ಲಾಹೋರ್‌ ಬಳಿಕ ಕರಾಚಿ ಮೈದಾನದಲ್ಲೂ ಭಾರತದ ಧ್ವಜ ಹಾರಾಟವಿಲ್ಲ!

Published : Feb 19, 2025, 10:37 AM ISTUpdated : Feb 19, 2025, 10:47 AM IST
ಲಾಹೋರ್‌ ಬಳಿಕ ಕರಾಚಿ ಮೈದಾನದಲ್ಲೂ ಭಾರತದ ಧ್ವಜ ಹಾರಾಟವಿಲ್ಲ!

ಸಾರಾಂಶ

ಚಾಂಪಿಯನ್ಸ್ ಟ್ರೋಫಿಗೆ ಕರಾಚಿ ಕ್ರೀಡಾಂಗಣ ಸಜ್ಜಾಗಿದ್ದು, ಭಾರತದ ಧ್ವಜ ಮಾತ್ರ ಪ್ರದರ್ಶನಗೊಂಡಿಲ್ಲ. ಇದು ವಿವಾದಕ್ಕೆ ಕಾರಣವಾಗಿದೆ. ಭಾರತ ಪಾಕ್ ಪ್ರವಾಸ ನಿರಾಕರಿಸಿದ್ದಕ್ಕೆ ಪ್ರತಿಯಾಗಿ ಪಿಸಿಬಿ ಈ ಕ್ರಮ ಕೈಗೊಂಡಿದೆ ಎಂಬ ಆರೋಪ ಕೇಳಿಬಂದಿದೆ. ಫೆಬ್ರವರಿ 19 ರಿಂದ ಟೂರ್ನಿ ಆರಂಭವಾಗಲಿದ್ದು, ಭಾರತ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಪಿಸಿಬಿ ಮುಖ್ಯಸ್ಥರು ತಮ್ಮ ದುಬಾರಿ ವಿಐಪಿ ಟಿಕೆಟ್‌ಗಳನ್ನು ಮಾರಾಟ ಮಾಡಿ ಆ ಹಣವನ್ನು ಪಿಸಿಬಿ ನಿಧಿಗೆ ನೀಡಲಿದ್ದಾರೆ.

ಕರಾಚಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ, ಪಾಕಿಸ್ತಾನದ ಕರಾಚಿ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತದ ತ್ರಿವರ್ಣ ಧ್ವಜ ಇಲ್ಲದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾಗವಹಿಸುವ ಎಲ್ಲಾ ತಂಡಗಳ ರಾಷ್ಟ್ರೀಯ ಧ್ವಜವನ್ನು ಕರಾಚಿ ಕ್ರೀಡಾಂಗಣದಲ್ಲಿ ಅಳವಡಿಸಲಾಗಿದೆ. ಆದರೆ ಭಾರತದ ತ್ರಿವರ್ಣ ಧ್ವಜ ಮಾತ್ರ ಕಾಣೆಯಾಗಿದ್ದು, ಇದು ಹೊಸ ವಿವಾದಕ್ಕೆ ಕಾರಣವಾಗಿದೆ. 

ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಭಾರತ ತಂಡ ಪಾಕ್‌ಗೆ ತೆರಳಲು ನಿರಾಕರಿಸಿದ್ದಕ್ಕೆ ಪಾಕ್‌ ಕ್ರಿಕೆಟ್‌ ಮಂಡಳಿ ಧ್ವಜ ಪ್ರದರ್ಶಿಸಿಲ್ಲ ಎಂದು ಹಲವರು ಕಿಡಿಕಾರಿದ್ದಾರೆ. ಇತ್ತೀಚೆಗಷ್ಟೇ ಲಾಹೋರ್‌ ಕ್ರೀಡಾಂಗಣದಲ್ಲೂ ಭಾರತದ ಧ್ವಜ ಹೊರತುಪಡಿಸಿ ಇತರೆಲ್ಲಾ ದೇಶಗಳ ಧ್ವಜ ಹಾರಾಡುತ್ತಿರುವ ವಿಡಿಯೋ ವೈರಲ್‌ ಆಗಿತ್ತು.

ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ: ರೋಚಕ ಕದನಕ್ಕೆ ಅಖಾಢ ಸಿದ್ಧ!

ಭಾರತ ಟೂರ್ನಿಯಲ್ಲಿ ಪಾಲ್ಗೊಂಡರೂ, ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಪಾಕ್‌ನಲ್ಲಿ ಟೂರ್ನಿ ನಿಗದಿಯಾಗಿದ್ದರೂ, ಅಲ್ಲಿಗೆ ತೆರಳಲು ನಿರಾಕರಿಸಿದ ಕಾರಣ ಹೈಬ್ರಿಡ್‌ ಮಾದರಿಯಲ್ಲಿ ಚಾಂಪಿಯನ್ಸ್‌ ಟ್ರೋಫಿ ಆಯೋಜನೆಗೊಳ್ಳಲಿವೆ.

