
ಕಾರವಾರ: ಬಾರ್ಬಡೋಸ್‌ನಲ್ಲಿ ಭಾರತ ತಂಡ ಟಿ20 ವಿಶ್ವಕಪ್ ಎತ್ತಿ ಹಿಡಿಯುತ್ತಿದ್ದಂತೆ ದೇಶಾದ್ಯಂತ ಸಂಭ್ರಮ ಮನೆ ಮಾಡಿತ್ತು. ಜತೆಗೆ ಕುಮಟಾದ ದಿವಗಿಯಲ್ಲಿ ವಿಶೇಷ ಸಡಗರ ಉಂಟಾಯಿತು. ದಿವಗಿಯ ಯುವಕನೊಬ್ಬ ವಿರಾಟ್, ರೋಹಿತ್, ಹಾರ್ದಿಕ್ ಮತ್ತಿತರ ಜತೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ರಾಘವೇಂದ್ರ ದಿವಗಿ, ಭಾರತ ತಂಡದ ಥೋಡೌನ್ ಸ್ಪೆಷಲಿಸ್ಟ್. 13 ವರ್ಷಗಳಿಂದ ಭಾರತೀಯ ತಂಡದ ಬೆನ್ನೆಲುಬಾಗಿ ಎಲ್ಲ ಬ್ಯಾಟ್ಸ್ ಮನ್ ಗಳಿಗೂ ಬಾಲ್ ಎಸೆದು ಅವರಲ್ಲಿರುವ ಪ್ರತಿಭೆ ಯನ್ನು ಇನ್ನಷ್ಟು ಗಟ್ಟಿಗೊಳಿಸಿದ ಯುವಕ. ಭಾರತೀಯ ಕ್ರಿಕೆಟ್ ಆಟಗಾರರು ಆ ಮಾಡುವಾಗ ರಾಘವೇಂದ್ರ ದಿವಗಿ ಇರಲೇಬೇಕು. ಎಲ್ಲ ವಿಧದಲ್ಲೂ ಬಿರುಗಾಳಿ ವೇಗದಲ್ಲಿ ಚೆಂಡನ್ನು ಎಸೆಯುತಿದ್ದರೆ ಈ ಸವಾಲನ್ನು ಸ್ವೀಕರಿಸಿ ಕೊಹ್ಲಿ, ರೋಹಿತ್, ಧೋನಿ, ತೆಂಡೂಲ್ಕರ್ ಮತ್ತಿತರರು ಚೆಂಡನ್ನು ಸಿಕ್ಸರ್, ಬೌಂಡರಿಗೆ ಅಟ್ಟುವ ಕಲೆ ಕರಗತ ಮಾಡಿಕೊಂಡರು. ಹೀಗಾಗಿ ಭಾರತೀಯ ಬ್ಯಾ ಟ್ಸ್‌ಮನ್‌ಗಳು ಯಾವುದೇ ದೇಶದ ಬೌಲರ್‌ನನ್ನೂ ಸಲೀಸಾಗಿ ಎದುರಿಸುವಂತಾಗಿದೆ.
ಟೀಂ ಇಂಡಿಯಾಕ್ಕೆ ಶೀಘ್ರವೇ ಹೊಸ ಕೋಚ್, ಟಿ20 ನಾಯಕ ನೇಮಕ: ಜಯ್ ಶಾ
ಈಗ ಟಿ20 ವಿಶ್ವಕಪ್ ಭಾರತಕ್ಕೆ ಒಲಿಯುತ್ತಿದ್ದಂತೆ ಸಾಮಾಜಿಕ ಜಾಲತಾಣಗಲ್ಲಿ ವಿರಾಟ್ ಕೊಹ್ಲಿ ಜತೆ ರಾಘವೇಂದ್ರ ಕಪ್ ಎತ್ತಿ ಹಿಡಿದ, ರೋಹಿತ್ ಜತೆ ಸಂಭ್ರಮಿಸುತ್ತಿರುವ, ಇತರ ಆಟಗಾರರರೊಂದಿಗೆ ಸಂತಸ ಹಂಚಿಕೊಳ್ಳುತ್ತಿರುವ ಫೋಟೋಗಳು ವೈರಲ್ ಆಗಿವೆ.
ಭಾರತ ತಂಡ ಸೇರಿದ್ದು ಹೇಗೆ?: ಕ್ರಿಕೆಟ್ ಹುಚ್ಚಿನಿಂದ ರಾಘವೇಂದ್ರ ದಿವಗಿ ಅವರು ಮನೆ ಬಿಟ್ಟು ಹುಬ್ಬಳ್ಳಿಗೆ ತೆರಳಿ ಅಲ್ಲಿನ ಕ್ರಿಕೆಟಿಗರಿಗೆ ಅಭ್ಯಾಸಕ್ಕೆ ನೆರವಾಗು ತ್ತಿದ್ದರು. ನಂತರ ಪರಿಚಿತರೊಬ್ಬರ ಮೂಲಕ ಬೆಂಗಳೂರಿಗೆ ತೆರಳಿದರು. ಅಲ್ಲೂ ಅದೇ ಕೆಲಸಮುಂದುವರಿಸಿದರು. ಇವರ ಚುರುಕಾದ ಕೆಲಸವನ್ನು ಜಾವಗಲ್ ಶ್ರೀನಾಥ್ ಗಮನಕ್ಕೆ ತಂದರು. ಶ್ರೀನಾಥ್ ರಣಜಿ ತಂಡದ ಜತೆ ಇರುವಂತೆ ಸೂಚಿಸಿದರು.
ಅಲ್ಲೇ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಸೇರಿದರು.
ಇವರ ಪ್ರತಿಭೆ ಗುರುತಿಸಿದ ಸಚಿನ್ ತೆಂಡುಲ್ಕರ್ 2011ರಲ್ಲಿ ಭಾರತ ತಂಡಕ್ಕೆ ಸಹಾಯಕ ಸಿಬ್ಬಂದಿಯಾಗಿ ಸೇರಿಸಿದರು. ಅಲ್ಲಿಂದ ಇಲ್ಲಿನ ತನಕ ರಾಘವೇಂದ್ರ ಭಾರತೀಯ ತಂಡದ ಕಾಯಂ ಸದಸ್ಯರಾ ಗಿದ್ದಾರೆ. ರಾಘವೇಂದ್ರ ಮಷಿನ್‌ನಲ್ಲಿ ಚೆಂಡನ್ನು ಎಸೆಯುವ ಕಲೆಯನ್ನೂ ಕರಗತ ಮಾಡಿಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.