ಐಸಿಸಿ ಟೆಸ್ಟ್‌ ವಿಶ್ವಕಪ್‌ ಫೈನಲ್‌ಗೆ ಟೀಂ ಇಂಡಿಯಾ ಜೆರ್ಸಿ ಅನಾವರಣ!

Suvarna News   | Asianet News
Published : May 31, 2021, 09:40 AM IST
ಐಸಿಸಿ ಟೆಸ್ಟ್‌ ವಿಶ್ವಕಪ್‌ ಫೈನಲ್‌ಗೆ ಟೀಂ ಇಂಡಿಯಾ ಜೆರ್ಸಿ ಅನಾವರಣ!

ಸಾರಾಂಶ

* ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್‌ ವಿಶ್ವಕಪ್‌ಗೆ ದಿನಗಣನೆ ಆರಂಭ * ಜೂನ್‌ 18ರಿಂದ ಸೌಥಾಂಪ್ಟನ್‌ನಲ್ಲಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಆರಂಭ * ಫೈನಲ್‌ನಲ್ಲಿ 90ರ ದಶಕದ ರೆಟ್ರೋ ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ ಟೀಂ ಇಂಡಿಯಾ

ಮುಂಬೈ(ಮೇ.31): ಜೂನ್ 18ರಿಂದ ಸೌಥಾಂಪ್ಟನ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ಭಾರತ ತಂಡದ ಜೆರ್ಸಿ ಅನಾವರಣಗೊಂಡಿದೆ. 

ಟೀಂ ಇಂಡಿಯಾದ ಬ್ಯಾಟಿಂಗ್‌ ತಾರೆ ಚೇತೇಶ್ವರ್‌ ಪೂಜಾರ, ಸಾಮಾಜಿಕ ತಾಣಗಳಲ್ಲಿ ಜೆರ್ಸಿ ಪ್ರದರ್ಶನ ಮಾಡಿದ್ದಾರೆ. ಐಸಿಸಿ ಪಂದ್ಯವಾಗಿರುವ ಕಾರಣ, ಜೆರ್ಸಿ ಮೇಲೆ ಪ್ರಾಯೋಜಕರ ಹೆಸರಿನ ಬದಲಿಗೆ ಇಂಡಿಯಾ ಎಂದು ಮುದ್ರಿಸಲಾಗಿದೆ. ಈ ಮೊದಲು ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಸಹಾ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ನ ಸ್ವೆಟರ್‌ನೊಂದಿಗೆ ಫೋಸ್ ಕೊಟ್ಟಿದ್ದರು.

ಹೊಸ ಕಿಟ್‌ ರೆಡಿ ಇದೆ. ಮೈದಾನಕ್ಕಿಳಿಯಲು ಹಾತೊರೆಯುತ್ತಿದ್ದೇನೆ ಎಂದು ಟೀಂ ಇಂಡಿಯಾ ಟೆಸ್ಟ್‌ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇನ್ನು 14 ದಿನಗಳ ಕ್ವಾರಂಟೈನ್‌ನಲ್ಲಿರುವ ಚೇತೇಶ್ವರ್ ಪೂಜಾರ, ಹೋಟೆಲ್‌ ಕೊಠಡಿಯಲ್ಲೇ ಬ್ಯಾಟಿಂಗ್‌ ಅಭ್ಯಾಸ ನಡೆಸುತ್ತಿರುವಂತೆ ಫೋಸ್‌ ನೀಡಿದ್ದು, ಈ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಟೆಸ್ಟ್‌ ಚಾಂಪಿಯನ್‌ಶಿಪ್‌ ಡ್ರಾ/ ಟೈ ಆದ್ರೆ ಏನಾಗುತ್ತೆ? ಕುತೂಹಲಕ್ಕೆ ತೆರೆ ಎಳೆದ ಐಸಿಸಿ

ಸೌಥಾಂಪ್ಟನ್‌ನಲ್ಲಿ ನಡೆಯಲಿರುವ ಚೊಚ್ಚಲ ಆವೃತ್ತಿಯ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ನಂ.1 ಶ್ರೇಯಾಂಕಿತ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾವು, ಎರಡನೇ ಶ್ರೇಯಾಂಕಿತ ನ್ಯೂಜಿಲೆಂಡ್ ಎದುರು ಪ್ರಶಸ್ತಿಗಾಗಿ ಕಾದಾಡಲಿವೆ. ಒಂದು ವೇಳೆ ಪಂದ್ಯ ಡ್ರಾ ಅಥವಾ ಟೈ ಆದರೆ ಎರಡು ತಂಡಗಳನ್ನು ಜಂಟಿ ಚಾಂಪಿಯನ್ ಎಂದು ಘೋಷಿಸಲಾಗುವುದು ಎಂದು ಐಸಿಸಿ ತಿಳಿಸಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?