9ನೇ ಆವೃತ್ತಿಯ ಐಸಿಸಿ ಚಾಂಪಿಯನ್ಸ್ ಟ್ರೋಫಿಯು ಫೆಬ್ರವರಿ 19ರಿಂದ ಆರಂಭವಾಗಲಿದೆ. ಜಗತ್ತಿನ 8 ಬಲಾಢ್ಯ ತಂಡಗಳು ಮಿನಿ ವಿಶ್ವಕಪ್ ಎಂದೇ ಕರೆಸಿಕೊಳ್ಳುವ ಚಾಂಪಿಯನ್ಸ್ ಟ್ರೋಫಿಗಾಗಿ ಕಾದಾಡಲಿವೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ತಲಾ ಎರಡು ಬಾರಿ ಚಾಂಪಿಯನ್ಸ್ ಟ್ರೋಫಿ ಜಯಿಸುವ ಮೂಲಕ ಜಂಟಿ ಅಗ್ರಸ್ಥಾನದಲ್ಲಿವೆ. ಇನ್ನುಳಿದಂತೆ ಶ್ರೀಲಂಕಾ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ತಲಾ ಒಮ್ಮೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿವೆ.

ಪ್ರೇಕ್ಷಕರ ಜೊತೆ ಪಂದ್ಯ ವೀಕ್ಷಿಸಲು ₹94 ಲಕ್ಷದ ವಿಐಪಿ ಟಿಕೆಟ್ ಮಾರಾಟ ಮಾಡಿದ ಪಿಸಿಬಿ ಅಧ್ಯಕ್ಷ!

ಕರಾಚಿ: ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವನ್ನು ಪ್ರೇಕ್ಷಕರ ಜೊತೆ ಸ್ಟ್ಯಾಂಡ್‌ನಲ್ಲಿ ಕುಳಿತು ವೀಕ್ಷಿಸುವುದಕ್ಕಾಗಿ ಪಾಕ್‌ ಕ್ರಿಕೆಟ್‌ ಮಂಡಳಿ(ಪಿಸಿಬಿ) ಮುಖ್ಯಸ್ಥ ಮೊಹ್ಸಿನ್‌ ನಖ್ವಿ ತಮಗೆ ಲಭಿಸಿದ್ದ ದುಬಾರಿ ವಿಐಪಿ ಟಿಕೆಟ್‌ಗಳನ್ನು ಮಾರಾಟ ಮಾಡಲು ನಿರ್ಧರಿಸಿದ್ದಾರೆ. 

ಐಸಿಸಿ ಚಾಂಪಿಯನ್ಸ್‌ ಟ್ರೋಫಿ: ಭಾರತದ ಜೆರ್ಸಿಯಲ್ಲಿ ‘ಪಾಕಿಸ್ತಾನ’ ಹೆಸರು!

ದುಬೈ ಕ್ರೀಡಾಂಗಣದಲ್ಲಿ ಅತ್ಯುತ್ತಮ ಸೌಲಭ್ಯಗಳಿರುವ, ಸುಮಾರು 4,00,000 ದಿರ್ಹಮ್‌(94 ಲಕ್ಷ ರು.) ಮೌಲ್ಯದ ಒಟ್ಟು 30 ವಿಐಪಿ ಟಿಕೆಟ್‌ಅನ್ನು ಪಿಸಿಬಿ ಮುಖ್ಯಸ್ಥರಿಗೆ ನೀಡಲಾಗಿತ್ತು. ಅವರಿಗೆ ತಮ್ಮ ಕುಟುಂಬಸ್ಥರು, ಆಪ್ತರೊಂದಿಗೆ ಕುಳಿತು ವಿಐಪಿ ಬಾಕ್ಸ್‌ನಲ್ಲಿ ಕುಳಿತು ಪಂದ್ಯ ವೀಕ್ಷಿಸಬಹುದಾಗಿತ್ತು. ಆದರೆ ಅಭಿಮಾನಿಗಳು ತಮ್ಮ ತಂಡವನ್ನು ಹೇಗೆ ಹುರಿದುಂಬಿಸುತ್ತಾರೆ ಎಂಬುದನ್ನು ಹತ್ತಿರದಿಂದ ನೋಡಲು ಸ್ವತಃ ತಾವೇ ಸ್ಟ್ಯಾಂಡ್‌ನಲ್ಲಿ ಕುಳಿತು ಪಂದ್ಯ ವೀಕ್ಷಿಸಲು ನಿರ್ಧರಿಸಿದ್ದಾರೆ. ಅಲ್ಲದೆ, ಟಿಕೆಟ್‌ನ ಹಣವನ್ನು ಪಿಸಿಬಿ ನಿಧಿಗೆ ನೀಡುವುದಾಗಿ ತಿಳಿಸಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಯಾವ ಭಾರತೀಯನೂ ಮಾಡದ ಅಪರೂಪದ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ!
ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