ಕೊರೋನಾ ವೈರಸ್ ಟೀಂ ಇಂಡಿಯಾ ಮಹಿಳಾ ಆಟಗಾರ್ತಿ ವೇದಾ ಕೃಷ್ಣಮೂರ್ತಿ ತಾಯಿಯನ್ನು ಬಲಿ ಪಡೆದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಕಡೂರು(ಏ.24): ಕೊರೋನಾ ವೈರಸ್ ಅಟ್ಟಹಾಸಕ್ಕೆ ಭಾರತ ಕ್ರಿಕೆಟ್ ತಂಡದ ಮಹಿಳಾ ಆಟಗಾರ್ತಿ ವೇದಾ ಕೃಷ್ಣಮೂರ್ತಿ ತಾಯಿ ಚಲುವಾಂಬ ಬಲಿಯಾಗಿದ್ದಾರೆ. ವೇದಾ ತಾಯಿ ಚಲುವಾಂಬ ಅವರಿಗೆ 63 ವರ್ಷ ವಯಸ್ಸಾಗಿತ್ತು.
ವೇದಾ ಕೃಷ್ಣಮೂರ್ತಿ ಅವರ ಪೋಷಕರು ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿಯಾಗಿದ್ದು, ಚಲುವಾಂಬ ಅವರನ್ನು 4 ದಿನಗಳ ಹಿಂದಷ್ಟೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕಡೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ಚಲುವಾಂಬ ಕೊನೆಯುಸಿರೆಳೆದಿದ್ದಾರೆ.
ಪಡಿಕ್ಕಲ್ ಸದ್ಯದಲ್ಲೇ ಟೀಂ ಇಂಡಿಯಾ ಪ್ರತಿನಿಧಿಸಿದರೆ ಆಚ್ಚರಿಪಡುವಂತದ್ದೇನಿಲ್ಲ: ಗವಾಸ್ಕರ್
Cricketer Veda Krishnamurthy Lost Her Dear Mother. Please Pray For The Departed Soul 😢
Posted by Irfan Sait on Friday, April 23, 2021
ಕಾಫಿಯ ನಾಡು ಚಿಕ್ಕಮಗಳೂರು ಕೋವಿಡ್ ಹಾಟ್ ಸ್ಪಾಟ್ ಆಗುತ್ತಿದೆಯೇ ಎನ್ನುವ ಅನುಮಾನ ಶುರುವಾಗಿದೆ. ಶುಕ್ರವಾರ ಒಂದೇ ದಿನ ಜಿಲ್ಲೆಯಲ್ಲಿ 229 ಹೊಸ ಕೊರೋನಾ ಕೇಸ್‌ಗಳು ದೃಢಪಟ್ಟಿವೆ. ಈವರೆಗೂ ಜಿಲ್ಲೆಯಲ್ಲಿ 144 ಮಂದಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೋವಿಡ್ ವಿರುದ್ಧ ಹೋರಾಡೋಣ; ಪ್ಲಾಸ್ಮಾ ದಾನ ಮಾಡಿ ಜೀವ ಉಳಿಸೋಣ