ವರ್ಷಾಂತ್ಯಕ್ಕೆ ಮಿಥಾಲಿ ಪಡೆ ಆಸ್ಪ್ರೇಲಿಯಾ ಪ್ರವಾಸ ಪ್ರವಾಸ

By Suvarna NewsFirst Published Mar 16, 2021, 9:14 AM IST
Highlights

ಮಿಥಾಲಿ ರಾಜ್‌ ನೇತೃತ್ವದ ಭಾರತ ಮಹಿಳಾ ಏಕದಿನ ಕ್ರಿಕೆಟ್‌ ತಂಡ ಈ ವರ್ಷಾಂತ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಮಾ.16): ಮುಂದಿನ ವರ್ಷ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ಗೆ ಸಿದ್ಧತೆ ನಡೆಸುವ ಸಲುವಾಗಿ, ಈ ವರ್ಷಾಂತ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್‌ ತಂಡ ಆಸ್ಪ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ಪ್ರವಾಸ ಕೈಗೊಳ್ಳಲಿದೆ. 

ಇತ್ತೀಚೆಗೆ ನಡೆದ ಸಭೆಯಲ್ಲಿ ಬಿಸಿಸಿಐ ಈ ವಿಷಯವನ್ನು ನಿರ್ಧರಿಸಿತು. ಕೋವಿಡ್ ಕಾರಣದಿಂದಾಗಿ 2020ರಲ್ಲಿ ಮಿಥಾಲಿ ರಾಜ್‌ ಪಡೆ ಒಂದೇ ಒಂದು ಅಂತಾರಾಷ್ಟ್ರೀಯ ಏಕದಿನ ಪಂದ್ಯವನ್ನಾಡಿರಲಿಲ್ಲ. 2022ರ ಮಾರ್ಚ್ 4ರಿಂದ ಏಪ್ರಿಲ್ 3ರ ವರೆಗೂ ನ್ಯೂಜಿಲೆಂಡ್‌ನಲ್ಲಿ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಒಟ್ಟು 8 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.

ನಾವು ಪುರುಷರ ಕ್ರಿಕೆಟಿಗರಿಗೆ ನೀಡಿದಷ್ಟೇ ಮಹತ್ವವನ್ನು ನಮ್ಮ ಮಹಿಳಾ ಕ್ರಿಕೆಟ್ ತಂಡಕ್ಕೆ ನೀಡುತ್ತೇವೆ. 6 ಬಳಿಕ ಮೊದಲ ಬಾರಿಗೆ ನಮ್ಮ ಮಹಿಳಾ ತಂಡ ಇಂಗ್ಲೆಂಡ್‌ನಲ್ಲಿ ಮೊದಲ ಟೆಸ್ಟ್‌ ಪಂದ್ಯವನ್ನು ಆಡಲಿದೆ. ಅದಾದ ಬಳಿಕ ನಾವು ಏಕದಿನ ವಿಶ್ವಕಪ್‌ ಆರಂಭಕ್ಕೂ ಮುನ್ನ ಎರಡು ವಿದೇಶಿ ಪ್ರವಾಸ ಕೈಗೊಳ್ಳಲಿದ್ದೇವೆ. ನಮ್ಮ ಮಹಿಳಾ ತಂಡ ವಿದೇಶಿ ಸರಣಿಗೆ ಸಿದ್ದವಾಗಿದೆ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ.

ಪೂನಂ ಶತಕ ವ್ಯರ್ಥ, ಏಕದಿನ ಸರಣಿ ಹರಿಣಗಳು ಪಾಲು..!

ಮಿಥಾಲಿ ರಾಜ್‌ ನೇತೃತ್ವದ ಭಾರತ ಮಹಿಳಾ ತಂಡ ಸದ್ಯ ತವರಿನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಸೋಲಿನ ಕಹಿಯುಂಡಿದೆ. 5 ಪಂದ್ಯಗಳ ಏಕದಿನ ಸರಣಿಯ ಪೈಕಿ 4 ಪಂದ್ಯಗಳು ಮುಕ್ತಾಯವಾಗಿದ್ದು, ದಕ್ಷಿಣ ಆಫ್ರಿಕಾ ಮಹಿಳಾ ಕ್ರಿಕೆಟ್ ತಂಡ 3-1 ಅಂತರದಲ್ಲಿ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.  

click me!