
ಟಾಂಟನ್(ಜೂ.30): ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್‌ಗಳ ಸೋಲು ಕಂಡಿದ್ದ ಮಿಥಾಲಿ ಭಾರತ ಮಹಿಳಾ ಕ್ರಿಕೆಟ್ ತಂಡ, ಇಂಗ್ಲೆಂಡ್ ವಿರುದ್ಧ ಬುಧವಾರ 2ನೇ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು ಸರಣಿ ಸೋಲು ತಪ್ಪಿಸಿಕೊಳ್ಳಲು ಹೋರಾಡಲಿದೆ.
ಇಂಗ್ಲೆಂಡ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟರ್‌ಗಳಾದ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಸ್ಪೋಟಕ ಆರಂಭ ಒದಗಿಸುವಲ್ಲಿ ವಿಫಲರಾಗಿದ್ದರು. ಮಿಥಾಲಿ ರಾಜ್ ಹೊರತು ಪಡಿಸಿದಂತೆ ಉಳಿದ್ಯಾವ ಬ್ಯಾಟರ್‌ಗಳು ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ತೋರಲು ಸಫಲರಾಗಿರಲಿಲ್ಲ. ಮಿಥಾಲಿ ಪಡೆ ನೀಡಿದ್ದ ಕೇವಲ 201 ರನ್‌ಗಳ ಗುರಿ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಪಾಲಿಗೆ ಸವಾಲೆನಿಸಲೇ ಇಲ್ಲ.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಆತಿಥೇಯ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡವು ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಇನ್ನೊಂದು ಕಡೆ ಮಿಥಾಲಿ ರಾಜ್ ನೇತೃತ್ವದ ಭಾರತ ತಂಡವು ಆತಿಥೇಯರಿಗೆ ತಿರುಗೇಟು ನೀಡುವ ಕನವರಿಕೆಯಲ್ಲಿದೆ. 2022ರ ಏಕದಿನ ವಿಶ್ವಕಪ್‌ಗೆ ತಯಾರಿ ನಡೆಸುತ್ತಿರುವ ಮಿಥಾಲಿ ರಾಜ್ ಪಡೆ ಈ ಪಂದ್ಯದಲ್ಲಿ ಸುಧಾರಿತ ಪ್ರದರ್ಶನ ತೋರಬೇಕಿದೆ.
ಮಿಥಾಲಿ ರಾಜ್ ಅರ್ಧಶತಕ ವ್ಯರ್ಥ: ಇಂಗ್ಲೆಂಡ್ ಎದುರು ಭಾರತಕ್ಕೆ ಹೀನಾಯ ಸೋಲು
5ನೇ ಸ್ಥಾನಕ್ಕೇರಿದ ಮಿಥಾಲಿ: ಐಸಿಸಿ ಮಹಿಳಾ ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್ ಪಟ್ಟಿ ಪರಿಷ್ಕೃತಗೊಂಡಿದ್ದು, ಇಂಗ್ಲೆಂಡ್ ವಿರುದ್ಧ ಮೊದಲ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ಮಿಥಾಲಿ ರಾಜ್ ಅಗ್ರ 5ರಲ್ಲಿ ಮತ್ತೆ ಸ್ಥಾನ ಪಡೆದಿದ್ದಾರೆ. ಸದ್ಯ ಭಾರತೀಯ ನಾಯಕಿ 5ನೇ ಸ್ಥಾನದಲ್ಲಿದ್ದಾರೆ.
ಪಂದ್ಯ ಆರಂಭ: ಸಂಜೆ 6.30ಕ್ಕೆ
ಸ್ಥಳ: ಟಾಂಟನ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.