ಇಂಗ್ಲೆಂಡ್‌ನಲ್ಲಿ ಪೂರ್ಣ ಪ್ರಮಾಣದ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

By Suvarna NewsFirst Published Jun 11, 2021, 9:59 AM IST
Highlights

* ಇಂಗ್ಲೆಂಡ್‌ನಲ್ಲಿ ಪೂರ್ಣ ಪ್ರಮಾಣದ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

* ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ಸಿದ್ದತೆ ನಡೆಸುತ್ತಿರುವ ಟೀಂ ಇಂಡಿಯಾ

* ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ ಜೂನ್ 18ರಿಂದ ಆರಂಭ

ಸೌಥಾಂಪ್ಟನ್(ಜೂ.11)‌:ನ್ಯೂಜಿಲೆಂಡ್ ವಿರುದ್ದ ಜೂನ್ 18ರಿಂದ ಸೌಥಾಂಪ್ಟನ್‌ನಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯ ಆಡಲು ಇಲ್ಲಿಗೆ ಆಗಮಿಸಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಅಭ್ಯಾಸ ನಡೆಸಿತು.

ಬ್ರಿಟನ್‌ಗೆ ಆಗಮಿಸಿದ ಬಳಿಕ ಕ್ವಾರಂಟೈನ್ ಹಿನ್ನೆಲೆಯಲ್ಲಿ 5 ದಿನ ಪ್ರತ್ಯೇಕವಾಗಿ ಅಭ್ಯಾಸ ನಡೆಸಿದ ಟೀಂ ಇಂಡಿಯಾ ಆಟಗಾರರು, ಗುರುವಾರ(ಜೂ.10) ಇಲ್ಲಿನ ರೋಸ್‌ ಬೌಲ್‌ ಕ್ರೀಡಾಂಗಣದಲ್ಲಿ ಎಲ್ಲರೂ ಒಟ್ಟಾಗಿ ಅಭ್ಯಾಸ ನಡೆಸಿದರು. ಟೆಸ್ಟ್ ವಿಶ್ವಕಪ್ ಎಂದೇ ಬಿಂಬಿತವಾಗಿರುವ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯದಲ್ಲಿ ಬಲಿಷ್ಠ ಭಾರತ ತಂಡಕ್ಕೆ ಕೇನ್ ವಿಲಿಯಮ್ಸನ್‌ ನೇತೃತ್ವದ ನ್ಯೂಜಿಲೆಂಡ್ ಕ್ರಿಕೆಟ್ ತಂಡವು ಸವಾಲೊಡ್ಡಲಿದೆ.

ಇಂಗ್ಲೆಂಡ್‌ ಟೆಸ್ಟ್‌ ಸರಣಿಗೂ ಮುನ್ನ ಟೀಂ ಇಂಡಿಯಾ ಆಟಗಾರರಿಗೆ 20 ದಿನ ರಜೆ

We have had our first group training session and the intensity was high 🔥's 🇮🇳 preparations are on in full swing for the Final 🙌 pic.twitter.com/MkHwh5wAYp

— BCCI (@BCCI)

ಸದ್ಯ ನ್ಯೂಜಿಲೆಂಡ್ ತಂಡವು ಈಗಾಗಲೇ ಇಂಗ್ಲೆಂಡ್ ವಿರುದ್ದದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿದೆ. ಈ ಟೆಸ್ಟ್ ಸರಣಿಯು ಇಂಗ್ಲೆಂಡ್ ವಾತಾವರಣಕ್ಕೆ ಹೊಂದಿಕೊಳ್ಳಲು ಕಿವೀಸ್‌ ತಂಡಕ್ಕೆ ಹೆಚ್ಚು ಪ್ರಯೋಜನಕಾರಿಯಾಗಲಿದೆ. ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್‌ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿತ್ತು. ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 6 ಪ್ರಮುಖ ಆಟಗಾರರಿಗೆ ವಿಶ್ರಾಂತಿಯನ್ನು ನೀಡಿದೆ.

click me!