ ನಡೆಯಲ್ಲ?

By Suvarna NewsFirst Published Jan 19, 2021, 9:12 AM IST
Highlights

2021ರ ಏಷ್ಯಾಕಪ್ ಕ್ರಿಕೆಟ್‌ ಟೂರ್ನಿಯಿಂದ ಟೀಂ ಇಂಡಿಯಾ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಯಾಕೆ ಹೀಗೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ನವದೆಹಲಿ(ಜ.19): ಈ ಬಾರಿಯೂ ಏಷ್ಯಾ ಕಪ್‌ ಕ್ರಿಕೆಟ್‌ ನಡೆಯುವ ಸಾಧ್ಯತೆ ಕ್ಷೀಣಿಸಿದೆ. ಒಂದೊಮ್ಮೆ ಏಷ್ಯಾ ಕಪ್‌ ನಡೆದರೆ, ಭಾರತ ತಂಡ ಪಂದ್ಯಾವಳಿಯಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. 

ಕೊರೋನಾ ಹಿನ್ನೆಲೆಯಲ್ಲಿ ಕಳೆದ ವರ್ಷ ನಡೆಯಬೇಕಿದ್ದ ಏಷ್ಯಾ ಕಪ್‌, ಈ ವರ್ಷಕ್ಕೆ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಆದರೆ ಇದೇ ವೇಳೆಗೆ ಐಸಿಸಿ ಉದ್ಘಾಟನಾ ಆವೃತ್ತಿಯ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.  ಭಾರತ ತಂಡ, ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೇರುವ ಸಾಧ್ಯತೆ ಹೆಚ್ಚಿದೆ. ಇದೇ ವೇಳೆ, ಏಷ್ಯಾಕಪ್‌ ಬದಲು ತವರಿನಲ್ಲಿ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್‌ ವಿರುದ್ಧ ಸರಣಿ ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ.

ಐಪಿಎಲ್ 2021: ಆಟಗಾರರ ಗೇಟ್‌ಪಾಸ್‌ಗೆ ಮೂರೇ ದಿನ ಬಾಕಿ; ಯಾವ ಫ್ರಾಂಚೈಸಿ ಬಳಿ ಎಷ್ಟು ಹಣವಿದೆ..?

ಒಂದು ವೇಳೆ ಏಷ್ಯಾಕಪ್‌ ಕಪ್ ಟೂರ್ನಿ ಈ ಬಾರಿ ಆಯೋಜನೆ ಆಗದಿದ್ದರೆ, ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ಗೆ ದೊಡ್ಡ ಹೊಡೆತ ಬೀಳುವ ಸಾಧ್ಯತೆಯಿದೆ. ಯಾಕೆಂದರೆ 2019ನೇ ಆವೃತ್ತಿಯ ಏಷ್ಯಾಕಪ್‌ ಟೂರ್ನಿಗೆ ಪಾಕಿಸ್ತಾನ ಆತಿಥ್ಯದ ಹಕ್ಕನ್ನು ಪಡೆದುಕೊಂಡಿತ್ತು. ಭಾರತ ತಂಡ ಪಾಕಿಸ್ತಾನ ಪ್ರವಾಸಕ್ಕೆ ಹಿಂದೇಟು ಹಾಕಿದ ಬೆನ್ನಲ್ಲೇ ಪಿಸಿಬಿ ಅಧ್ಯಕ್ಷ ಏಹಸಾನ್ ಮಣಿ ತಟಸ್ಥ ಸ್ಥಳ(ಯುಎಇ)ದಲ್ಲಿ ನಡೆಸಲು ತೀರ್ಮಾನಿಸಿದ್ದರು. ಇದಾದ ಬಳಿಕ ಶ್ರೀಲಂಕಾಗೆ ಏಷ್ಯಾಕಪ್‌ ಆಯೋಜಿಸಲು ತಮ್ಮ ಆತಿಥ್ಯದ ಹಕ್ಕನ್ನು ಪಿಸಿಬಿ ಬಿಟ್ಟುಕೊಟ್ಟಿತ್ತು. 
 

click me!