
ನವದೆಹಲಿ(ಜೂ.12): ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಭಾರತ ಕ್ರಿಕೆಟ್ ತಂಡ ಕೈಗೊಳ್ಳಬೇಕಿದ್ದ ಶ್ರೀಲಂಕಾ ಹಾಗೂ ಜಿಂಬಾಬ್ವೆ ಪ್ರವಾಸವನ್ನು ರದ್ದು ಮಾಡಿದೆ.
ಈ ಹಿಂದಿನ ನಿಗದಿಯಂತೆ ಟೀಂ ಇಂಡಿಯಾ ಜೂನ್ 24 ರಿಂದ ಲಂಕಾ ವಿರುದ್ಧ 3 ಏಕದಿನ ಹಾಗೂ 3 ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಬೇಕಿತ್ತು. ಇದಾದ ಬಳಿಕ ಆಗಸ್ಟ್ 22 ರಿಂದ ಜಿಂಬಾಬ್ವೆ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಬೇಕಿತ್ತು. ‘ಸದ್ಯದ ಪರಿಸ್ಥಿತಿಯಲ್ಲಿ ಪ್ರವಾಸ ಕೈಗೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಸರಣಿ ಆಡಲು ಬದ್ಧರಿದ್ದೇವೆ’ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಹೇಳಿದ್ದಾರೆ.
ಕೊರೋನಾ ಪರಿಸ್ಥಿತಿ ಹತೋಟಿಗೆ ಬಂದರಷ್ಟೇ ದೇಸಿ ಹಾಗೂ ಅಂತಾರಾಷ್ಟ್ರೀಯ ಟೂರ್ನಿ ಆಯೋಜಿಸುವ ಕುರಿತಂತೆ ಬಿಸಿಸಿಐ ತೀರ್ಮಾನ ತೆಗೆದುಕೊಳ್ಳಲಿದೆ. ಪರಿಸ್ಥಿತಿ ಬದಲಾಗುವುದರ ಕುರಿತಂತೆ ಬಿಸಿಸಿಐ ಆಶಾವಾದವನ್ನು ಹೊಂದಿದೆ ಎಂದು ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ.
ಈ ವರ್ಷ ಖಾಲಿ ಮೈದಾನದಲ್ಲಾದರೂ ಐಪಿಎಲ್ ನಡೆಸಿಯೇ ಸಿದ್ಧ: ಗಂಗೂಲಿ
ಕೊರೋನಾ ವೈರಸ್‌ನಿಂದಾಗಿ ದೇಶದಲ್ಲಿ ಕ್ರೀಡಾ ಚಟುವಟಿಕೆಗಳು ಸಂಪೂರ್ಣ ಸ್ತಬ್ಧವಾಗಿವೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಅರ್ಧದಲ್ಲೇ ರದ್ದಾಗಿತ್ತು. ಮಾರ್ಚ್ 12ರಂದು ನಡೆಯಬೇಕಿದ್ದ ಪಂದ್ಯ ಮಳೆಯಿಂದ ರದ್ದಾಗಿತ್ತು. ಇದಾಗಿ ಎರಡನೇ ಪಂದ್ಯಕ್ಕೂ ಮುನ್ನ ಕೊರೋನಾ ಭೀತಿಯಿಂದಾಗಿ ಸರಣಿ ಅರ್ಧಕ್ಕೆ ಮೊಟಕುಗೊಂಡಿತ್ತು. ಇದಾದ ಬಳಿಕ ದೇಶದಲ್ಲಿ ಮಾರ್ಚ್‌ನಿಂದ ಜೂನ್‌ವರೆಗೂ ಯಾವುದೇ ಕ್ರಿಕೆಟ್ ಪಂದ್ಯಗಳು ನಡೆದಿಲ್ಲ.
"
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.